ಕಾರ್ಯಕರ್ತರೇ ಜೆಡಿಎಸ್ ಪಕ್ಷದ ಜೀವಾಳ; ನಾಯಕರು ನೆಪಮಾತ್ರ: ಹೆಚ್ ಡಿ ದೇವೇಗೌಡ
ನಿಷ್ಠಾವಂತ ಕಾರ್ಯಕರ್ತರಿಂದಲೇ ಜೆಡಿಎಸ್ ಪಕ್ಷ ಉಳಿದಿದೆಯೆಂದು ಎಂದು ಜೆಡಿಎಸ್ ಪರಮೋಚ್ಚ ನಾಯಕ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಹೇಳಿದ್ದಾರೆ.

ಬೆಂಗಳೂರು: ನಿಷ್ಠಾವಂತ ಕಾರ್ಯಕರ್ತರಿಂದಲೇ ಜೆಡಿಎಸ್ ಪಕ್ಷ ಉಳಿದಿದೆಯೆಂದು ಎಂದು ಜೆಡಿಎಸ್ ಪರಮೋಚ್ಚ ನಾಯಕ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಹೇಳಿದ್ದಾರೆ.
ಪಕ್ಷದ ಕಚೇರಿಯಲ್ಲಿಂದು ನಡೆದ ಮಹಿಳಾ ಸಮಾವೇಶದಲ್ಲಿ ಮಾತನಾಡಿದ ಅವರು, ವೇದಿಕೆ ಮೇಲಿರುವ ಮಹಿಳಾ ಮುಖಂಡರು ದೇವೇಗೌಡರ ಮುಖ ನೋಡಿ ಪಕ್ಷಕ್ಕೆ ಬಂದಿಲ್ಲ. ಪಕ್ಷದ ತತ್ವ ಸಿದ್ಧಾಂತ ಮತ್ತು ಜನಪರ ಪರ ಕಾಳಜಿಮೆಚ್ಚಿ ಬಂದಿದ್ದಾರೆ. ಕಾರ್ಯಕರ್ತರೇ ಪಕ್ಷದ ಜೀವಾಳ, ನಾಯಕರು ನೆಪಮಾತ್ರ ಎಂದು ದೇವೇಗೌಡರು ಹೇಳಿದರು.
ಹೇಗೆ ಪಕ್ಷವನ್ನು ಹೇಗೆ ಸಂಘಟಿಸಬೇಕು ಎಂದು ಎಲ್ಲರಿಗೂ ಸ್ಪಷ್ಟವಾಗಿ ಸೂಚನೆ ಕೊಡಲಾಗಿದೆ. ರಾಜಕೀಯವಾಗಿ ನಮ್ಮ ಶಕ್ತಿ ಪ್ರದರ್ಶನ ಮಾಡಲು ಮಹಿಳೆಯರು ಆಗಮಿಸಿದ್ದೀರಿ. ನಾನು ಸಿಎಂ ಆಗುವುದಕ್ಕೆ ಮೊದಲೇ ಹೆಣ್ಣು ಮಕ್ಕಳಿಗೆ ಏನೂ ಮಾಡಬೇಕು ಎಂದು ಚಿಂತನೆ ಮಾಡಿ ಮೀಸಲಾತಿಗಾಗಿ ಹೋರಾಟ ಮಾಡಿದ್ದನ್ನು ಮೆಲಕು ಹಾಕಿದರು.
ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಜೆಡಿಎಸ್ ಮುಳುಗುತ್ತಿರುವ ಹಡಗು ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ಮುಳುಗುತ್ತಿರುವ ಹಡಗಿನ ಪಕ್ಷದ ಜೊತೆ ಎರಡು ಬಾರಿ ಸರ್ಕಾರ ರಚನೆ ಮಾಡಿದ್ದನ್ನು ಅವರು ಮರೆತಿರಬಹುದು ಎಂದು ತಿರುಗೇಟು ನೀಡಿದರು.
ಮುಂದಿನ ಚುನಾವಣೆಯಲ್ಲಿ ಅವರಿಗೆ ನಮ್ಮ ಶಕ್ತಿ ತೋರಿಸುತ್ತೇವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಕೆ. ಕುಮಾರಸ್ವಾಮಿ ಸವಾಲು ಹಾಕಿದರು. ಆದರೆ ಜೆಡಿಎಸ್ ಮಹಿಳಾ ಸಮಾವೇಶಕ್ಕೆ ಜೆಡಿಎಸ್ ಏಕೈಕ ಮಹಿಳಾ ಶಾಸಕಿ ಅನಿತಾ ಕುಮಾರಸ್ವಾಮಿ ಮಾತ್ರ ಗೈರು ಹಾಜರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


