ರಾಜಕೀಯ

ದುರಂತ ನಾಯಕ ಖರ್ಗೆ ದಲಿತ ಎಂಬ ಕಾರಣಕ್ಕಾಗಿ ಇಷ್ಟೊಂದು ನಿಕೃಷ್ಟವೇ? ಕಾಂಗ್ರೆಸ್ ಮೌನವನ್ನು ಪ್ರಶ್ನಿಸಿದ ಬಿಜೆಪಿ!

80 ದಾಟಿರುವ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆಗಾಗಿ ಯಾರು ದುಃಖಿಸುವವರೇ ಇಲ್ಲ ಎಂದು #CONgressAgainstDalits ಎಂಬ ಹ್ಯಾಷ್ ಟ್ಯಾಗ್ ಅಡಿ ಸರಣಿ ಕೂ ಮಾಡಿದೆ ರಾಜ್ಯ ಬಿಜೆಪಿ.

ದುರಂತ ನಾಯಕ ಖರ್ಗೆ ದಲಿತ ಎಂಬ ಕಾರಣಕ್ಕಾಗಿ ಇಷ್ಟೊಂದು ನಿಕೃಷ್ಟವೇ? ಕಾಂಗ್ರೆಸ್ ಮೌನವನ್ನು ಪ್ರಶ್ನಿಸಿದ ಬಿಜೆಪಿ!
ಮಲ್ಲಿಕಾರ್ಜುನ್ ಖರ್ಗೆ
Published On :

ಬೆಂಗಳೂರು: 80 ದಾಟಿರುವ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆಗಾಗಿ ಯಾರು ದುಃಖಿಸುವವರೇ ಇಲ್ಲ ಎಂದು #CONgressAgainstDalits ಎಂಬ ಹ್ಯಾಷ್ ಟ್ಯಾಗ್ ಅಡಿ ಸರಣಿ ಕೂ ಮಾಡಿದೆ ರಾಜ್ಯ ಬಿಜೆಪಿ.

ಸಿದ್ದರಾಮಯ್ಯ, ಡಿಕೆಶಿ ಆದಿಯಾಗಿ ಕಾಂಗ್ರೆಸ್‌ ನಾಯಕರೆಲ್ಲರೂ 75 ರ ಈ ಇಳಿ ಹರೆಯದಲ್ಲೂ ಸೋನಿಯಾ #ED ವಿಚಾರಣೆಯ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಮರುಕಪಟ್ಟರು. ದುರಂತ ನಾಯಕ ಖರ್ಗೆ 80 ವರ್ಷ ದಾಟಿದ್ದಾರೆ, ದುಃಖಿಸುವವರೇ ಇಲ್ಲ! ದಲಿತ ಎಂಬ ಕಾರಣಕ್ಕಾಗಿ ಇಷ್ಟೊಂದು ನಿಕೃಷ್ಟವೇ?

Story image

ಸೋನಿಯಾ ಗಾಂಧಿ ಅವರನ್ನು #ED ವಿಚಾರಣೆ ನಡೆಸುವ ಕಾರಣದಿಂದ ಮಲ್ಲಿಕಾರ್ಜುನ ಖರ್ಗೆ ತಮ್ಮ 80 ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳಲಿಲ್ಲ. ನಕಲಿ ಗಾಂಧಿ ಕುಟುಂಬಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡುತ್ತಿರುವ ದಲಿತ ನಾಯಕ ಖರ್ಗೆ ಅವರನ್ನು ತನಿಖೆ ನಡೆಸುತ್ತಿರುವಾಗ ಕಾಂಗ್ರೆಸ್‌ ಪಕ್ಷ ಮೌನವಾಗಿದೆ. ಏಕೆ ಈ ತಾರತಮ್ಯ?

Story image

ನಕಲಿ ಗಾಂಧಿಗಳು ತನಿಖಾ ಸಂಸ್ಥೆಯ ಎದುರು ವಿಚಾರಣೆಗೆ ಹಾಜರಾದಾಗ ಕಾಂಗ್ರೆಸ್‌ ಪಕ್ಷ ಆಕಾಶ ಭೂಮಿ ಒಂದಾಗುವಂತೆ ಪ್ರತಿಭಟಿಸಿತು. ಆದರೆ ಈಗ ದಲಿತ ನಾಯಕ, ಕಾಂಗ್ರೆಸ್‌ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಜಾರಿ ನಿರ್ದೇಶನಾಲಯದ ಎದುರು ಕುಳಿತಾಗ ಕಾಂಗ್ರೆಸ್‌ ದಿವ್ಯ ಮೌನ ಅನುಸರಿಸುತ್ತಿದೆ. ಏಕೆ ಈ ದ್ವಂದ್ವ ನೀತಿ? ಎಂದು ಸರಣಿ ಟ್ವೀಟ್ ಮಾಡಿದೆ.

Story image

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.