ನಾಳೆ, ನಾಡಿದ್ದು ಅಮಿತ್ ಶಾ ರಾಜ್ಯ ಪ್ರವಾಸ: ಚುನಾವಣೆಗೆ ಬಿಜೆಪಿ ತಯಾರಿ ಕುರಿತು ಪರಿಶೀಲನೆ ಸಾಧ್ಯತೆ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಮತ್ತು ಶನಿವಾರ ರಾಜ್ಯ ಪ್ರವಾಸದಲ್ಲಿರಲಿದ್ದು, ಈ ವೇಳೆ ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಸಿದ್ಧತೆಗಳನ್ನು ಪರಿಶೀಲನೆ ನಡೆಸುವ ಸಾಧ್ಯತೆಗಳಿವೆ.

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಮತ್ತು ಶನಿವಾರ ರಾಜ್ಯ ಪ್ರವಾಸದಲ್ಲಿರಲಿದ್ದು, ಈ ವೇಳೆ ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಸಿದ್ಧತೆಗಳನ್ನು ಪರಿಶೀಲನೆ ನಡೆಸುವ ಸಾಧ್ಯತೆಗಳಿವೆ.
ಒಕ್ಕಲಿಗ ಪ್ರಾಬಲ್ಯವಿರುವ ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ತನ್ನ ಸಾಧನೆಯನ್ನು ಸುಧಾರಿಸಿಕೊಳ್ಳಲು ತೀವ್ರ ಪ್ರಯತ್ನ ನಡೆಸುತ್ತಿದೆ. ರಾಜ್ಯಕ್ಕೆ ಭೇಟಿ ನೀಡುತ್ತಿರುವ ಅಮಿತ್ ಶಾ ಅವರು ಶುಕ್ರವಾರ ಮಂಡ್ಯದಲ್ಲಿ ರ್ಯಾಲಿ ಮತ್ತು ಶನಿವಾರ ಬೆಂಗಳೂರಿನಲ್ಲಿ ಪಕ್ಷದ ಕಾರ್ಯಕರ್ತರ ಸಮಾವೇಶವನ್ನು ಮಾತನಾಡಲಿದ್ದಾರೆ.
ಮಂಡ್ಯ, ಮೈಸೂರು, ಹಾಸನ ಮತ್ತು ಹಳೆ ಮೈಸೂರು ಭಾಗದ ಇತರ ಜಿಲ್ಲೆಗಳಿಂದ ಸುಮಾರು 50,000 ಜನರು ಮಂಡ್ಯ ರ್ಯಾಲಿಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಮಂಡ್ಯದಲ್ಲಿ ಹಾಲು ಒಕ್ಕೂಟದ ಕಾರ್ಯಕ್ರಮದಲ್ಲೂ ಶಾ ಭಾಗವಹಿಸಲಿದ್ದಾರೆ.
ಹಳೆ ಮೈಸೂರು ಭಾಗದ ಮತದಾರರ ಮೇಲೆ ಕಾಂಗ್ರೆಸ್ ಮತ್ತು ಜೆಡಿಎಸ್ ಸಾಕಷ್ಟು ಹಿಡಿತ ಸಾಧಿಸಿದ್ದು, 2019 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಉತ್ತಮ ಪ್ರದರ್ಶನ ನೀಡಿದ್ದರೂ, 2018 ರ ವಿಧಾನಸಭೆ ಚುನಾವಣೆಯಲ್ಲಿ ಅದರ ಸಾಧನೆ ನಿರೀಕ್ಷೆಗೆ ತಕ್ಕಂತೆ ಇರಲಿಲ್ಲ.
ಹೀಗಾಗಿ ಈ ಬಾರಿಯ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲುವ ಮಹತ್ವಾಕಾಂಕ್ಷೆಯ ಗುರಿಯನ್ನು ಹೊಂದಿರುವ ಬಿಜೆಪಿ, ಈ ಪ್ರದೇಶದಲ್ಲಿ ತನ್ನ ಕಾರ್ಯಕ್ಷಮತೆಯನ್ನು ಸುಧಾರಿಸಲು ಶಾ ಅವರು ಮಂಡ್ಯ ಜಿಲ್ಲೆಗೆ ಭೇಟಿ ನೀಡುತ್ತಿದ್ದು, ಈ ಭೇಟಿಯು ಮಹತ್ವ ಪಡೆದುಕೊಂಡಿದೆ.
ಶನಿವಾರ ಬೆಂಗಳೂರಿನಲ್ಲಿ ಪಕ್ಷದ ನಾಯಕರನ್ನು ಉದ್ದೇಶಿಸಿ ಶಾ ಮಾತನಾಡಲಿದ್ದಾರೆ. ಬೂತ್‌ಗಳ ಉಸ್ತುವಾರಿ ಸೇರಿದಂತೆ ಸುಮಾರು 10,000 ಜನರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಮುಖಂಡರೊಬ್ಬರು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


