ಮಹಮ್ಮದ್ ಅಲಿ ಜಿನ್ನಾ ಜೊತೆ ಕೈ ಜೋಡಿಸಿ ದೇಶ ಒಡೆದವರು ಕಾಂಗ್ರೆಸ್ಸಿಗರು: ಗೋವಿಂದ ಕಾರಜೋಳ
ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ನಾನು ಕಂಡ ಪ್ರಖರ ದೇಶಭಕ್ತ ಪ್ರಧಾನಿಯೆಂದರೆ ಅದು ಮೋದಿ ಅವರೇ. ಮಹಮ್ಮದ್ ಅಲಿ ಜಿನ್ನಾ ಜೊತೆ ಕೈ ಜೋಡಿಸಿದವರು ಕಾಂಗ್ರೆಸ್ಸಿಗರು. ದೇಶ ಒಡೆದವರು ಕಾಂಗ್ರೆಸ್ಸಿಗರು.

ಬೆಳಗಾವಿ: ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ನಾನು ಕಂಡ ಪ್ರಖರ ದೇಶಭಕ್ತ ಪ್ರಧಾನಿಯೆಂದರೆ ಅದು ಮೋದಿ ಅವರೇ. ಮಹಮ್ಮದ್ ಅಲಿ ಜಿನ್ನಾ ಜೊತೆ ಕೈ ಜೋಡಿಸಿದವರು ಕಾಂಗ್ರೆಸ್ಸಿಗರು. ದೇಶ ಒಡೆದವರು ಕಾಂಗ್ರೆಸ್ಸಿಗರು. ಇಂಥವರು ಹರ್‌ಘರ್ ತಿರಂಗಾ ಬಗ್ಗೆ ಮಾತನಾಡುವುದು ಸರಿಯೇ?’ ಎಂದು ಅವರು ಸಚಿವ ಗೋವಿಂದ ಕಾರಜೋಳ ಪ್ರಶ್ನಿಸಿದ್ದಾರೆ..
ಬೆಳಗಾವಿಯಲ್ಲಿ ಮಾತನಾಡಿದ ಅವರು, ‘ಸಿದ್ದರಾಮಯ್ಯ ಅವರ ಈಗಿನ ಆರೋಪಗಳು ವಿಚಿತ್ರವಾಗಿವೆ. ಕಾಂಗ್ರೆಸ್ಸಿಗರಿಗೆ ಅಷ್ಟು ದೇಶಭಕ್ತಿ ಇದ್ದರೆ ದೇಶ ಹೋಳಾಗುತ್ತಿರಲಿಲ್ಲ. ತಾವು ಅಹಿಂದ ನಾಯಕ ಎಂದು ಪದೇಪದೇ ಹೇಳಿಕೊಳ್ಳುತ್ತಾರೆ. ಆದರೆ, ಮೋದಿ ಅವರು ಇವರಿಗಿಂತ ದೊಡ್ಡ ಅಹಿಂದ ನಾಯಕ’ ಎಂದರು.
ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉತ್ತಮ ಆಡಳಿತ ನೀಡುವುದನ್ನು ಅರಗಿಸಿಕೊಳ್ಳದ ಕಾಂಗ್ರೆಸ್ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಎಬ್ಬಿಸಿದ್ದು ಅಪ್ರಸ್ತುತ, ಕಾಂಗ್ರೆಸ್ ನವರಿಗೆ ಬುದ್ದಿ ಭ್ರಮೆಯಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಉತ್ತಮ ಆಡಳಿತ, ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಒತ್ತು ನೀಡುತ್ತಿದ್ದಾರೆ. ದಕ್ಷತೆ, ಪ್ರಮಾಣಿಕತೆಯಿಂದ ಕೆಲಸ ಮಾಡುತ್ತಿರುವುದು ಕಾಂಗ್ರೆಸ್ ಗೆ ಅರಿಸಿಕೊಳ್ಳಲು ಆಗುತ್ತಿಲ್ಲ. ಸುಳ್ಳು ಹೇಳುವುದು ಕಾಂಗ್ರೆಸ್ ಗೆ ಕಾಮನ್ ಆಗಿದೆ ಎಂದು ಹರಿಹಾಯ್ದರು.
40% ಸರಕಾರ ಎಂದು ಆರೋಪಿಸುತ್ತಿದ್ದಾರೆ. ಅಂಥದ್ದೊಂದು ಒಂದು ಕೇಸ್ ಇದ್ದರೆ ದಾಖಲೆ ಕೊಡಿ ಎಂದರೂ ಮಾಡಲಿಲ್ಲ. ನಾವು ಪ್ರಾಮಾಣಿಕಯಿಂದ ಕೆಲಸ ಮಾಡುತ್ತಿದ್ದೇವೆ ಎಂದರು. ಕಾಂಗ್ರೆಸ್ ಸರಕಾರದಲ್ಲಿ ಈ ಹಿಂದೆ ಮಾಡಿದ ಆರೋಪದ ಬಗ್ಗೆ ಒಂದೂ ಕ್ರಮ ಕೈಗೊಳ್ಳಲಿಲ್ಲ. ಕಾಂಗ್ರೆಸ್ ಮೋದಿ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ದೇಶದಲ್ಲಿ ಸ್ವಾತಂತ್ರ್ಯ ಬಂದ ಬಳಿಕ ಇಲ್ಲಿಯವರೆಗೆ ಮೋದಿ ಹೊರತು ಪಡಿಸಿದರೆ ಯಾವ ಪ್ರಧಾನಿಯೂ ದೇಶ ಭಕ್ತ ನಾಗಿರಲಿಲ್ಲ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


