ರಾಜಕೀಯ

ಅಫ್ಘಾನಿಸ್ಥಾನದಲ್ಲಿ ತಾಲಿಬಾನ್ ಹುಟ್ಟುವುದಕ್ಕೆ ಮುಂಚೆಯೇ ಭಾರತದಲ್ಲಿ ಹುಟ್ಟಿತ್ತು: ಸಿದ್ದುಗೆ ಕಟೀಲ್ ತಿರುಗೇಟು

ಅಫ್ಘಾನಿಸ್ಥಾನದಲ್ಲಿ ತಾಲಿಬಾನ್ ಹುಟ್ಟುವುದಕ್ಕೆ ಮುಂಚೆಯೇ ಭಾರತದಲ್ಲಿ ತಾಲಿಬಾನ್ ಸರ್ಕಾರ ಹುಟ್ಟು ಹಾಕಿದ್ದು ಕಾಂಗ್ರೆಸ್ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಅಫ್ಘಾನಿಸ್ಥಾನದಲ್ಲಿ ತಾಲಿಬಾನ್ ಹುಟ್ಟುವುದಕ್ಕೆ ಮುಂಚೆಯೇ ಭಾರತದಲ್ಲಿ ಹುಟ್ಟಿತ್ತು: ಸಿದ್ದುಗೆ ಕಟೀಲ್ ತಿರುಗೇಟು
ಕಟೀಲ್-ಸಿದ್ದರಾಮಯ್ಯ
Published On :

ಬೆಂಗಳೂರು: ಅಫ್ಘಾನಿಸ್ಥಾನದಲ್ಲಿ ತಾಲಿಬಾನ್ ಹುಟ್ಟುವುದಕ್ಕೆ ಮುಂಚೆಯೇ ಭಾರತದಲ್ಲಿ ತಾಲಿಬಾನ್ ಸರ್ಕಾರ ಹುಟ್ಟು ಹಾಕಿದ್ದು ಕಾಂಗ್ರೆಸ್ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. 

ಮಾಧ್ಯಮ ಪ್ರಕಟಣೆ ಮೂಲಕ ಹೇಳಿಕೆ ನೀಡಿರುವ ಕಟೀಲ್, ತಾಲಿಬಾನ್ ಆಡಳಿತ ನಡೆಸಿದ ಪಕ್ಷ ಕಾಂಗ್ರೆಸ್ ದೇಶದಲ್ಲಿ ತಾಲಿಬಾನ್ ಹುಟ್ಟಿಗೆ ಇದೇ ಪಕ್ಷವೇ ಕಾರಣ ಎಂದು ಕಟೀಲ್ ಹೇಳಿದ್ದಾರೆ.

ಮಾಜಿ ಪ್ರಧಾನಿ ದಿ.ಇಂದಿರಾ ಗಾಂಧಿ 1975ರಲ್ಲಿ ತುರ್ತು ಪರಿಸ್ಥಿತಿ ಹೇರಿ,18 ತಿಂಗಳುಗಳ ಕಾಲ ದೇಶಭಕ್ತರು, ಮಾಧ್ಯಮದ ಪ್ರತಿನಿಧಿಗಳನ್ನೂ ಜೈಲಿಗಟ್ಟಿದ್ದರು. ಸಿದ್ದರಾಮಯ್ಯ ಆಗ ಕಾಂಗ್ರೆಸ್ ನಲ್ಲಿ ಇರಲಿಲ್ಲ ಎಂಬ ಒಂದೇ ಕಾರಣಕ್ಕೆ ಈ ವಿಚಾರದಲ್ಲಿ ಜಾಣ ಮರೆವನ್ನು ಪ್ರದರ್ಶಿಸಿದ್ದಾರೆ. 

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ತಾಲಿಬಾನ್ ಸಂಸ್ಕೃತಿಯನ್ನು ಹೊಂದಿದವರು ಎಂದು ಕಟೀಲ್ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.