ಚುನಾವಣೆಗೂ ಮುನ್ನ ಜಿಲ್ಲಾ ಉಸ್ತುವಾರಿ ಮಂತ್ರಿ ಅದಲು-ಬದಲು: ಬೊಮ್ಮಾಯಿ ಸಂಪುಟ ಸಚಿವರ ಅಸಮಾಧಾನ!
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇತ್ತೀಚೆಗೆ ತಮ್ಮ ಸಂಪುಟದ ಇಬ್ಬರು ಸಚಿವರ ಉಸ್ತುವಾರಿ ಬದಲಾವಣೆ ಆದೇಶವನ್ನು ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಜಿಲ್ಲೆಗಳ ಹಂಚಿಕೆ ಕುರಿತು ಕೆಲವು ಸಚಿವರು ಅಸಮಾಧಾನವನ್ನು ಬಹಿರಂಗಪಡಿಸಿದ್ದಾರೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇತ್ತೀಚೆಗೆ ತಮ್ಮ ಸಂಪುಟದ ಇಬ್ಬರು ಸಚಿವರ ಉಸ್ತುವಾರಿ ಬದಲಾವಣೆ ಆದೇಶವನ್ನು ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಜಿಲ್ಲೆಗಳ ಹಂಚಿಕೆ ಕುರಿತು ಕೆಲವು ಸಚಿವರು ಅಸಮಾಧಾನವನ್ನು ಬಹಿರಂಗಪಡಿಸಿದ್ದಾರೆ.
ಹೊಸದಾಗಿ ರಚನೆಯಾದ ವಿಜಯನಗರ ಜಿಲ್ಲೆಯನ್ನು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರಿಗೆ ನೀಡದೆ ಕೊಪ್ಪಳ ನೀಡಿದ್ದಕ್ಕೆ ಅವರ ಬೆಂಬಲಿಗರಿಂದ ಪ್ರತಿಭಟನೆಗಳು ನಡೆದಿದ್ದವು, ಆದರೆ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ವಿಜಯನಗರವನ್ನು ನೀಡಲಾಯಿತು.
2023ರ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಸಿಂಗ್ ಅವರು ಹೊಸಪೇಟೆಯ ಶಾಸಕರಾಗಿರುವ ಕಾರಣ ತವರು ಜಿಲ್ಲೆಗೆ ಮರಳಲು ಬಯಸಿದ್ದರು. ಅವರ ಬೇಡಿಕೆಗೆ ಸಮ್ಮತಿಸಿದ ಬೊಮ್ಮಾಯಿ ಅವರು ಆದೇಶ ಹೊರಡಿಸಿದ್ದರು, ಆದರೆ ಇತರ ಸಚಿವರಿಂದ ಮನವಿಗಳ ಮಹಾಪೂರವೇ ಬಂದಿದ್ದರಿಂದ ಅದನ್ನು ರದ್ದುಗೊಳಿಸಬೇಕಾಯಿತು.
ಹೆಚ್ಚಿನ ಸಚಿವರು ತಮಗೆ ನಿಗದಿಪಡಿಸಿದ ಜಿಲ್ಲೆಗಳನ್ನು ಹೊರತುಪಡಿಸಿ ತಮ್ಮ ತವರು ಜಿಲ್ಲೆಗಳನ್ನು ನೋಡಿಕೊಳ್ಳಬೇಕಾಗಿದೆ. ಆದರೆ ಪಕ್ಷದ ಹೈಕಮಾಂಡ್ ತವರು ಕ್ಷೇತ್ರವನ್ನು ಹೊರತುಪಡಿಸಿ ಬೇರೆ ಜಿಲ್ಲೆಗಳನ್ನು ಸಚಿವರಿಗೆ ನೀಡಲು ನಿರ್ಧರಿಸಿರುವುದರಿಂದ ಅವರು ತಮ್ಮ ಆತಂಕವನ್ನು ಬಹಿರಂಗವಾಗಿ ವ್ಯಕ್ತಪಡಿಸುತ್ತಿಲ್ಲ. ಆದರೆ ಬೊಮ್ಮಾಯಿ ಅವರ ಇಬ್ಬರು ಸಹೋದ್ಯೋಗಿಗಳಾದ ಸಾರಿಗೆ ಸಚಿವ ಬಿ ಶ್ರೀರಾಮುಲು, ಮತ್ತು ಇಂಧನ ಸಚಿವ ಸುನೀಲ್‌ಕುಮಾರ್ ಅದೃಷ್ಠಶಾಲಿಗಳಾಗಿದ್ದಾರೆ. ಏಕೆಂದರೇ ಮೊಳಕಾಲ್ಮೂರು ಶಾಸಕ ಬಿ ಶ್ರೀರಾಮುಲು ಅವರಿಗೆ ತಮ್ಮ ತವರು ಜಿಲ್ಲೆ ಬಳ್ಳಾರಿ ಮತ್ತು ಇಂಧನ ಸಚಿವ ಸುನೀಲ್‌ಕುಮಾರ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ.
ಇದನ್ನೂ ಓದಿ: ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ಮಾಡಿ ಆದೇಶ: ವಿಜಯನಗರಕ್ಕೆ ಆನಂದ್ ಸಿಂಗ್, ಕೊಪ್ಪಳಕ್ಕೆ ಶಶಿಕಲಾ ಜೊಲ್ಲೆ ನೇಮಕ!
ಆದರೆ ಇತರ 23 ಜನರು ತಮ್ಮ ಪ್ರಸ್ತುತ ಜವಾಬ್ದಾರಿಗಳು ಮತ್ತು ಅವರ ತವರು ಜಿಲ್ಲೆಗಳ ನಡುವೆ ಜಗ್ಗಾಡುತ್ತಿದ್ದಾರೆ. ಇದು ಚುನಾವಣೆಯಲ್ಲಿ ತಮ್ಮ ಭವಿಷ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು ಎಂದು ಅವರು ಭಯಪಡುತ್ತಾರೆ ಎಂದು ನಾಯಕರೊಬ್ಬರು ಹೇಳಿದ್ದಾರೆ.
ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ತುಮಕೂರು ಜಿಲ್ಲಾ ಉಸ್ತುವಾರಿ ನೀಡಿದ ಹಿನ್ನೆಲೆಯಲ್ಲಿ, ವಿವಿಧ ಸಮಸ್ಯೆಗಳನ್ನು ಬಗೆಹರಿಸಲು ಅವರಿಗೆ ತುಂಬಾ ಕಷ್ಟವಾಯಿತು, ಹೀಗಾಗಿ ಅವರ ಕೆಲವು ಬೆಂಬಲಿಗು ಸಮಸ್ಯೆಗಳನ್ನು ನಿರ್ವಹಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಚಿವರು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು ಎಂಬುದು ಇದರ ಉದ್ದೇಶ. ಬೊಮ್ಮಾಯಿ ಸಂಪುಟದಲ್ಲಿರು ಸಚಿವರು ಆಯಾ ಉಸ್ತುವಾರಿ ಜಿಲ್ಲೆಗಳಲ್ಲಿ ಜನರ ಕುಂದುಕೊರತೆಗಳಿಗೆ ಹಾಜರಾಗುವ ಮೂಲಕ ತಮ್ಮ ಕಾರ್ಯಗಳನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


