ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಾನೇ ಸಿಎಂ: ಸಿದ್ದರಾಮಯ್ಯ
ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರ ಬಂದರೆ ಮರಳಿ ನಾನೇ ಮುಖ್ಯಮಂತ್ರಿಯಾಗಿ ಬಡವರಿಗೆ ಆಸರೆಯಾಗಿ, ಉತ್ತಮ ಆಡಳಿತ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬಾಗಲಕೋಟೆ: ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರ ಬಂದರೆ ಮರಳಿ ನಾನೇ ಮುಖ್ಯಮಂತ್ರಿಯಾಗಿ ಬಡವರಿಗೆ ಆಸರೆಯಾಗಿ, ಉತ್ತಮ ಆಡಳಿತ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಮೂಲಕ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿಯಾಗಲು ಬಯಸುತ್ತಿರುವ ಇತರೆ ನಾಯಕರಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ. ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಜಕನೂರು ಗ್ರಾಮದಲ್ಲಿ ನಡೆದ ಸಿದ್ದಶ್ರೀ ಪ್ರಶಸ್ತಿ ವಿತರಣೆ ಸಮಾರಂಭದಲ್ಲಿ ಅವರು ಮಾತನಾಡಿದರು.
ಹಿಂದಿನ ಅಧಿಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ಅನ್ನಭಾಗ್ಯ ಯೋಜನೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮತ್ತೆ ಮುಂದುವರೆಯಲಿದೆ. ಯಾರು ಕೂಡ ಸಮಾಜದಲ್ಲಿ ಹಸಿವಿನಿಂದ ಬಳಲಬಾರದು ಎಂಬ ನಿರ್ಧಾರ ಮಾಡಿ, ಪ್ರತಿಯೊಬ್ಬರಿಗೂ ಅನ್ನ ಸಿಗುವ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದ್ದೆ ಆದರೂ ಯೋಜನೆ ವಿರುದ್ಧ ಹಲವರು ಕುಹಕ, ಮತ್ತು ವ್ಯಂಗ್ಯವಾಗಿ ಮಾತನಾಡಿದ್ದರು ಎಂದು ಸಿದ್ದರಾಮಯ್ಯ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


