ಭಾನುವಾರ ಬೆಂಗಳೂರಿಗೆ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಆಗಮನ: ಶಾಸಕರು- ಸಂಸದರ ಬೆಂಬಲ ಕೋರಿಕೆ
ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಕರ್ನಾಟಕದ ಬಿಜೆಪಿ ಶಾಸಕರು ಮತ್ತು ಸಂಸದರ ಬೆಂಬಲ ಪಡೆಯಲು ಭಾನುವಾರ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ.

ಬೆಂಗಳೂರು: ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಕರ್ನಾಟಕದ ಬಿಜೆಪಿ ಶಾಸಕರು ಮತ್ತು ಸಂಸದರ ಬೆಂಬಲ ಪಡೆಯಲು ಭಾನುವಾರ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ.
ಆದಿವಾಸಿ ಮಹಿಳೆ ಮುರ್ಮು ಅವರು ಈಗಾಗಲೇ ರಾಜ್ಯಪಾಲರಾಗಿ, ಸಚಿವರಾಗಿ, ಕಾಲೇಜು ಉಪನ್ಯಾಸಕರಾಗಿ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದು, ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ಅವರ ಗೆಲುವು ನಿಶ್ಚಿತ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಹೇಳಿದ್ದಾರೆ.
ಪ್ರತಿಪಕ್ಷಗಳ ಅಧ್ಯಕ್ಷೀಯ ಅಭ್ಯರ್ಥಿ ಯಶವಂತ್ ಸಿನ್ಹಾ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿ ಟಿ ರವಿ, ಮುರ್ಮು ಅವರು ರಬ್ಬರ್ ಸ್ಟಾಂಪ್ ಅಧ್ಯಕ್ಷರಾಗುವುದಿಲ್ಲ ಎಂದು ಹೇಳಿದರು.
ಮುರ್ಮು ಭಾನುವಾರ ಬಿಜೆಪಿ ಶಾಸಕರು ಮತ್ತು ಸಂಸದರನ್ನು ಭೇಟಿ ಮಾಡಲಿದ್ದಾರೆ. ಜನತಾ ದಳ (ಜಾತ್ಯತೀತ) ನಾಯಕರನ್ನು ಭೇಟಿ ಮಾಡುವ ಸಾಧ್ಯತೆಯಿದೆ. ಆದರೆ, ಜೆಡಿಎಸ್ ನಾಯಕರ ಜತೆಗಿನ ಸಭೆ ಇನ್ನೂ ಖಚಿತವಾಗಿಲ್ಲ. ಜೆಡಿಎಸ್ ಎನ್‌ಡಿಎ ಅಭ್ಯರ್ಥಿಯನ್ನು ಬೆಂಬಲಿಸುವುದಾಗಿ ಹೇಳಿತ್ತು.
ಸರ್ಕಾರವು ಕೇಂದ್ರೀಯ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂಬ ಯಶ್ವಂತ್ ಸಿನ್ಹಾ ಆರೋಪಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ ನಾಯಕ ರವಿ, ಜಾರಿ ನಿರ್ದೇಶನಾಲಯ (ಇಡಿ) ಅಥವಾ ಆದಾಯ ತೆರಿಗೆ ಇಲಾಖೆ ಪ್ರಾಮಾಣಿಕರಿಗೆ ಏನೂ ಮಾಡಲು ಸಾಧ್ಯವಿಲ್ಲ, ಆದರೆ ಭ್ರಷ್ಟರು ಅವರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


