ವಿದೇಶ ಪ್ರವಾಸದಿಂದ ಯಡಿಯೂರಪ್ಪ ವಾಪಸ್: ಸಿಎಂ ಬೊಮ್ಮಾಯಿ ಭೇಟಿ, ಚರ್ಚೆ
ಕುಟುಂಬ ಸಮೇತರಾಗಿ ವಿದೇಶ ಪ್ರವಾಸ ಕೈಗೊಂಡಿದ್ದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಗುರುವಾರ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.

ಬೆಂಗಳೂರು: ಕುಟುಂಬ ಸಮೇತರಾಗಿ ವಿದೇಶ ಪ್ರವಾಸ ಕೈಗೊಂಡಿದ್ದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಗುರುವಾರ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿಗೆ ವಾಪಸ್ಸಾದ ಯಡಿಯೂರಪ್ಪ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು. ರಾಜಕೀಯ ಹಾಗೂ ಇತ್ತೀಚಿನ ಬೆಳವಣಿಗೆಗಳ ಕುರಿತು ಉಭಯ ನಾಯಕರು ಚರ್ಚೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.
ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ಶಾಸಕ ರಾಜುಗೌಡ, ಮಾಜಿ ಶಾಸಕ ಹರೀಶ್ ಉಪಸ್ಥಿತರಿದ್ದರು.
ಯಡಿಯೂರಪ್ಪ ಅವರು ಮುಖ್ಯಮಂತ್ರಿ ಹುದ್ದೆಗೆ ರಾಜಿನಾಮೆ ನೀಡಿದ ನಂತರ ಕಳೆದ 10 ತಿಂಗಳಲ್ಲಿ ಹಲವು ಬಾರಿ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಜುಲೈ 2021 ರಂದು ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದ ನಂತರ ಯುರೋಪಿಯನ್ ದೇಶಗಳು ಸೇರಿದಂತೆ ನಾಲ್ಕು ರಾಷ್ಟ್ರಗಳಲ್ಲಿ ಪ್ರವಾಸ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


