ಸಿದ್ದರಾಮಯ್ಯ ಹತ್ಯೆಗೆ RSS, ಬಿಜೆಪಿ ಸಂಚು: ಶಿವರಾಮ್ ಗಂಭೀರ ಆರೋಪ; ತಂದೆಗೆ ಜೀವ ಬೆದರಿಕೆ ಇದೆ ಎಂದ ಯತೀಂದ್ರ ಸಿದ್ದರಾಮಯ್ಯ
ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹತ್ಯೆಗೆ ಆರ್ ಎಸ್ಎಸ್ ಮತ್ತು ಬಿಜೆಪಿ ಸಂಚು ರೂಪಿಸಿದೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಶಿವರಾಮ್ ಅವರು ಆರೋಪ ಮಾಡಿದ್ದಾರೆ.

ಮೈಸೂರು: ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹತ್ಯೆಗೆ ಆರ್ ಎಸ್ಎಸ್ ಮತ್ತು ಬಿಜೆಪಿ ಸಂಚು ರೂಪಿಸಿದೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಶಿವರಾಮ್ ಅವರು ಆರೋಪ ಮಾಡಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಿವರಾಮ್ ಅವರು, ಸಿದ್ದರಾಮಯ್ಯ ಹತ್ಯೆಗೆ ಬಿಜೆಪಿ ಮತ್ತು ಆರ್‌ಎಸ್‍ಎಸ್ ಸಂಚು ಮಾಡಿದೆ. ಅದರ ಟ್ರಯಲ್ ಗುರುವಾರ ಮಡಿಕೇರಿಯಲ್ಲಿ ನಡೆದಿದೆ. ಗಾಂಧೀಜಿಯ ರೀತಿ ಸಾರ್ವಜನಿಕರ ಮಧ್ಯೆಯೆ ಸಿದ್ದರಾಮಯ್ಯರನ್ನು ಕೊಲ್ಲಲು ಬಿಜೆಪಿ, ಆರ್‌ಎಸ್‍ಎಸ್ ಸಂಚು ಮಾಡಿದೆ. ಸಿದ್ದರಾಮಯ್ಯ ಹತ್ಯೆ ಮೂಲಕ ಹಿಂದುಳಿದ ವರ್ಗಗಳ ಮಹಾನ್ ನಾಯಕನ ಯುಗಾಂತ್ಯ ಮಾಡಲು ಬಿಜೆಪಿ ಸಂಚು ಮಾಡಿದೆ ಎಂದು ಅವರು ಕಿಡಿಕಾರಿದ್ದಾರೆ.
ತಂದೆಗೆ ಜೀವ ಬೆದರಿಕೆ ಇದೆ: ಯತೀಂದ್ರ ಸಿದ್ದರಾಮಯ್ಯ
ಮತ್ತೊಂದೆಡೆ ಯತೀಂದ್ರ, ಸಾವರ್ಕರ್ ಬಗ್ಗೆ ಮಾತನಾಡಿದ್ದಕ್ಕೆ ನಮ್ಮ ತಂದೆ ಸಿದ್ದರಾಮಯ್ಯ ಅವರಿಗೆ ಜೀವಬೆದರಿಕೆಯಿದೆ. ಹಿಂದೂ ಸಂಘಟನೆಗಳಿಂದಲೇ ಬೆದರಿಕೆಗಳು ಬಂದಿವೆ ಎಂದು ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸ್ಫೋಟಕ ಹೇಳಿಕೆ ನೀಡಿದ್ದಾರೆ.
'ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ವಿರೋಧ ಪಕ್ಷದ ನಾಯಕರುಗಳಿಗೆ ಭದ್ರತೆ ಕೊಡಲು ವಿಫಲವಾಗಿದೆ. ಇನ್ನು ಜನರಿಗೆ ಹೇಗೆ ಭದ್ರತೆ ಕೊಡುತ್ತಾರೋ ಗೊತ್ತಿಲ್ಲ. ಜೊತೆಗೆ ಮೊಟ್ಟೆ ಒಡೆಸಿ ಹೇಡಿ ಕೃತ್ಯ ಮಾಡಿದೆ. ಬಿಜೆಪಿ ಸರ್ಕಾರ ಮೊದಲು ರಾಜ್ಯದಲ್ಲಿ ನಡೆಯುತ್ತಿರುವ ಕೋಮು ಗಲಭೆ ಬಗ್ಗೆ ಗಮನ ಹರಿಸಬೇಕು. ಅದು ಬಿಟ್ಟು ವಿರೋಧ ಪಕ್ಷಗಳು ನೀಡುವ ಸಣ್ಣ ಪುಟ್ಟ ಹೇಳಿಕೆಗಳನ್ನು ಹಿಡಿದುಕೊಂಡು, ಅನಗತ್ಯ ಗೊಂದಲ ಸೃಷ್ಟಿಸಿ ಅಪಪ್ರಚಾರ ಮಾಡುತ್ತಿದೆ. ಟೆರರಿಸ್ಟ್‌ಗಳು ಕೂಡಾ ದೇಶ ಪ್ರೇಮಿಗಳೇ ಆಗಿರುತ್ತಾರೆ. ಆದರೆ ಅವರು ಹಿಡಿಯುವ ದಾರಿ ತಪ್ಪಲ್ವಾ? ಅದರಂತೆಯೇ ಸಾವರ್ಕರ್ ಕೂಡಾ ದೇಶ ಪ್ರೇಮಿಯೇ ಆಗಿರಬಹುದು. ಆದರೆ ಆ ದೇಶ ಪ್ರೇಮವನ್ನು ವ್ಯಕ್ತಪಡಿಸುವುದಕ್ಕೋಸ್ಕರ ಹಿಂದೂಯೇತರ ಪ್ರಜೆಗಳನ್ನು ದೇಶದ ಭಾಗವಾಗಿರಬಾರದು, ಅವರು 2ನೇ ದರ್ಜೆಯ ಪ್ರಜೆಗಳಾಗಿರಬೇಕು ಹಾಗೂ ಅವರನ್ನು ದ್ವೇಷಿಸುವುದು ಈ ದೇಶಕ್ಕೆ ಮಾರಕ ಎಂದು ಹೇಳಿದರು.
ಗುರುವಾರ ಮಡಿಕೇರಿ ಪ್ರವಾಸ ಕೈಗೊಂಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಾರಿಗೆ ಹಿಂದೂ ಸಂಘಟನೆಯವರು ಮೊಟ್ಟೆ ಒಡೆದು ಅಗೌರವ ತೋರಿದ್ದರು. ಈ ಘಟನೆಗೆ ಕಾಂಗ್ರೆಸ್ ಮಾತ್ರವಲ್ಲದೇ ಬಿಜೆಪಿ, ಜೆಡಿಎಸ್ ಕೂಡಾ ಅಸಮಾಧಾನ ವ್ಯಕ್ತಪಡಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


