ದೆಹಲಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ: ಸೋನಿಯಾ ಗಾಂಧಿ ಭೇಟಿ, ಒಂದೂವರೆ ಗಂಟೆಗೂ ಹೆಚ್ಚು ಕಾಲ ಚರ್ಚೆ
ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ವಿರೋಧ ಪಕ್ಷಧ ನಾಯಕ ಸಿದ್ದರಾಮಯ್ಯ ಅವರು ದೆಹಲಿಗೆ ಮಂಗಳವಾರ ಭೇಟಿ ನೀಡಿದ್ದು, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಿದ್ದಾರೆಂದು ತಿಳಿದುಬಂದಿದೆ.

ನವದೆಹಲಿ: ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ವಿರೋಧ ಪಕ್ಷಧ ನಾಯಕ ಸಿದ್ದರಾಮಯ್ಯ ಅವರು ದೆಹಲಿಗೆ ಮಂಗಳವಾರ ಭೇಟಿ ನೀಡಿದ್ದು, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಿದ್ದಾರೆಂದು ತಿಳಿದುಬಂದಿದೆ.
ಇಂದು ಬೆಳಿಗ್ಗೆ ದೆಹಲಿಗೆ ಭೇಟಿ ನೀಡಿದ ಅವರು ಸೋನಿಯಾ ಗಾಂಧಿಯವರೊಂದಿಗೆ ಒಂದೂವರೆ ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆಂದು ವರದಿಗಳು ತಿಳಿಸಿವೆ.
ಸೋನಿಯಾ ಗಾಂಧಿಯವರೊಂದಿಗೆ ಮಾತುಕತೆ ಬಳಿಕ ಹೊರಬಂದ ಸಿದ್ದರಾಮಯ್ಯ ಅವರು, ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ಕಾರಿನಲ್ಲಿ ತೆರಳಿದರು.
ಪಂಜಾಬ್, ಛತ್ತೀಸ್ಗಢ, ಕೇರಳ ಕಾಂಗ್ರೆಸ್ನಲ್ಲಿ ಸ್ವಲ್ಪಮಟ್ಟದ ಅಸಮಾಧಾನಗಳು ಕಾಣಿಸಿಕೊಂಡಿರುವ ಬೆನ್ನಲ್ಲೇ ಸಿದ್ದರಾಮಯ್ಯ ಅವರ ದೆಹಲಿ ಭೇಟಿ ಮಹತ್ವ ಪಡೆದುಕೊಂಡಿದೆ. ಇದಷ್ಟೇ ಅಲ್ಲದೇ, ರಾಜ್ಯದಲ್ಲಿ ಉಪಚುನಾವಣೆ ಘೋಷಣೆಯಾಗಿದ್ದು, ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಚುನಾವಣೆಯಲ್ಲಿ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆಯೂ ಸೋನಿಯಾ ಗಾಂಧಿಯವರ ಜೊತೆ ಸಿದ್ದರಾಮಯ್ಯ ಚರ್ಚೆ ನಡೆಸಿರುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


