ಅಧಿವೇಶನ ಕರೆದಾಗ 'ಎಲ್ಲಿದ್ದೀಯಪ್ಪಾ ಕುಮಾರಸ್ವಾಮಿ? 'ಎಂದು ಹುಡುಕಬೇಕು; 'ಬಂಡೆ' ಜೊತೆ ಎಚ್ ಡಿಕೆ: ಅಶ್ವತ್ಥ ನಾರಾಯಣ ವ್ಯಂಗ್ಯ
ಬಿಜೆಪಿ ಪಕ್ಷ ಮತ್ತು ನಮ್ಮ ಸರ್ಕಾರ ಜನರ ಪರವಾಗಿರುವ ಸರ್ಕಾರವಾಗಿದೆ ಹೊರತು ಇದು ಯಾವುದೋ ಕಾಂಗ್ರೆಸ್, ಜೆಡಿಎಸ್ ನಂತೆ ಖಾಸಗಿ ಕಂಪನಿಯಲ್ಲ ಎಂದು ಸಚಿವ ಅಶ್ವತ್ಥ ನಾರಾಯಣ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು: ಬಿಜೆಪಿ ಪಕ್ಷ ಮತ್ತು ನಮ್ಮ ಸರ್ಕಾರ ಜನರ ಪರವಾಗಿರುವ ಸರ್ಕಾರವಾಗಿದೆ ಹೊರತು ಇದು ಯಾವುದೋ ಕಾಂಗ್ರೆಸ್, ಜೆಡಿಎಸ್ ನಂತೆ ಖಾಸಗಿ ಕಂಪನಿಯಲ್ಲ ಎಂದು ಸಚಿವ ಅಶ್ವತ್ಥ ನಾರಾಯಣ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿಯವರು ನಾಟಕ ಮಾಡ್ತಿದ್ದಾರೆಂಬ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಚಿವ ಅಶ್ವಥ್ ನಾರಾಯಣ ತಿರುಗೇಟು ನೀಡಿದ್ದಾರೆ. ಯಾರಿಗಾದರೂ ಚೆನ್ನಾಗಿ ನಾಟಕ ಮಾಡೋಕೆ ಬರುತ್ತೆ ಅಂದರೆ ಅದು ಸಿದ್ದರಾಮಯ್ಯನವರಿಗೆ ಮಾತ್ರ. ನಾಟಕದ ಅನುಭವವನ್ನು ಅವರು ಬೇರೆಯವರಿಗೆ ಹೇಳ್ತಿದ್ದಾರೆ ಎಂದರು.
ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ ಮಾಡೋದು ಪ್ರತಿಯೊಬ್ಬರ ಕರ್ತವ್ಯ. ಅದರಲ್ಲಿ ತಪ್ಪು, ಕಂಡು ಹಿಡಿಯೋದು, ದೋಷ ಎತ್ತಿ ಹಿಡಿಯೋದು ಸರಿಯಲ್ಲ. ಒಳ್ಳೆಯದು ಮಾಡೋಕೆ ಆಗಿಲ್ಲ ಅಂದರೆ ಸಮಾಜದಲ್ಲಿ ಗೊಂದಲ ಸೃಷ್ಟಿಸಬೇಡಿ. ಒಳ್ಳೆಯದು ಮಾಡೋಕೆ ಯೋಗ್ಯತೆ ಇಲ್ಲ ಅಂದರೆ ಕೆಟ್ಟದ್ದನ್ನು ಹೇಳಬೇಡಿ. ನಿಮ್ಮ ಭಕ್ತಿ ದೇಶದ ಮೇಲೆ ಇದ್ರೆ ತಮ್ಮ ಕರ್ತವ್ಯದ ಮೂಲಕ ಮಾಡಿ. ಅದು ಬಿಟ್ಟು ಇಂತಹ ಡೋಂಘಿ ಹೇಳಿಕೆಗಳನ್ನು ನಿಲ್ಲಿಸಿ ಎಂದು ಅಶ್ವಥ್ ನಾರಾಯಣ್ ಆಕ್ರೋಶ ವ್ಯಕ್ತಪಡಿಸಿದರು.
ಅಧಿವೇಶನ ಕರೆಯಲು ಸರ್ಕಾರ ಹಿಂದೇಟು ಹಾಕುತ್ತಿದೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಅವರು, ಎಲ್ಲಿದ್ಯಪ್ಪ ಕುಮಾರಸ್ವಾಮಿ..? ಎಂದು ಲೇವಡಿ ಮಾಡಿದರು. ಅಧಿವೇಶನ ಇದ್ದಾಗಲೇ ಕುಮಾರಸ್ವಾಮಿ ಸದನಕ್ಕೆ ಬರೋದಿಲ್ಲ. ಆಮೇಲೆ ಎಲ್ಲಿದ್ಯಪ್ಪ ಕುಮಾರಸ್ವಾಮಿ ಅಂತಾ ಅವರನ್ನು ಹುಡುಕಬೇಕು. ಸದನ ಕರೆಯಿರಿ ಅನ್ನೋದು ಆಮೇಲೆ ಬರದೆ ಇರೋದು. ಸಿದ್ದರಾಮಯ್ಯ ಮಾತಿನಂತೆ ಇವ್ರು ಮಾತಾಡ್ತಿರೋದು. ಬಾಯಿಗೆ ಬಂದಂತೆ ದಿಕ್ಕು ಇಲ್ಲದಂತೆ ಗುಂಡು ಹೊಡೆಯುತ್ತಿದ್ದಾರೆ ಎಂದರು.
ರಾಮನಗರ ಜಿಲ್ಲೆಯಲ್ಲಿ ನಾವು ಚೆನ್ನಾಗಿ ಕೆಲಸ ಮಾಡ್ತಿದ್ದೇವೆ ಎಂದ ಸಚಿವರು, ನಮ್ಮ ಪಕ್ಷ ನಮ್ಮ ಸರ್ಕಾರ ಜನರ ಪರವಾಗಿರುವ ಸರ್ಕಾರ. ಇದು ಯಾವುದೋ, ಕಾಂಗ್ರೆಸ್, ಜೆಡಿಎಸ್ ನಂತೆ ಪ್ರವೈಟ್ ಕಂಪನಿ ತರ ಅಲ್ಲ. ನಮ್ಮಲ್ಲಿ ಯಾರು ಏನು ಬೇಕಾದರೂ ಆಗಬಹುದು. ಆದರೆ ಅಲ್ಲಿ ಕುಟುಂಬಕ್ಕಷ್ಟೇ ಅಧಿಕಾರ.
ಸೋನಿಯಾ ಗಾಂಧಿ ಕಂಪನಿ, ರಾಹುಲ್ ಗಾಂಧಿ ಕಂಪನಿ, ಪ್ರಿಯಾಂಕಾ ಗಾಂಧಿ ಕಂಪನಿ. ರಾಮನಗರದಲ್ಲಿ ಕುಮಾರಸ್ವಾಮಿದು ಒಂದು ಕಂಪನಿ. ಈ ಸಮಾಜದಲ್ಲಿ ಯಾವುದಾದರೂ ಅರ್ಥ ಇಲ್ಲದೆ ಇರೋ ಪಕ್ಷಗಳು ಅಂದರೆ ಇವುಗಳೇ. ಬರುವ ಚುನಾವಣೆಯಲ್ಲಿ ರಾಮನಗರದಲ್ಲಿ ನಾವು ಮೆಜಾರಿಟಿನೇ ತೆಗೆದುಕೊಳ್ತೇವೆ. ಅಲ್ಲಿ ಎಲ್ಲ ತರ ಇದ್ದಾರೆ, ಬಂಡೆ ಜೊತೆ ಕುಮಾರಸ್ವಾಮಿನೂ ಇದ್ದಾರೆ ಎಂದು ವ್ಯಂಗ್ಯವಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


