ಕರ್ನಾಟಕ ವಿಧಾನಸಭಾ ಚುನಾವಣೆ 2023: ದೆಹಲಿಯಲ್ಲಿ ಜಮೀರ್ ಭೇಟಿಯಾದ ಎಐಸಿಸಿ ಪ್ರಧಾನ ಕಾರ್ಯದರ್ಶಿ
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಮಾಜಿ ಸಚಿವ ಹಾಗೂ ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಅವರನ್ನು ಬುಧವಾರ ನವದೆಹಲಿಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.

ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಮಾಜಿ ಸಚಿವ ಹಾಗೂ ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಅವರನ್ನು ಬುಧವಾರ ನವದೆಹಲಿಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.
ಜಮೀರ್ ಅಹ್ಮದ್ ಖಾನ್ ಅವರನ್ನು ಭೇಟಿ ಮಾಡಿದ ಸುರ್ಜೇವಾಲಾ ಅವರು, 2023ರ ಕರ್ನಾಟಕ ವಿಧಾನಸಭೆ ಚುನಾವಣೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದರು ಎಂದು ತಿಳಿದುಬಂದಿದೆ. ಅಲ್ಪಸಂಖ್ಯಾತ ಮತದಾರರನ್ನು ಪಕ್ಷಕ್ಕೆ ಒಲಿಸಿಕೊಳ್ಳುವುದು ಹೇಗೆ ಎಂಬ ಬಗ್ಗೆ ಚರ್ಚಿಸಿದರು ಎಂದು ಹೇಳಲಾಗುತ್ತಿದೆ.
ಸುರ್ಜೇವಾಲಾ ಅವರನ್ನು ಭೇಟಿಯಾದ ಕೂಡಲೇ ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್, ಇದೊಂದು ಸೌಜನ್ಯದ ಭೇಟಿ ಎಂದು ಹೇಳಿದ್ದಾರೆ.
ಇತ್ತೀಚೆಗೆ ಕಾಂಗ್ರೆಸ್ ಆಯೋಜಿಸಿದ್ದ ಹಲವಾರು ಕಾರ್ಯಕ್ರಮಗಳಲ್ಲಿ ಜಮೀರ್ ಗೈರುಹಾಜರಾಗಿದ್ದರಿಂದ ಈ ಸಭೆಗಳು ಮಹತ್ವ ಪಡೆದುಕೊಂಡಿದೆ.
ಮೂಲಗಳ ಪ್ರಕಾರ, ಸುರ್ಜೆವಾಲಾ ಅವರು, ಜಮೀರ್ ಅವರ ಆಸ್ತಿಪಾಸ್ತಿಗಳ ಮೇಲೆ ಇಡಿ ದಾಳಿ ನಡೆಸಿದ ನಂತರ ಅಸಮಾಧಾನಗೊಂಡಿದ್ದರಿಂದ ಅವರ ನೈತಿಕತೆಯನ್ನು ಹೆಚ್ಚಿಸಲು ಅವರನ್ನು ಭೇಟಿಯಾದರು ಎಂದು ಹೇಳಲಾಗುತ್ತಿದೆ.
ಉದ್ಯಮ ಪ್ರವಾಸದ ಭಾಗವಾಗಿ ಶಾಸಕ ರೋಹಿತ್ ರೆಡ್ಡಿ ಅವರನ್ನು ಭೇಟಿ ಮಾಡುತ್ತೇನೆಂದು ಹೇಳಿದ್ದ ಜಮೀರ್ ಅವರು, ಈ ನೆಪದಲ್ಲಿ ಹೈದರಾಬಾದ್‌ನಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರನ್ನು ಭೇಟಿ ಮಾಡಿದ್ದರು.
ಇತ್ತೀಚೆಗೆ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಪಕ್ಷದ ಚುನಾವಣಾ ಸಮಿತಿಯ ಪಟ್ಟಿಯಲ್ಲಿ ಜಮೀರ್ ಅವರನ್ನು ಸೇರಿಸಿ ಗದಗ ಉಸ್ತುವಾರಿಯನ್ನಾಗಿ ಮಾಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


