RSS 'ಪ್ಯಾಂಟು' ತೊಟ್ಟವನಿಗೆ ಕಾಂಗ್ರೆಸ್ ವೇಷ ತೋಡಿಸಿದ ಮಾತ್ರಕ್ಕೆ ಕಾಗೆ ನವಿಲಾಗುತ್ತದೆಯೇ?: ಪೋಟೋ ಸಹಿತ ಸತ್ಯ ಬಿಚ್ಚಿಟ್ಟ ‘ಕೈ’!
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಸಂಪತ್ ಕಾಂಗ್ರೆಸ್ ಕಾರ್ಯಕರ್ತ ಎಂಬ ಬಿಜೆಪಿ ಆರೋಪಕ್ಕೆ ಕಾಂಗ್ರೆಸ್ ಫೋಟೋ ಸಹಿತ ಸತ್ಯ ಬಿಚ್ಚಿಟ್ಟಿದ್ದು, ಬಿಜೆಪಿ ಮತ್ತು ಆರ್ ಎಸ್ಎಸ್ ತನ್ನ ಅಜೆಂಡಾ ಸ್ಥಾಪಿಸಲು...

ಬೆಂಗಳೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಸಂಪತ್ ಕಾಂಗ್ರೆಸ್ ಕಾರ್ಯಕರ್ತ ಎಂಬ ಬಿಜೆಪಿ ಆರೋಪಕ್ಕೆ ಕಾಂಗ್ರೆಸ್ ಫೋಟೋ ಸಹಿತ ಸತ್ಯ ಬಿಚ್ಚಿಟ್ಟಿದ್ದು, ಬಿಜೆಪಿ ಮತ್ತು ಆರ್ ಎಸ್ಎಸ್ ತನ್ನ ಅಜೆಂಡಾ ಸ್ಥಾಪಿಸಲು ತಮ್ಮಲ್ಲಿನ ಮುಗ್ದ ಕಾರ್ಯಕರ್ತರಿಗೆ ಯಾವ ವೇಷವನ್ನು ಬೇಕಿದ್ದರೂ ಹಾಕಿ ಕಳಿಸುತ್ತವೆ, ಯಾವ ಕೃತ್ಯಗಳನ್ನು ಬೇಕಿದ್ದರೂ ಮಾಡಿಸುತ್ತವೆ, ಅವರನ್ನೇ ಕೊಂದು ಚಿತೆಯಲ್ಲಿ ಚಳಿ ಕಾಯಿಸಿಕೊಳ್ಳುತ್ತವೆ ಎಂದು ತಿರುಗೇಟು ನೀಡಿದೆ.
ಆರ್ ಎಸ್ಎಸ್ ‘ಪ್ಯಾಂಟು’ ತೊಟ್ಟವನಿಗೆ ಕಾಂಗ್ರೆಸ್ ವೇಷ ತೋಡಿಸಿದ ಮಾತ್ರಕ್ಕೆ ಕಾಗೆ ನವಿಲಾಗುತ್ತದೆಯೇ? ಎಂದು ಕರ್ನಾಟಕ ಕಾಂಗ್ರೆಸ್ ಬಿಜೆಪಿಗೆ ಖಾರವಾಗಿಯೇ ಪ್ರಶ್ನಿಸಿದೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ತಾನು ಕಾಂಗ್ರೆಸ್ ಕಾರ್ಯಕರ್ತ ಎಂದು ಹೇಳಿದ್ದ ಸಂಪತ್ ಆರ್ ಎಸ್ ಎಸ್ ಸಮವಸ್ತ್ರ ಧರಿಸಿರುವ ಪೋಟೋ ಹಂಚಿಕಿೊಂಡಿದೆ.
ಬಿಜೆಪಿ ಹೇಳುವ ಸುಳ್ಳುಗಳಿಗೆ ‘ಸತ್ಯ’ವೇ ಕಂಗೆಟ್ಟು ದೇಶ ಬಿಟ್ಟು ಓಡಿ ಹೋಗಲಿದೆ! ಕಾರಿಗೆ ಮೊಟ್ಟೆ ಎಸೆದವರು ಕಾಂಗ್ರೆಸ್ನವರು ಎಂಬ ಕಟ್ಟುಕತೆ ಸೃಷ್ಟಿಸುವ ಮುನ್ನ ಉತ್ತರಿಸಿ. ಈ ವ್ಯಕ್ತಿಯೊಂದಿಗೆ ಅಪ್ಪಚ್ಚು ರಂಜನ್ ಅವರಿಗೆ ಏನು ಕೆಲಸ? ಸ್ಥಳೀಯ ಕಾಂಗ್ರೆಸ್ ಮುಖಂಡರಿಗೇ ಪರಿಚಯವಿಲ್ಲದ ಆತ ಕಾಂಗ್ರೆಸ್ ಕಾರ್ಯಕರ್ತನಾಗುವುದು ಹೇಗೆ? ಎಂದು ಪ್ರಶ್ನಿಸಿದೆ.
ಮೊಟ್ಟೆ ಎಸೆದಿದ್ದು ಕಾಂಗ್ರೆಸ್ ಕಾರ್ಯಕರ್ತ ಎಂಬ ಕಾಗಕ್ಕ ಗುಬ್ಬಕ್ಕನ ಕತೆ ಕಟ್ಟಿರುವ ಬಿಜೆಪಿ ಉತ್ತರಿಸಬೇಕು. ಅವರು ಕಾಂಗ್ರೆಸ್ ಕಾರ್ಯಕರ್ತರೇ ಆಗಿದ್ದರೆ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಠಾಣೆಯಿಂದ ಜಾಮೀನು ಕೊಟ್ಟು ಕರೆತಂದಿದ್ದೇಕೆ? ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೆ ಆತ ಅಪ್ಪಚ್ಚು ರಂಜನ್ಗೇಕೆ ಆಪ್ತನಾಗಿದ್ದಾನೆ ಎಂದು ಪ್ರಶ್ನಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


