'ಹೆಲಿಕಾಪ್ಟರ್‌ನಲ್ಲಿ ಬೇಕಾದರೂ ಬರಲಿ, ರಾಕೆಟ್‌ನಲ್ಲಿ ಬರಲಿ ನನಗೇನು? ಪಂಚರತ್ನ ಯಾತ್ರೆ ಸುನಾಮಿ ತಡೆಯಲು ಅಮಿತ್ ಶಾ ಕರೆಸುತ್ತಿದ್ದಾರೆ'
ರಾಜ್ಯದಲ್ಲಿ ಪಂಚರತ್ನಯಾತ್ರೆಗೆ ಅಭೂತಪೂರ್ವ ಬೆಂಬಲ ದೊರಕಿದ್ದು, ಪಂಚರತ್ನ ರಥಯಾತ್ರೆಯ ಸುನಾಮಿ ಅಲೆ ತಡೆಯಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬಿಜೆಪಿಯವರು ಕರೆಸುತ್ತಿದ್ದಾರೆ.

ತುಮಕೂರು: ರಾಜ್ಯದಲ್ಲಿ ಪಂಚರತ್ನಯಾತ್ರೆಗೆ ಅಭೂತಪೂರ್ವ ಬೆಂಬಲ ದೊರಕಿದ್ದು, ಪಂಚರತ್ನ ರಥಯಾತ್ರೆಯ ಸುನಾಮಿ ಅಲೆ ತಡೆಯಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬಿಜೆಪಿಯವರು ಕರೆಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಪಂಚರತ್ನ ರಥಯಾತ್ರೆಯಲ್ಲಿ ಮಾತನಾಡಿದ ಅವರು, ಅಮಿತ್ ಶಾ ಹೆಲಿಕಾಪ್ಟರ್‌ನಲ್ಲಿ ಬೇಕಾದರೂ ಬರಲಿ, ರಾಕೆಟ್‌ನಲ್ಲಿ ಬೇಕಾದರೂ ಬರಲಿ ನನಗೇನು?. ರೈತರಿಗೆ ಹೆದರಿ ಅವರು ಕರ್ನಾಟಕಕ್ಕೆ ಬರುತ್ತಿದ್ದಾರೆ. ಬಿಜೆಪಿಯವರು ದೇಶವನ್ನು ಕಾಂಗ್ರೆಸ್ ಮುಕ್ತ ಮಾಡುತ್ತೇವೆ, ಮಂಡ್ಯವನ್ನು ಜೆಡಿಎಸ್ ಮುಕ್ತ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಮುಕ್ತ ಮಾಡುವುದಕ್ಕೆ ಇವರೇನು ದೊಡ್ಡ ಬ್ರಹ್ಮನಾ ಎಂದು ಪ್ರಶ್ನಿಸಿದರು.
ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಜಾಲತಾಣದ ವಿಭಾಗದಿಂದ 1 ರು.ಮುಖಬೆಲೆಯ 15 ಸಾವಿರ ಕಾಯಿನ್ ಹಾರ ಹಾಕಿ ಸ್ವಾಗತ ಕೋರಲಾಯಿತು. ಬಳಿಕ, ಹೆಬ್ಬೂರಿನಲ್ಲಿ ಕ್ರೇನ್ ಬಳಸಿ ಮಣ್ಣಿನ ಹಾರ, ನೇಗಿಲ ಹಾರ ಹಾಕಿ ಸ್ವಾಗತಿಸಲಾಯಿತು.
ರಾಷ್ಟ್ರೀಯ ಪಕ್ಷಗಳು ರಾಜ್ಯದ ಅಭಿವೃದ್ಧಿಯನ್ನು ಕಡೆಗಣಿಸಿದ್ದು,ರಾಜ್ಯದ ಅಭಿವೃದ್ಧಿಗೆ ಪ್ರಾದೇಶಿಕ ಪಕ್ಷಗಳು ಅನಿವಾರ್ಯವಾಗಿವೆ , ಪಂಚರತ್ನ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ, ರಾಜ್ಯವನ್ನು ಅಭಿವೃದ್ಧಿಪಡಿಸಬೇಕೆಂಬ ಉದ್ದೇಶದಿಂದ ಜೆಡಿಎಸ್ ಈ ಯಾತ್ರೆಯನ್ನು ಆರಂಭಿಲಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


