ಸಿದ್ದರಾಮಯ್ಯ ಸ್ವತಂತ್ರ ಭಾರತದ ಜಿನ್ಹಾ! ಬಿಜೆಪಿ ತೀವ್ರ ಟೀಕೆ
ಸಾವರ್ಕರ್ ಫೋಟೋ ಬಗ್ಗೆ ಸಿದ್ದರಾಮಯ್ಯ ಅವರ ಪ್ರಶ್ನೆ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿರುವ ಬಿಜೆಪಿ, ಟಿಪ್ಪುವಿನ ಫೋಟೋವನ್ನು ಎಲ್ಲಿ ಬೇಕಾದರೂ ಹಾಕಬಹುದು ಆದರೆ ಸಾವರ್ಕರ್ ಫೋಟೋ ಹಾಕಲು ಮಾತ್ರ ಸಿದ್ದರಾಮಯ್ಯ ಅವರಿಗೆ ಧರ್ಮ ಅಡ್ಡ ಬರುತ್ತದೆ ಎಂದಿದೆ.

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ವತಂತ್ರ ಭಾರತದ ಜಿನ್ಹಾ ಎಂದು ರಾಜ್ಯ ಬಿಜೆಪಿ ಆರೋಪಿಸಿದೆ. ಸಾವರ್ಕರ್ ಫೋಟೋ ಬಗ್ಗೆ ಸಿದ್ದರಾಮಯ್ಯ ಅವರ ಪ್ರಶ್ನೆ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿರುವ ಬಿಜೆಪಿ, ಟಿಪ್ಪುವಿನ ಫೋಟೋವನ್ನು ಎಲ್ಲಿ ಬೇಕಾದರೂ ಹಾಕಬಹುದು ಆದರೆ ಸಾವರ್ಕರ್ ಫೋಟೋ ಹಾಕಲು ಮಾತ್ರ ಸಿದ್ದರಾಮಯ್ಯ ಅವರಿಗೆ ಧರ್ಮ ಅಡ್ಡ ಬರುತ್ತದೆ. ಓಲೈಕೆ ರಾಜಕಾರಣದ ಪರಮಾವಧಿಯಿದು. ಜಿಹಾದಿ ಮಾನಸಿಕತೆಯನ್ನು ಕಾಂಗ್ರೆಸ್ ಪಕ್ಷ ಬೆಳೆಸುತ್ತಿರುವುದು ನಿಜಕ್ಕೂ ಆತಂಕಕಾರಿ ಸಂಗತಿ ಎಂದಿದೆ.
ಮುಸ್ಲಿಂ ಏರಿಯಾಗಳನ್ನು ಈ ದೇಶದ ಅಖಂಡತೆಯಿಂದ ಛಿದ್ರಗೊಳಿಸುವುದಕ್ಕೆ ಹೊರಟಿದ್ದೀರಾ?ಎಂದು ಪ್ರಶ್ನಿಸಿದ್ದು, ಮತ್ತೊಮ್ಮೆ ದೇಶ ವಿಭಜಿಸುವ ಕಾಂಗ್ರೆಸ್ ಪಕ್ಷದ ಹಿಡನ್ ಅಜೆಂಡಾ ಸಿದ್ದರಾಮಯ್ಯ ಬಾಯಿಂದ ಬಹಿರಂಗವಾಗಿದೆ.ಸಿದ್ದರಾಮಯ್ಯ ಬೀದಿಗೆ ಬಿಟ್ಟ ರಕ್ತಬೀಜಾಸುರರೇ ಶಿವಮೊಗ್ಗದಲ್ಲಿ ಗಲಾಟೆ ಸೃಷ್ಟಿಸಿದ್ದು ಎಂಬ ಗುಮಾನಿ ಈಗ ಸತ್ಯವಾಗಿದೆ ಎಂದು ಹೇಳಿದೆ.
ಜಿಹಾದಿ ಮಾನಸಿಕತೆಯ ಉಗ್ರರ ಪರವಾಗಿ ಸಿದ್ದರಾಮಯ್ಯ ವಕಾಲತ್ತು ವಹಿಸುವುದರಲ್ಲಿ ಅಚ್ಚರಿಯಿಲ್ಲ ಎಂದು ಬಿಜೆಪಿ ಆರೋಪಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


