ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ತರುವುದಕ್ಕಾಗಿ ನಮ್ಮ ಹೋರಾಟ: ಒಗ್ಗಟ್ಟಿನ 'ಜಪ' ಮಂತ್ರಿಸಿದ ಡಿಕೆ ಶಿವಕುಮಾರ್
: ಬಿಜೆಪಿ ದುರಾಡಳಿತಕ್ಕೆ ರಾಜ್ಯದ ಜನರು ಬೇಸತ್ತು ಹೋಗಿದ್ದು, ಕಾಂಗ್ರೆಸ್‌ಗೆ ಮತ ಹಾಕಲು ಕಾಯುತ್ತಿದ್ದಾರೆ. ಮತದಾರರ ಮನೆ ಬಾಗಿಲಿಗೆ ತೆರಳಿ ಅವರಿಗೆ ಧ್ವನಿಯಾಗಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕ್ಷದ ನಾಯಕರಿಗೆ ತಾಕೀತು ಮಾಡಿದರು.

ಚಿತ್ರದುರ್ಗ: ಬಿಜೆಪಿ ದುರಾಡಳಿತಕ್ಕೆ ರಾಜ್ಯದ ಜನರು ಬೇಸತ್ತು ಹೋಗಿದ್ದು, ಕಾಂಗ್ರೆಸ್‌ಗೆ ಮತ ಹಾಕಲು ಕಾಯುತ್ತಿದ್ದಾರೆ. ಮತದಾರರ ಮನೆ ಬಾಗಿಲಿಗೆ ತೆರಳಿ ಅವರಿಗೆ ಧ್ವನಿಯಾಗಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕ್ಷದ ನಾಯಕರಿಗೆ ತಾಕೀತು ಮಾಡಿದರು.
ತಾಲ್ಲೂಕಿನ ಸೀಬಾರದಲ್ಲಿರುವ ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಸ್ಮಾರಕದಲ್ಲಿ ಭಾನುವಾರ ನಡೆದ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು. ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಹೊರೆ ಹೆಚ್ಚಾಗಿದೆ. ಮೊಸರು, ಮಜ್ಜಿಗೆ, ಆಹಾರ ಧಾನ್ಯಗಳಿಗೂ ತೆರಿಗೆ ವಿಧಿಸಲಾಗಿದೆ. ಬ್ಯಾಂಕ್ ವ್ಯವಹಾರಕ್ಕೆ ಬಳಸುವ ಚೆಕ್‌ಬುಕ್‌ಗೂ ಜಿಎಸ್‌ಟಿ ವಿಧಿಸಲಾಗಿದೆ. ತೆರಿಗೆ ಹೊರೆಗೆ ಜನರು ಹೈರಾಣಾಗಿದ್ದಾರೆ. ಮತದಾರರ ಮನೆಗೆ ಭೇಟಿ ನೀಡಿ ಬಿಜೆಪಿ ದುರಾಡಳಿತದ ಬಗ್ಗೆ ಮನವರಿಕೆ ಮಾಡಿಕೊಡಿ’ ಎಂದು ಹೇಳಿದರು.
ಆ.3ರಂದು ಸಿದ್ದರಾಮಯ್ಯ ಜನ್ಮ ದಿನಾಚರಣೆ ಹಿನ್ನೆಲೆ ದಾವಣಗೆರೆಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ಮೊದಲು, ಮುರುಘಾ ಮಠಕ್ಕೆ ಆಗಮಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದರು. ಮೊದಲು ಮುರುಘಾ ಮಠಕ್ಕೆ ಆಗಮಿಸಿದ ಡಿಕೆ ಶಿವಕುಮಾರ್ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಹಾಗು ಡಿಕೆ ಅಭಿಮಾನಿಗಳು ಸೇಬಿನ ಹಾರ ಹಾಗೂ ಹೂವಿನ ಸುರಿಮಳೆಗೈಯ್ಯುವ ಮೂಲಕ ಅದ್ದೂರಿ ಸ್ವಾಗತ ಕೋರಿದರು.
ಆ. 3ಕ್ಕೆ ರಾಹುಲ್ ಗಾಂಧಿ ಚಿತ್ರದುರ್ಗದ ಮುರುಘಾಮಠಕ್ಕೆ ಭೇಟಿ ನೀಡುತ್ತಾರೆ. ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಹಾಗೂ ಇತರೆ ಶ್ರೀಗಳನ್ನು ಭೇಟಿ ಮಾಡಲಿದ್ದಾರೆ. ಆ. 3ಕ್ಕೆ ದಾವಣಗೆರೆ ಅಮೃತ ಮಹೋತ್ಸವದಲ್ಲಿ ರಾಹುಲ್ ಭಾಗಿಯಾಗಲಿದ್ದಾರೆ. ಮಾಜಿ ಸಿಎಂ ಸಿದ್ಧರಾಮಯ್ಯ ಜನ್ಮ ದಿನದ ಅಂಗವಾಗಿ ಅಮೃತ ಮಹೋತ್ಸವ ಕಾರ್ಯಕ್ರಮವಿದ್ದು ಭಾರತ್ ಜೋಡೋ ಪಾದಯಾತ್ರೆ ವೇಳೆ ವಿವಿಧ ಮಠಾಧೀಶರ ಭೇಟಿ ಮಾಡಸಿದ್ದಾರೆ. ಮುಂದಿನ ತಿಂಗಳಲ್ಲಿ ರಾಹುಲ್ ಗಾಂಧಿ ಪಾದಯಾತ್ರೆ ಮಾಡಲಿದ್ದಾರೆ ಎಂದು ಶಿವಕುಮಾರ್ ಮಾಹಿತಿ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


