ರಾಜಕೀಯ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಆಧಾರ ರಹಿತ, ಸುಳ್ಳು; ಇನ್ನೂ ಹೆಚ್ಚಿನ ಜನಪರ ಕೆಲಸ ಮಾಡುವೆ: ಮುಖ್ಯಮಂತ್ರಿ ಬೊಮ್ಮಾಯಿ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವರದಿಗಳು ಆಧಾರ ರಹಿತ ಮತ್ತು ಸುಳ್ಳು ಎಂದು ಗುರುವಾರ ಹೇಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇಂತಹ ವಿಚಾರಗಳ ಬಗ್ಗೆ ಚರ್ಚೆ ಮಾಡುವ ಬದಲು ಇನ್ನೂ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಹಾಗೂ ಪಕ್ಷ ಬಲಪಡಿಸಲು ಪ್ರತಿದಿನ 2 ಗಂಟೆ ಹೆಚ್ಚಿನ ಕೆಲಸ ಮಾಡುವುದಾಗಿ ತಿಳಿಸಿದರು.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಆಧಾರ ರಹಿತ, ಸುಳ್ಳು; ಇನ್ನೂ ಹೆಚ್ಚಿನ ಜನಪರ ಕೆಲಸ ಮಾಡುವೆ: ಮುಖ್ಯಮಂತ್ರಿ ಬೊಮ್ಮಾಯಿ
ಮುಖ್ಯಮಂತ್ರಿ ಬೊಮ್ಮಾಯಿ
Published On :

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವರದಿಗಳು ಆಧಾರ ರಹಿತ ಮತ್ತು ಸುಳ್ಳು ಎಂದು ಗುರುವಾರ ಹೇಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇಂತಹ ವಿಚಾರಗಳ ಬಗ್ಗೆ ಚರ್ಚೆ ಮಾಡುವ ಬದಲು ಇನ್ನೂ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಹಾಗೂ ಪಕ್ಷ ಬಲಪಡಿಸಲು  ಪ್ರತಿದಿನ 2 ಗಂಟೆ ಹೆಚ್ಚಿನ ಕೆಲಸ ಮಾಡುವುದಾಗಿ ತಿಳಿಸಿದರು. 

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ತಮ್ಮ ಸರ್ಕಾರ ಸುಭದ್ರವಾಗಿದೆ. ಭದ್ರವಾಗಿ ಮುಂದುವರೆಯಲಿದೆ ಎಂದರು. ಮುಂದಿನ ದಿನಗಳಲ್ಲಿ ಜನರ ಬಳಿಗೆ ಹೋಗುತ್ತೇನೆ ಮತ್ತು ರಾಜ್ಯದಲ್ಲಿ ಪಕ್ಷ ಬಲಪಡಿಸುವ ಕೆಲಸ ಮಾಡುತ್ತೇನೆ ಎಂದು ಅವರು ಹೇಳಿದರು.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬೊಮ್ಮಾಯಿ,  ಕಾಂಗ್ರೆಸ್ ವರು ಏನೋ ಅಂದುಕೊಂಡಿದ್ದಾರೆ. ಅವರ ಮನಸ್ಸಿನಲ್ಲಿ ಅತಂತ್ರ ಇದೆ. ಅದನ್ನು ರಾಜ್ಯದ ತುಂಬಾ ಜನರ ಮನಸ್ಸಿನಲ್ಲಿ ಹರಡಬೇಕೆಂದಿದ್ದಾರೆ. ಜನ ಯಾರೂ ಅದನ್ನು ನಂಬುವ ಸ್ಥಿತಿಯಲ್ಲಿ ಇಲ್ಲ. ಅದಕ್ಕಿಂತ ಹೆಚ್ಚಾಗಿ ನಾನು ಸ್ಥಿತಪ್ರಜ್ಞನಾಗಿದ್ದೇನೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕಾಂಗ್ರೆಸ್ ಇದೇ ಮೊದಲ ಬಾರಿಗೆ ವದಂತಿ ಹರಡುತ್ತಿಲ್ಲ ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.