ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ದು ತಪ್ಪು, ಇದು ಚುನಾವಣಾ ವರ್ಷ, ಜಾಗ್ರತೆಯಿಂದ ಮಾತಾಡಬೇಕು: ಆರಗ ಜ್ಞಾನೇಂದ್ರ
ಕೊಡಗು ಜಿಲ್ಲೆ ಪ್ರವಾಸ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹಸಚಿವ ಆರಗ ಜ್ಞಾನೇಂದ್ರ ಇಂದು ಶುಕ್ರವಾರ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಮುಂದೆ ಪ್ರತಿಕ್ರಿಯಿಸಿದ್ದು, ಕಾರಿಗೆ ಮೊಟ್ಟೆ ಎಸೆದ ಕೃತ್ಯ ತಪ್ಪು ಎಂದು ಹೇಳಿದ್ದಾರೆ.

ಬೆಂಗಳೂರು: ಕೊಡಗು ಜಿಲ್ಲೆ ಪ್ರವಾಸ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹಸಚಿವ ಆರಗ ಜ್ಞಾನೇಂದ್ರ ಇಂದು ಶುಕ್ರವಾರ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಮುಂದೆ ಪ್ರತಿಕ್ರಿಯಿಸಿದ್ದು, ಕಾರಿಗೆ ಮೊಟ್ಟೆ ಎಸೆದ ಕೃತ್ಯ ತಪ್ಪು ಎಂದು ಹೇಳಿದ್ದಾರೆ.
ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮಾಡಲು ಅವಕಾಶ ಇದೆ. ಆದರೆ ಕಾನೂನನ್ನು ಕೈಗೆ ತೆಗೆದುಕೊಂಡು ಹಿಂಸಾತ್ಮಕ ಧೋರಣೆ ಹೊಂದುವ ಅಧಿಕಾರ ಯಾರಿಗೂ ಇಲ್ಲ, ನಾನು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಈಗಾಗಲೇ 9 ಜನರನ್ನು ಬಂಧಿಸಿದ್ದಾರೆ ಎಂದು ಹೇಳಿದರು.
ಸಂಯಮದಿಂದ ಮಾತನಾಡಬೇಕು: ವಿಧಾನಸಭೆ ಚುನಾವಣೆಗೆ ದಿನ ಸಮೀಪಿಸುತ್ತಿದೆ. ಪರಿಸ್ಥಿತಿ ಸೂಕ್ಷ್ಮವಾಗಿದೆ. ಎಲ್ಲರೂ ಸಂಯಮದಿಂದ ಮಾತನಾಡಬೇಕು. ಎಲ್ಲರೂ ಗಡಿದಾಟಿ ಮೀರಿ ಮಾತನಾಡಬಾರದು. ಕಾಂಗ್ರೆಸ್ ಕಾರ್ಯಕರ್ತನೊಬ್ಬ ಶಿವಮೊಗ್ಗದಲ್ಲಿ ಸಾವರ್ಕರ್ ಫೋಟೋವನ್ನು ಇಳಿಸಿ ಇಂಗ್ಲಿಷರ ಬೂಟ್ ನೆಕ್ಕಿದವನು ಸಾವರ್ಕರ್ ಎಂದು ಹೇಳುತ್ತಾನೆ. ಸಾವರ್ಕರ್ ಫೋಟೋ ಸರ್ಕಲ್ ನಲ್ಲಿ ಹಾಕಿದಾಗ ಸಿದ್ದರಾಮಯ್ಯನವರು ಮುಸ್ಲಿಂ ಏರಿಯಾದಲ್ಲಿ ಏಕೆ ಹಾಕಿದ್ದು ಎನ್ನುತ್ತಾರೆ. ನಮ್ಮ ದೇಶದ ಸಮಗ್ರತೆ, ಏಕತೆಗೆ ಧಕ್ಕೆ ತರುವಂತಹ ಮಾತುಗಳನ್ನು ಆಡಿದರೆ ಜನರು ಆಕ್ರೋಶಗೊಳ್ಳುತ್ತಾರೆ.
ರಾಜಕಾರಣ ಎಲ್ಲರೂ ಮಾಡೋಣ, ಜನರ ಶಾಂತಿಯನ್ನು ಗಮನದಲ್ಲಿಟ್ಟುಕೊಂಡು ನಾವೆಲ್ಲರೂ ಮಾತನಾಡಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


