ರಾಜಕೀಯ

ಮಾಂಸ ತಿಂದು ದೇವಸ್ಥಾನಕ್ಕೆ ಹೋಗುತ್ತೇನೆ ಅನ್ನೋದು ಭಂಡತನ: ಬಿ ವೈ ವಿಜಯೇಂದ್ರ ವಾಗ್ದಾಳಿ

ಯಾರು ಏನು ಬೇಕಾದರೂ ತಿನ್ನಬಹುದು, ಅದು ಅವರ ಸ್ವಾತಂತ್ರ್ಯ, ಆದರೆ ಮಾಂಸ ತಿಂದು ದೇವಸ್ಥಾನಕ್ಕೆ ಹೋಗುವ ಭಂಡತನವನ್ನು ಯಾರೂ ಒಪ್ಪುವುದಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ಧಾರೆ.

ಮಾಂಸ ತಿಂದು ದೇವಸ್ಥಾನಕ್ಕೆ ಹೋಗುತ್ತೇನೆ ಅನ್ನೋದು ಭಂಡತನ: ಬಿ ವೈ ವಿಜಯೇಂದ್ರ ವಾಗ್ದಾಳಿ
ಬಿ.ವೈ ವಿಜಯೇಂದ್ರ
Published On :

ಗದಗ: ಯಾರು ಏನು ಬೇಕಾದರೂ ತಿನ್ನಬಹುದು, ಅದು ಅವರ ಸ್ವಾತಂತ್ರ್ಯ, ಆದರೆ ಮಾಂಸ ತಿಂದು ದೇವಸ್ಥಾನಕ್ಕೆ ಹೋಗುವ ಭಂಡತನವನ್ನು ಯಾರೂ ಒಪ್ಪುವುದಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ಧಾರೆ.

ಗದಗದಲ್ಲಿ ಮಾತನಾಡಿದ ವಿಜಯೇಂದ್ರ ಅವರು ‘ಈ ರಾಜ್ಯದಲ್ಲಿ ಸಂಸ್ಕೃತಿ ಪರಂಪರೆ ಇದೆ.. ಧಾರ್ಮಿಕ ಶ್ರದ್ಧೆ ಇದೆ, ದೈವವನ್ನು ನಂಬಿ ಜೀವನ ನಡೆಸುವ ಅಪಾರ ಜನ ಸಂಖ್ಯೆ ಇದೆ. ಉನ್ನತ ಸ್ಥಾನದಲ್ಲಿರುವವರು ಬಹಿರಂಗವಾಗಿ ಹೇಳಿಕೆ ನೀಡ್ತಿದ್ದಾರೆ. ರಾಜಕಾರಣಿಗಳ ಹೇಳಿಕೆಗಳಿಂದ ಇತರರಿಗೆ ಘಾಸಿ ಆಗಬಾರದು ಎಂದು ತಿಳಿಸಿದ್ಧಾರೆ.

ಅಧಿಕಾರಕ್ಕೆ ಬಂದೇ ಬಿಟ್ಟಿದ್ದೇವೆ ಅನ್ನೋ ವಿಶ್ವಾಸದಲ್ಲಿ ಕಾಂಗ್ರೆಸ್ ಇದೆ. ಬಿಜೆಪಿ ಹೈಕಮಾಂಡ್​ ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರಿಗೆ ಉನ್ನತ ಸ್ಥಾನ ಕೊಟ್ಟಿದ್ದು ಕಾಂಗ್ರೆಸ್ ಗೆ ಆಘಾತ ಆಗಿದೆ ಎಂದು ಲೇವಡಿ ಮಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.