ರಾಜಕೀಯ

ಕರ್ನಾಟಕದಲ್ಲಿ ಜೆಡಿಎಸ್ ಮಾತ್ರ ಕಾಂಗ್ರೆಸ್, ಬಿಜೆಪಿಗೆ ಪರ್ಯಾಯ: ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಪ್ರಮುಖ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿವೆ. ಈ ಮಧ್ಯೆ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಕರ್ನಾಟಕದಲ್ಲಿ ಜೆಡಿಎಸ್ ಮಾತ್ರ ಕಾಂಗ್ರೆಸ್ ಮತ್ತು ಬಿಜೆಪಿಗೆ ಪರ್ಯಾಯ ಎಂದಿದ್ದಾರೆ.

ಕರ್ನಾಟಕದಲ್ಲಿ ಜೆಡಿಎಸ್ ಮಾತ್ರ ಕಾಂಗ್ರೆಸ್, ಬಿಜೆಪಿಗೆ ಪರ್ಯಾಯ: ಹೆಚ್.ಡಿ. ಕುಮಾರಸ್ವಾಮಿ
ಹೆಚ್ ಡಿ ಕುಮಾರಸ್ವಾಮಿ
Published On :

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಪ್ರಮುಖ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿವೆ. ಈ ಮಧ್ಯೆ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಕರ್ನಾಟಕದಲ್ಲಿ ಜೆಡಿಎಸ್ ಮಾತ್ರ ಕಾಂಗ್ರೆಸ್ ಮತ್ತು ಬಿಜೆಪಿಗೆ ಪರ್ಯಾಯ ಎಂದಿದ್ದಾರೆ.

ಕಾಂಗ್ರೆಸ್ ನಲ್ಲಿ ಒಳ ಜಗಳವಿದ್ದು, ಬಿಜೆಪಿ ಆಡಳಿತದಿಂದ ಜನ ಬೇಸತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ  ವರ್ಕ್ ಔಟ್ ಇಲ್ಲಿ ಕೆಲಸ ಮಾಡಲ್ಲ ಎಂದರು.

ಜನರು ಈಗಾಗಲೇ ತಮ್ಮ ಮನಸನ್ನು ಬದಲಾಯಿಸಿಕೊಂಡಿದ್ದು, ಮುಂದಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಹೆಚ್ಚಿನ ಅಂತರದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ಇದೇ ವೇಳೆ ಸಲಾಮ್ ಆರತಿ ಹೆಸರು ಬದಲಾವಣೆ ಕುರಿತಂತೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಬಿಜೆಪಿ ನೈಜ ವಿಚಾರಗಳತ್ತ ಗಮನ ಹರಿಸುತ್ತಿಲ್ಲ. ಅದಕ್ಕಾಗಿ ಅವರು ಇಂತಹ ವಿಚಾರಗಳತ್ತ ಗಮನ ಹರಿಸಿದ್ದಾರೆ. ಇತಿಹಾಸ ಮತ್ತು ನಮ್ಮ ಸಂಸ್ಕೃತಿಯನ್ನು ಬದಲಾಯಿಸಲು ಅವರು ಬಯಸಿದ್ದಾರೆ ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.