ರಾಜ್ಯ ವಿಧಾನಸಭಾ ಚುನಾವಣೆ: ಕಾಂಗ್ರೆಸ್‌ಗೆ 136, ಬಿಜೆಪಿಗೆ 66 ಸ್ಥಾನ ಸಿಗಲಿದೆ; ಡಿಕೆ ಶಿವಕುಮಾರ್
ಕರ್ನಾಟಕದ ರಾಜಕೀಯ ಪರಿಸ್ಥಿತಿಯನ್ನು ಗುಜರಾತ್‌ಗೆ ಹೋಲಿಸಲು ಸಾಧ್ಯವಿಲ್ಲ ಎಂದು ಹೇಳಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು, 2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 136 ಮತ್ತು ಆಡಳಿತಾರೂಢ ಬಿಜೆಪಿಗೆ 66 ಸ್ಥಾನಗಳು ಸಿಗಲಿವೆ ಎಂದು ಭವಿಷ್ಯ ನುಡಿದಿದ್ದಾರೆ.

ಬೆಂಗಳೂರು: ಕರ್ನಾಟಕದ ರಾಜಕೀಯ ಪರಿಸ್ಥಿತಿಯನ್ನು ಗುಜರಾತ್‌ಗೆ ಹೋಲಿಸಲು ಸಾಧ್ಯವಿಲ್ಲ ಎಂದು ಹೇಳಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು, 2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 136 ಮತ್ತು ಆಡಳಿತಾರೂಢ ಬಿಜೆಪಿಗೆ 66 ಸ್ಥಾನಗಳು ಸಿಗಲಿವೆ ಎಂದು ಭವಿಷ್ಯ ನುಡಿದಿದ್ದಾರೆ.
ಗುರುವಾರ ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಪರೇಷನ್ ಕಮಲದ ಸಾಧ್ಯತೆಯನ್ನು ತಳ್ಳಿಹಾಕಿದರು.
ನಮ್ಮ ಪಕ್ಷದ ಆಂತರಿಕ ಸಮೀಕ್ಷೆ ಪ್ರಕಾರ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ 136 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದು, ಬಿಜೆಪಿಗೆ 66 ಸ್ಥಾನಗಳು ಸಿಗಲಿದ ಎಂದು ಹೇಳಿದೆ. ಮತದಾರರು ಬಿಜೆಪಿಯ ದುರಾಡಳಿತವನ್ನು ನೋಡಿದ್ದು. ಇದೀಗ ಕಾಂಗ್ರೆಸ್‌ನಿಂದ ಶುದ್ಧ ಸರ್ಕಾರವನ್ನು ನಿರೀಕ್ಷಿಸುತ್ತಿದ್ದಾರೆಂದು ಹೇಳಿದರು.
ಇದೇ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿಗೆ ಚುನಾವಣೆ ನಡೆಸದೆ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದ್ದಾರೆ ಎಂದು ಆರೋಪಿಸಿದರು. ಅಲ್ಲದೆ, ಸರ್ಕಾರದ ವೈಫಲ್ಯಕ್ಕೆ ಕರ್ನಾಟಕ ಹೈಕೋರ್ಟ್ 5 ಲಕ್ಷ ರೂಪಾಯಿ ದಂಡ ವಿಧಿಸಿರುವುದರಿಂದ ಸಿಎಂ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ರಾಜ್ಯ ಬಿಜೆಪಿಯು ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಂದ ವ್ಯಾಪಕ ಪ್ರಚಾರ ನಡೆಸಲು ಮುಂದಾಗಿರುವ ಬಗ್ಗೆ ಮಾತನಾಡಿ, ರಾಜ್ಯದಲ್ಲಿ ಆ ಪಕ್ಷಕ್ಕೆ ನಾಯಕತ್ವದ ಕೊರತೆಯಿದೆ, ಆದ್ದರಿಂದ ಅದು ಕೇಂದ್ರ ನಾಯಕರ ಮೇಲೆ ಹಣಿಯುತ್ತಿದೆ ಎಂದು ಲೇವಡಿ ಮಾಡಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯದ ಮೂಲೆ ಮೂಲೆಯನ್ನು ಬಲ್ಲ ಸಮರ್ಥ ನಾಯಕರಿದ್ದಾರೆ. ನಿರ್ದಿಷ್ಟ ಪ್ರದೇಶದಲ್ಲಿ ಯಾವ ನಾಯಕರು ಪ್ರಚಾರ ನಡೆಸುತ್ತಾರೆ ಎಂಬುದರ ಕುರಿತು ನಾವು ನಿರ್ಧಾರ ಕೈಗೊಳ್ಳುತ್ತೇವೆಂದು ಹೇಳಿದರು.
ಇತರೆ ಪಕ್ಷಗಳ ನಾಯಕರು ಚುನಾವಣೆಗೂ ಮುನ್ನ ಕಾಂಗ್ರೆಸ್ ಸೇರಲು ಉತ್ಸುಕರಾಗಿದ್ದಾರೆ. ಕಂದಾಯ ಸಚಿವ ಆರ್ ಅಶೋಕ ಅವರು ಬಿಜೆಪಿ ಸೇರಲು ಇಚ್ಛಿಸುವ ಕಾಂಗ್ರೆಸ್ ಪಕ್ಷದ 10 ಶಾಸಕರಿದ್ದಾರೆ ಎಂದು ಹೇಳಿಕೊಂಡಿರಬಹುದು, ಆದರೆ ನಮ್ಮ ಬಳಿಯೂ ಅವರ ಪಕ್ಷದ ಶಾಸಕರ ಪಟ್ಟಿಯಿದೆ ಎಂದರು.
ಕುಕ್ಕರ್ ಸ್ಫೋಟವನ್ನು ಭಯೋತ್ಪಾದನಾ ಕೃತ್ಯ ಎಂದು ರಾಜ್ಯ ಡಿಜಿಪಿ ಟ್ವೀಟ್ ಮಾಡಿದ್ದಾರೆ. ಇದರ ಹಿಂದೆ ಮತದಾರರ ಮಾಹಿತಿ ಕಳ್ಳತನದ ವಿಚಾರದಿಂದ ಜನರ ಗಮನ ಬೇರೆಡೆ ಸೆಳೆಯುವ ಉದ್ದೇಶವಿದೆ ಎಂದು ಆರೋಪಿಸಿದರು.
ಇದೇ ವೇಳೆ ಗುತ್ತಿಗೆದಾರರು ಎತ್ತಿರುವ 'ಶೇ.40 ಕಮಿಷನ್' ಆರೋಪ, ಕೆ.ಎಸ್.ಈಶ್ವರಪ್ಪ ಮತ್ತು ರಮೇಶ್ ಜಾರಕಿಹೊಳಿ ಅವರ ರಾಜೀನಾಮೆಗಳು ಮತ್ತು ಕೋವಿಡ್ -19 ಸಾಂಕ್ರಾಮಿಕದ ದುರಾಡಳಿತದಂತಹ ಸಮಸ್ಯೆಗಳನ್ನು ಅವರು ಡಿಕೆ ಶಿವಕುಮಾರ್ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


