ಬಿಜೆಪಿ ಭದ್ರಕೋಟೆ, ಇಂದಿರಾಗಾಂಧಿಗೆ ರಾಜಕೀಯ ಪುನರ್ಜನ್ಮ ನೀಡಿದ ಚಿಕ್ಕಮಗಳೂರಿನಿಂದ ಸ್ಪರ್ಧಿಸಲು ಸಿದ್ದರಾಮಯ್ಯಗೆ ಒತ್ತಾಯ
2023ರ ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯುವಂತೆ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮೀಗಾ ಮನವಿ ಸಲ್ಲಿಸಿದ್ದಾರೆ.

ಚಿಕ್ಕಮಗಳೂರು: 2023ರ ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯುವಂತೆ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮೀಗಾ ಮನವಿ ಸಲ್ಲಿಸಿದ್ದಾರೆ.
ದಾವಣಗೆರೆಯಲ್ಲಿ ಸಿದ್ದರಾಮಯ್ಯ ಅವರ 75ನೇ ಜನ್ಮದಿನದ ಅಮೃತ ಮಹೋತ್ಸವದಲ್ಲಿ ಮನವಿ ಮಾಡಿದ್ದಾರೆ. ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಶಾಸಕರ ವರ್ತನೆಯಿಂದ ಬೇಸತ್ತಿದ್ದಾರೆ. ದಿವಂಗತ ಇಂದಿರಾಗಾಂಧಿ ಅವರಿಗೆ ಪುನರ್ಜನ್ಮ ನೀಡಿದ ಕ್ಷೇತ್ರದಿಂದ ನಿಮ್ಮಂತಹ ಜನನಾಯಕರು ಈ ಬಾರಿ ಸ್ಪರ್ಧಿಸಿದರೆ ಮತ್ತೊಮ್ಮೆ ಕಾಂಗ್ರೆಸ್ ಪಕ್ಷಕ್ಕೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪುನರ್ಜನ್ಮವಾಗಲಿದೆ ಎಂದು ಒತ್ತಾಯಿಸಿದ್ದಾರೆ.
ಬಿಜೆಪಿ ಭದ್ರ ಕೋಟೆಯಾಗಿರುವ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ 4 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧೆ ಮಾಡುವಂತೆ ಕಿಸಾನ್ ಕಾಂಗ್ರೆಸ್ ಸೆಲ್ ಒತ್ತಡ ಹೇರಿದೆ.
ಒಂದುಕಡೆ ಗೆಲುವಿನ ಕ್ಷೇತ್ರಕ್ಕಾಗಿ ಹುಡುಕಾಟ ನಡೆಸುತ್ತಿರುವ ಸಿದ್ದರಾಮಯ್ಯ ಅವರಿಗೆ ಇದೇ ಹೊತ್ತಿನಲ್ಲಿ ಚಿಕ್ಕಮಗಳೂರು ವಿಧಾಸಭಾ ಕ್ಷೇತ್ರದಿಂದಲೂ ಸ್ಪರ್ಧೆ ಮಾಡಲು ಒತ್ತಡ ಹೇರಲಾಗುತ್ತಿದ್ದು ಯಾವ ಕ್ಷೇತ್ರದಲ್ಲಿ ಸ್ಪರ್ಧೆಗೆ ಇಳಿಯಲಿದ್ದಾರೆ ಎಂದು ಕಾದುನೋಡಬೇಕಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


