ಡಿಕೆಶಿ ಕಾಸು - ಸಿದ್ದರಾಮಯ್ಯ ಬಾಸು: ಅಸಹಾಯಕ ಡಿಕೆಶಿ ಮುಖ್ಯಮಂತ್ರಿ ಕನಸಿಗೆ ಎಳ್ಳು ನೀರು!
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮುಖ್ಯಮಂತ್ರಿ ಕನಸಿಗೆ ಎಳ್ಳು ನೀರು ಬಿಡಲು ವಿಧಾನಸಭೆ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಸಿದ್ಧರಾಗಿದ್ದಾರೆ ಎಂದು ಬಿಜೆಪಿ ವ್ಯಂಗ್ಯವಾಡಿದೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮುಖ್ಯಮಂತ್ರಿ ಕನಸಿಗೆ ಎಳ್ಳು ನೀರು ಬಿಡಲು ವಿಧಾನಸಭೆ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಸಿದ್ಧರಾಗಿದ್ದಾರೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಡಿಕೆಶಿ ಕಾಸು - ಸಿದ್ದರಾಮಯ್ಯ ಬಾಸು’ ಎಂಬಂತಾಗಿದೆ ಕರ್ನಾಟಕ ಕಾಂಗ್ರೆಸ್ ಸ್ಥಿತಿ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಏನೇನು ಮಾಡುತ್ತೇವೆ ಎಂದು ಆಶ್ವಾಸನೆ ನೀಡುತ್ತಲೇ ಸಾಗುತ್ತಿರುವ ಸಿದ್ದರಾಮಯ್ಯ ಪರೋಕ್ಷವಾಗಿ ನಾನೇ ಮುಂದಿನ ಮುಖ್ಯಮಂತ್ರಿ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ. ಡಿಕೆಶಿಯವರದ್ದು ಬರೇ ಕನಸೇ’ ಎಂದು ಪ್ರಶ್ನಿಸಿದೆ.
‘ಡಿಕೆಶಿ ಅವರೇ, ಸಿದ್ದರಾಮಯ್ಯ ಮತ್ತೆ ತಮ್ಮ ವರಸೆ ಶುರು ಮಾಡಿದ್ದಾರೆ. ನೀವು ಎಷ್ಟೇ ತಂತ್ರಗಾರಿಕೆ ನಡೆಸಿದರೂ ಪ್ರಯೋಜನವಿಲ್ಲ. ನಿಮ್ಮ ಮುಖ್ಯಮಂತ್ರಿ ಕನಸಿಗೆ ಎಳ್ಳು ನೀರು ಬಿಡಲು ಅವರು ಸಿದ್ದರಾಗಿದ್ದಾರೆ. ನಿಮ್ಮದೀಗ ‘ಬಗಲ್ ಮೇ ದುಷ್ಮನ್’ ಪರಿಸ್ಥಿತಿ!’ ಅಸಹಾಯಕ ಡಿಕೆಶಿ ಎಂಬ ಹ್ಯಾಷ್‌ಟ್ಯಾಗ್‌ನೊಂದಿಗೆ ಬಿಜೆಪಿ ಟ್ವೀಟ್ ಮಾಡಿದೆ.
‘ಅಲ್ಪಸಂಖ್ಯಾತರಿಗೆ 3 ಸಾವಿರ ಕೋಟಿ ರು. ಕಸೂತಿಗೆ 100 ಕೋಟಿ. ಅದಕ್ಕಿಷ್ಟು, ಇದಕ್ಕಿಷ್ಟು, ಸಂಪುಟದಲ್ಲಿ ಇಂತಿಂಥವರೇ ಇರುತ್ತಾರೆ... ಈ ರೀತಿ ಸಿದ್ದರಾಮಯ್ಯ ಸ್ವಯಂ ಘೋಷಣೆ ಮಾಡುತ್ತಲೇ ಇದ್ದಾರೆ. ಅಂದರೆ ತಾನೇ ಮುಂದಿನ ಸಿಎಂ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ. ಹಾಗಾದರೆ ನಿಮ್ಮ ಕತೆಯೇನು ಡಿಕೆಶಿ’ ಎಂದು ಬಿಜೆಪಿ ಪ್ರಶ್ನಿಸಿದೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಏನೇನು ಮಾಡುತ್ತೇವೆ ಎಂದು ಆಶ್ವಾಸನೆ ನೀಡುತ್ತಲೇ ಸಾಗುತ್ತಿರುವ ಸಿದ್ದರಾಮಯ್ಯ ಪರೋಕ್ಷವಾಗಿ ನಾನೇ ಮುಂದಿನ ಮುಖ್ಯಮಂತ್ರಿ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯ ಮತ್ತೆ ತಮ್ಮ ವರಸೆ ಶುರು ಮಾಡಿದ್ದಾರೆ. ನೀವು ಎಷ್ಟೇ ತಂತ್ರಗಾರಿಕೆ ನಡೆಸಿದರೂ ಪ್ರಯೋಜನವಿಲ್ಲ. ನಿಮ್ಮ ಮುಖ್ಯಮಂತ್ರಿ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ. ನಿಮ್ಮದೀಗ "ಬಗಲ್ ಮೆ ದುಷ್ಮನ್" ಪರಿಸ್ಥಿತಿಯಂತಾಗಿದೆ ಎಂದು ವ್ಯಂಗ್ಯವಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


