ಆರು ಬಾರಿ ಕ್ಷಮಾಪಣೆ ಪತ್ರ ಕೊಟ್ಟು ಬ್ರಿಟಿಷರ ತಟ್ಟೆ ಕಾಸಿನಲ್ಲಿ ಜೀವನ ಮಾಡಿದವರು ಸಾವರ್ಕರ್: ಬಿ.ಕೆ ಹರಿಪ್ರಸಾದ್
ನಾವು ನಾಗಪುರ ಯುನಿವರ್ಸಿಟಿಯವರಲ್, ನಾವು ಜನಸಾಮಾನ್ಯರ ವಿಶ್ವ ವಿದ್ಯಾನಿಲಯದವರು, ನಮ್ಮಲ್ಲಿ ದ್ವಂದ್ವ ಇಲ್ಲ, ಸಾವರ್ಕರ್ ವಿಚಾರವಾಗಿ, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬೇರೆ ಬೇರೆ ರೀತಿಯಲ್ಲಿ ವಿರೋಧ ಮಾಡುತ್ತಾರೆ.

ಬೆಳಗಾವಿ: ನಾವು ನಾಗಪುರ ಯುನಿವರ್ಸಿಟಿಯವರಲ್ಲ, ನಾವು ಜನಸಾಮಾನ್ಯರ ವಿಶ್ವ ವಿದ್ಯಾನಿಲಯದವರು, ನಮ್ಮಲ್ಲಿ ದ್ವಂದ್ವ ಇಲ್ಲ, ಸಾವರ್ಕರ್ ವಿಚಾರವಾಗಿ, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬೇರೆ ಬೇರೆ ರೀತಿಯಲ್ಲಿ ವಿರೋಧ ಮಾಡುತ್ತಾರೆ. ನಮ್ಮಲ್ಲಿ ಮತ ಭೇಧ ಇರುತ್ತೆ, ಇರಬೇಕು ಎಂದು ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.
ಸುವರ್ಣ ಸೌಧದಲ್ಲಿ ಮಂಗಳವಾರ ಮಾತನಾಡಿದ ಅವರು, ಸಾವರ್ಕರ್ ಕೊಲೆ ಮಾಡಿ ಜೈಲಿಗೆ ಹೋದವರೇ ವಿನಹಃ, ಸ್ವಾತಂತ್ರ್ಯ ಹೋರಾಟ ಮಾಡಿ ಜೈಲಿಗೆ ಹೋಗಿಲ್ಲ. ಆರು ಬಾರಿ ಕ್ಷಮಾಪಣೆ ಪತ್ರ ಕೊಟ್ಟು ಬ್ರಿಟಿಷರ ತಟ್ಟೆ ಕಾಸಿನಲ್ಲಿ ಜೀವನ ಮಾಡಿದವರು. ಅವರ ಫೋಟೋ ಹಾಕಿರುವುದು ಕರ್ನಾಟಕದ ಜನರಿಗೆ ಅವಮಾನ.
ಗಡಿ ವಿವಾದ ಇರುವಾಗ ಆ ಪ್ರದೇಶದ ಹಾಗೂ ಸ್ವಾತಂತ್ರ್ಯ ಹೋರಾಟದ ವಿರುದ್ಧ ಇದ್ದ ವ್ಯಕ್ತಿಯ ಫೋಟೋ ಹಾಕಿರುವುದು ನೋಡಿದಾಗ ನಗಬೇಕೋ ಅಳಬೇಕೋ ಗೊತ್ತಾಗುತ್ತಿಲ್ಲ. ಬಿಜೆಪಿಗೆ ಪ್ರಜಾಪ್ರಭುತ್ವ ಸಂವಿಧಾನದಲ್ಲಿ ನಂಬಿಕೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.
ಇಡಿ ಅಂದ್ರೆ ಬಿಜೆಪಿ ಎಲೆಕ್ಷನ್ ಡಿಪಾರ್ಟ್ಮೆಂಟ್, ಐಟಿ ಅಂದ್ರೆ ಇಂಟಲಿಜೆನ್ಸ್ ಡಿಪಾರ್ಟ್ಮೆಂಟ್ ಹಾಗೂ ಸಿಬಿಐ ಬಿಜೆಪಿ ಮುಂಚೂಣಿ ಘಟಕವಾಗಿದೆ ಎಂದು ಹರಿಪ್ರಸಾದ್ ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


