ರಾಜಕೀಯ

ಡಿಕೆ ಶಿವಕುಮಾರ್ ಭೇಟಿ ಮಾಡಿದ ಕೋಲಾರ ಶಾಸಕ ಶ್ರೀನಿವಾಸ ಗೌಡ: ಜೆಡಿಎಸ್ ಮತ್ತೊಂದು ವಿಕೆಟ್ ಪತನ?

ಜೆಡಿಎಸ್ ವಿರುದ್ಧ ಬಹಿರಂಗವಾಗಿಯೇ ಹೇಳಿಕೆ ನೀಡಿರುವ ಅವರು ‘ಕೈ’ ಹಿಡಿಯಲು ತೆರೆಮರೆಯಲ್ಲಿ ಕಸರತ್ತು ನಡೆಸಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಸದಾಶಿವನಗರದಲ್ಲಿರುವ ಅವರ ನಿವಾಸದಲ್ಲಿ ಬುಧವಾರ ಭೇಟಿ ಮಾಡಿ ಚರ್ಚಿಸಿರುವುದು ಕುತೂಹಲ ಮೂಡಿಸಿದೆ.

ಡಿಕೆ ಶಿವಕುಮಾರ್ ಭೇಟಿ ಮಾಡಿದ ಕೋಲಾರ ಶಾಸಕ ಶ್ರೀನಿವಾಸ ಗೌಡ: ಜೆಡಿಎಸ್ ಮತ್ತೊಂದು ವಿಕೆಟ್ ಪತನ?
ಶಿವಕುಮಾರ್ ಭೇಟಿ ಮಾಡಿದ ಶ್ರೀನಿವಾಸಗೌಡ
Published On :

ಬೆಂಗಳೂರು: ಚಾಮುಂಡೇಶ್ವರಿ ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಜೆ.ಟಿ. ದೇವೇಗೌಡ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವುದು ಬಹುತೇಕ ಖಚಿತವಾಗಿರುವ ಬೆನ್ನಲ್ಲೇ, ಕೋಲಾರ ಕ್ಷೇತ್ರದ ಜೆಡಿಎಸ್ ಶಾಸಕ ಕೆ. ಶ್ರೀನಿವಾಸ ಗೌಡ ಕೂಡ ಕಾಂಗ್ರೆಸ್ ಬಾಗಿಲು ತಟ್ಟಿದ್ದಾರೆ. 

ಜೆಡಿಎಸ್ ವಿರುದ್ಧ ಬಹಿರಂಗವಾಗಿಯೇ ಹೇಳಿಕೆ ನೀಡಿರುವ ಅವರು ‘ಕೈ’ ಹಿಡಿಯಲು ತೆರೆಮರೆಯಲ್ಲಿ ಕಸರತ್ತು ನಡೆಸಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಸದಾಶಿವನಗರದಲ್ಲಿರುವ ಅವರ ನಿವಾಸದಲ್ಲಿ ಬುಧವಾರ ಭೇಟಿ ಮಾಡಿ ಚರ್ಚಿಸಿರುವುದು ಕುತೂಹಲ ಮೂಡಿಸಿದೆ.

ಕೆ. ಸಿ. ವ್ಯಾಲಿ ಯೋಜನೆ ಮುಂದಿಟ್ಟುಕೊಂಡು ಕೋಲಾರ ಶಾಸಕ ಕೆ. ಶ್ರೀನಿವಾಸ ಗೌಡ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಮೂಲಕ ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಶಾಸಕ ಕೆ. ಶ್ರೀನಿವಾಸ ಗೌಡ ಈಗಾಗಲೇ ಜೆಡಿಎಸ್ ತೊರೆಯಲು ಚಿಂತನೆ ನಡೆಸಿದ್ದಾರೆ. ಈ ಕುರಿತು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಜೊತೆ ಮಾತುಕತೆ ನಡೆಸಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಇಂತಹ ಸಮಯದಲ್ಲಿಯೇ ಡಿ. ಕೆ. ಶಿವಕುಮಾರ್ ಭೇಟಿ ಮಾಡಿದ್ದು ಕುತೂಹಲಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.