ಕಾಂಗ್ರೆಸ್ ನಾಯಕರ ರಾತ್ರಿ ಬದುಕಿನ ರಂಗ್-ಬಿರಂಗಿ ಬಗ್ಗೆ ದಂತಕತೆಗಳು ಮಾತ್ರವಲ್ಲ, ಗುಪ್ತ ಸಿಡಿಗಳೂ ಇವೆ!
‘ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಉದ್ಯೋಗ ಪಡೆಯಬೇಕು ಎಂದರೆ ಯುವತಿಯರು ಮಂಚ ಹತ್ತಬೇಕಾಗಿದೆ’ ಎಂದಿದ್ದ ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ವಿರುದ್ಧ ರಾಜ್ಯ ಕಾಂಗ್ರೆಸ್ ಕಿಡಿಕಾರಿದೆ. ಕಾಂಗ್ರೆಸ್ ಮಹಿಳಾ ವಿರೋಧಿ ಎಂದೂ ದೂರಿದೆ.

ಬೆಂಗಳೂರು: ‘ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಉದ್ಯೋಗ ಪಡೆಯಬೇಕು ಎಂದರೆ ಯುವತಿಯರು ಮಂಚ ಹತ್ತಬೇಕಾಗಿದೆ’ ಎಂದಿದ್ದ ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ವಿರುದ್ಧ ರಾಜ್ಯ ಕಾಂಗ್ರೆಸ್ ಕಿಡಿಕಾರಿದೆ. ಕಾಂಗ್ರೆಸ್ ಮಹಿಳಾ ವಿರೋಧಿ ಎಂದೂ ದೂರಿದೆ.
ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ನಾಯಕರ ರಾತ್ರಿ ಬದುಕಿನ ರಂಗ್-ಬಿರಂಗಿ ಬಗ್ಗೆ ಸಾಕಷ್ಟು ದಂತಕತೆಗಳು ಮಾತ್ರವಲ್ಲ, ಗುಪ್ತಸಿಡಿಗಳೂ ಇವೆ. ಜೂನಿಯರ್ ಖರ್ಗೆ ಅವರೇ, ಸಭ್ಯಸ್ಥರ ಮುಖವಾಡ ಹಾಕಿ ಸಮಾಜದ ಕಣ್ಣಿಗೆ ಗಣ್ಯರೆಂದು ಬಿಂಬಿಸಿಕೊಂಡ ಕಾಂಗ್ರೆಸ್ ಗೋಮುಖ ವ್ಯಾಘ್ರಗಳ ಪಟ್ಟಿ ನೀಡಿದರೆ ಸಮರ್ಥನೆ ಮಾಡಿಕೊಳ್ಳುವುದಕ್ಕೂ ನಿಮಗೆ ಕಷ್ಟವಾಗಬಹುದು ಎಂದಿದೆ.
ಸಾವಿರಾರು ಮಹಿಳೆಯರು, ಪ್ರತಿಭಾವಂತರು, ವಿದ್ಯಾವಂತರು ಕಷ್ಟಪಟ್ಟು ಅನೇಕ ಪರೀಕ್ಷೆಗಳನ್ನು ಉತ್ತೀರ್ಣರಾಗಿ ಕೆಲಸ ಗಿಟ್ಟಿಸಿಕೊಳ್ಳುತ್ತಾರೆ. ಪ್ರಿಯಾಂಕ ಖರ್ಗೆ ಅವರೇ, ನಿಮ್ಮ ಈ ಮಾತುಗಳು ಅಷ್ಟು ಜನ ಮಹಿಳೆಯರಿಗೆ ಅವಮಾನ ಮಾಡಿದಂತಲ್ಲವೇ? ಕೂಡಲೇ ಕ್ಷಮೆಯಾಚಿಸಿ ಎಂದು ಒತ್ತಾಯಿಸಿದೆ.
ಪ್ರಿಯಾಂಕ್ ಖರ್ಗೆ ಅವರೇ, ಸಹಾಯ ಮಾಡುವುದಾಗಿ ನಂಬಿಸಿ ಅಸಹಾಯಕ ಹೆಣ್ಣೊಬ್ಬಳ ಮೇಲೆ ಮೇಟಿ ಲೈಂಗಿಕ ದೌರ್ಜನ್ಯ ಎಸಗಿದ್ದು ನಿಮ್ಮ ಕಾಲದಲ್ಲೇ ಅಲ್ಲವೇ? ಯುಪಿಎ ಸರ್ಕಾರದಲ್ಲಿ ಪ್ರಭಾವಿಗಳಾಗಿದ್ದ ಕಾಂಗ್ರೆಸ್ ನಾಯಕರು ಮಹಿಳೆಯರ ಮೇಲೆ ನಡೆಸಿದ 'ದಿಗ್ವಿಜಯ' 'ಅಭಿಷೇಕ'ಗಳ ಸಿಡಿ ನಿಮ್ಮ ಮಂಚದ ಸರ್ಕಾರದ ಫಲವಲ್ಲವೇ? ಎಂದು ಪ್ರಶ್ನಿಸಿದೆ.
ಇದನ್ನೂ ಓದಿ: ಈ ಸರ್ಕಾರದಲ್ಲಿ ನೌಕರಿ ಬೇಕೆಂದರೆ ಯುವಕರು ಲಂಚ ಕೊಡಬೇಕು, ಯುವತಿಯರು ಮಂಚ ಹತ್ತಬೇಕು; ಇದು ಲಂಚ-ಮಂಚದ ಸರ್ಕಾರ: ಪ್ರಿಯಾಂಕ್ ಖರ್ಗೆ
ಮುಂದುವರಿದು, ಲಂಚ- ಮಂಚದ ಸರ್ಕಾರ ಎಂದು ಆರೋಪ ಮಾಡಿದ್ದ ಮಾಜಿ ಸಚಿವ ಪ್ರಿಯಾಂಕ ಖರ್ಗೆಯವರಿಗೆ 'ತಮ್ಮ ಮನೆಯ ಹೆಂಚು ತೂತು' ಎಂಬುದೇ ಗೊತ್ತಿಲ್ಲ. ಇವರು ಆರೋಪ ಮಾಡಿದ ಬೆನ್ನಲ್ಲೇ, ಜಯಮಾಲಾ ಅವರ ಲಂಚದ ಹಗರಣ ಬಯಲಾಗಿದೆ. ಹಾಗಾದರೆ ಲಂಚದ ಸರ್ಕಾರ ಯಾರದ್ದು? ಎಂದು ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
ಕಲಬುರಗಿಯ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಪ್ರಿಯಾಂಕ್ ಖರ್ಗೆ ಅವರು, ‘ಸರ್ಕಾರ ಹುದ್ದೆಗಳನ್ನು ಮಾರಾಟ ಮಾಡಲು ನಿಂತಿದೆ. ಯುವತಿಯರಿಗೆ ಉದ್ಯೋಗ ಬೇಕಾದರೆ ಮಂಚ ಹತ್ತಬೇಕು. ಯುವಕರಿಗೆ ಉದ್ಯೋಗ ಬೇಕಾದರೆ ಲಂಚ ಕೊಡಬೇಕು ಎನ್ನುವಂತಾಗಿದ್ದು, ಇದೊಂದು ಲಂಚ–ಮಂಚದ ಸರ್ಕಾರ. ಯುವತಿಯ ಕೆಲಸ ಮಾಡಿಸಿಕೊಡಲು ಮಂಚ ಹತ್ತಲು ಸಚಿವರೊಬ್ಬರು ಹೇಳಿದ್ದರು. ಹಗರಣ ಬೆಳಕಿಗೆ ಬಂದ ಬಳಿಕ ಅವರು ರಾಜೀನಾಮೆ ನೀಡಿದ್ದೇ ನನ್ನ ಮಾತಿಗೆ ಸಾಕ್ಷಿಯಾಗಿದೆ’ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


