ಹಾವೇರಿ ಗ್ರಾಮ ಪಂಚಾಯಿತಿಗೂ ಕಾಲಿಟ್ಟ ರೆಸಾರ್ಟ್ ರಾಜಕೀಯ: ವಿಮಾನದಲ್ಲಿ ಬಂದು ಅಧ್ಯಕ್ಷರ ಪದಚ್ಯುತಿಗೊಳಿಸಿದ ಸದಸ್ಯರು!
ಇಷ್ಟು ದಿನ ವಿಧಾನಸೌಧಕ್ಕೆ ಸೀಮಿತವಾಗಿದ್ದ ರೆಸಾರ್ಟ್ ಪಾಲಿಟಿಕ್ಸ್ ಈಗ ಗ್ರಾಮ ಪಂಚಾಯತಿಗೂ ಕಾಲಿಟ್ಟಿದೆ. ರಾಣೆಬೆನ್ನೂರು ತಾಲೂಕು ದೇವರಗುಡ್ಡ ಗ್ರಾಮ ಪಂಚಾಯತಿ ಸದಸ್ಯರು ಬೆಂಗಳೂರಿನ ರೆಸಾರ್ಟ್ ನಲ್ಲಿ ದಿನ ಕಳೆದು, ನಾವು ಯಾರಿಗೂ ಕಮ್ಮಿ ಇಲ್ಲವೆಂಬಂತೆ ವಿಮಾನದಲ್ಲಿ ಆಗಮಿಸಿದ್ದಾರೆ.

ಬೆಂಗಳೂರು: ಇಷ್ಟು ದಿನ ವಿಧಾನಸೌಧಕ್ಕೆ ಸೀಮಿತವಾಗಿದ್ದ ರೆಸಾರ್ಟ್ ಪಾಲಿಟಿಕ್ಸ್ ಈಗ ಗ್ರಾಮ ಪಂಚಾಯತಿಗೂ ಕಾಲಿಟ್ಟಿದೆ. ರಾಣೆಬೆನ್ನೂರು ತಾಲೂಕು ದೇವರಗುಡ್ಡ ಗ್ರಾಮ ಪಂಚಾಯತಿ ಸದಸ್ಯರು ಬೆಂಗಳೂರಿನ ರೆಸಾರ್ಟ್ ನಲ್ಲಿ ದಿನ ಕಳೆದು, ನಾವು ಯಾರಿಗೂ ಕಮ್ಮಿ ಇಲ್ಲವೆಂಬಂತೆ ವಿಮಾನದಲ್ಲಿ ಆಗಮಿಸಿದ್ದಾರೆ.
ದೇವರಗುಡ್ಡದ ಗ್ರಾಮ ಪಂಚಾಯತಿ ಅಧ್ಯಕ್ಷ ಮಾಲತೇಶ ದುರಗಪ್ಪ ನಾಯರ್ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಗ್ರಾಮ ಪಂಚಾಯತಿ ಸದಸ್ಯರು ನಿರ್ಧರಿಸಿದ್ದರು. ಒಟ್ಟು 9 ಸದಸ್ಯರು ಬೆಂಗಳೂರಿನ ರೆಸಾರ್ಟ್ ನಲ್ಲಿ ಇರಿಸಲಾಗಿತ್ತು.
ರಾಣೆಬೆನ್ನೂರು ತಾಲೂಕು ದೇವರಗುಡ್ಡ ಗ್ರಾಮ ಪಂಚಾಯತಿಯಲ್ಲಿ ಒಟ್ಟು 13 ಸದಸ್ಯರಿದ್ದಾರೆ. ಅದರಲ್ಲಿ ದೇವರಗುಡ್ಡ ಮಾಲತೇಶ ಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕರಾದ ಸಂತೋಷ್ ಭಟ್ ಗುರೂಜಿ ಬಣದ 9 ಸದಸ್ಯರಿದ್ದಾರೆ.
ಉಳಿದ ನಾಲ್ವರು ಬಿಜೆಪಿ ಸದಸ್ಯರಿದ್ದಾರೆ. ಗ್ರಾಮ ಪಂಚಾಯಿತಿಗೆ ಮಾಲತೇಶ ದುರಗಪ್ಪ ನಾಯರ್ ಅಧ್ಯಕ್ಷರಾಗಿದ್ದರು. ಅಧ್ಯಕ್ಷರ ಆಡಳಿತಾವಧಿ ವಿಚಾರದಲ್ಲಿ ನಡೆದ ಒಪ್ಪಂದದಂತೆ 15 ತಿಂಗಳು ಅಧಿಕಾರ ನಡೆಸುವುದಾಗಿ ಮಾಲತೇಶ್ ಒಪ್ಪಿಕೊಂಡಿದ್ದರು. ಮಾಲತೇಶ ಸ್ವಾಮಿ ದೇವಸ್ಥಾನದಲ್ಲಿ 15 ತಿಂಗಳಾದ ಬಳಿಕ ಸುರೇಶ್ ತಳಗೇರಿ ಎಂಬುವರಿಗೆ ಅಧ್ಯಕ್ಷ ಸ್ಥಾನ ಬಿಟ್ಟುಕೊಡೋದಾಗಿ ಪ್ರಮಾಣ ಕೂಡಾ ಮಾಡಿದ್ದರು.
ಇದನ್ನೂ ಓದಿ: 'ಇಂದಿನ ರೌಡಿಗಳೇ ಮುಂದಿನ ಬಿಜೆಪಿ ಮುಖಂಡರು; ಎಷ್ಟೇ ಆದರೂ ದೇಶಕ್ಕೆ ಗೋಡ್ಸೆಯಂತಹ ಭಯೋತ್ಪಾದಕನನ್ನು ನೀಡಿದ ಸಂತತಿ ಅಲ್ಲವೇ?'
ಆದರೆ 15 ತಿಂಗಳ ಬಳಿಕ ಅಧ್ಯಕ್ಷ ಸ್ಥಾನ ಬಿಟ್ಟು ಕೊಡುವುದಾಗಿ ಪ್ರಮಾಣ ಮಾಡಿದ್ದ ಮಾಲತೇಶ್ ಮಾತಿನಂತೆ ನಡೆದುಕೊಳ್ಳಲೇ ಇಲ್ಲ. ಅಧ್ಯಕ್ಷ ಸ್ಥಾನ ಬಿಟ್ಟುಕೊಡದೇ ಸತಾಯಿಸಿದ್ದರು. ಹೀಗಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಾಲತೇಶ್ ವಿರುದ್ದ ಅವಿಶ್ವಾಸ ನಿರ್ಣಯ ಮಂಡನೆಗೆ ಸದಸ್ಯರು ನಿರ್ಧರಿಸಿದರು.
ಆದರೆ, ಮಾಲತೇಶ್ ಗ್ರಾಮ ಪಂಚಾಯತಿ ಸದಸ್ಯರನ್ನು ಹೈಜಾಕ್ ಮಾಡಬಹುದು ಎಂಬ ಆತಂಕದ ಹಿನ್ನೆಲೆ, ಸಂತೋಷ ಭಟ್ ಗುರೂಜಿ ತಮ್ಮ ಬಣದ 9 ಸದಸ್ಯರನ್ನು ಬೆಂಗಳೂರಿನ ರೆಸಾರ್ಟ್ ಗೆ ಕಳಿಸಿಕೊಟ್ಟಿದ್ದರು. ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಇದ್ದ ಕಾರಣ 9 ಸದಸ್ಯರು ರೆಸಾರ್ಟ್ ನಿಂದ ವಿಮಾನದಲ್ಲಿ ಆಗಮಿಸಿದರು.
ಹಾವೇರಿ ಪಕ್ಷದ ಜಿಲ್ಲಾಧ್ಯಕ್ಷ ಸಿದ್ದರಾಜು ಕಲ್ಕೋಟಿ ಅವರನ್ನು ಸಂಪರ್ಕಿಸಿ ವರದಿ ಆಧರಿಸಿ ತೀರ್ಮಾನ ಕೈಗೊಳ್ಳುತ್ತೇವೆ, ಮುಂದಿನ ಅಧ್ಯಕ್ಷರಾಗಿ ಮಲತೇಶ ನಾಯರ ಅವರ ಸ್ಥಾನಕ್ಕೆ ಸುರೇಶ ತಲಗೇರಿ ಬರುವ ಸಾಧ್ಯತೆ ಇದೆ. ಈ ಬೆಳವಣಿಗೆಯ ಹಿನ್ನೆಲೆಯಲ್ಲಿ 13 ಸದಸ್ಯರ ಜಿ.ಪಂ.ಸಭೆ ಕರೆದರೆ, ನೂತನ ಅಧ್ಯಕ್ಷರ ಆಯ್ಕೆ ಸಂದರ್ಭದಲ್ಲಿ ಜಿಲ್ಲಾ ಸಹಾಯಕ ಆಯುಕ್ತರು ಉಪಸ್ಥಿತರಿರುತ್ತಾರೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.
ಕೃಷಿ ಸಚಿವ ಬಿ.ಸಿ.ಪಾಟೀಲ್ ಮಾತನಾಡಿ, ''ಜನರು ಕೊಟ್ಟ ಮಾತು ಉಳಿಸಿಕೊಳ್ಳುವುದಿಲ್ಲ. ಇದು ಪ್ರಜಾಪ್ರಭುತ್ವಕ್ಕೆ ಹೊಂದಿಕೊಳ್ಳುವುದಿಲ್ಲ, ಮತಗಳ ಮೇಲೆ ಪ್ರಭಾವ ಬೀರಲು ಹಣವನ್ನು ಬಳಸಲಾಗುತ್ತದೆ ಮತ್ತು ಅದು ಸರಿಯಲ್ಲ ಎಂದಿದ್ದೆರ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


