ವಿಧಾನಸಭೆ ಚುನಾವಣೆಗೂ ಮುನ್ನ ಇಮೇಜ್ ಸರಿಪಡಿಸಿಕೊಳ್ಳಲು ಬಿಜೆಪಿ ರಣತಂತ್ರ: ನಂದಿ ಬೆಟ್ಟದ ಬಳಿ ಚಿಂತನ-ಮಂಥನ ಸಭೆ!
ಮುಂದಿನ ವರ್ಷ ನಡೆಯಲಿರುವ ರಾಜ್ಯ ವಿಧಾನಸಭೆ ಚುನವಣೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಎರಡು ದಿನಗಳ ಚಿಂತನಾ ಮಂಥನ ಸಭೆ ಹಮ್ಮಿಕೊಂಡಿದೆ.

ಬೆಂಗಳೂರು: ಮುಂದಿನ ವರ್ಷ ನಡೆಯಲಿರುವ ರಾಜ್ಯ ವಿಧಾನಸಭೆ ಚುನವಣೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಎರಡು ದಿನಗಳ ಚಿಂತನಾ ಮಂಥನ ಸಭೆ ಹಮ್ಮಿಕೊಂಡಿದೆ.
ಜುಲೈ 14 ರಂದು ಬೆಂಗಳೂರಿನ ಹೊರಲಯದಲ್ಲಿರುವ ನಂದಿಬೆಟ್ಟ ಬಳಿ ಕಾರ್ಯಕ್ರಮ ಆಯೋಜಿಸಲಾಗಿದೆ. ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಮತ್ತಷ್ಟು ಪ್ರಬಲಗೊಳಿಸುವ ಹಿನ್ನೆಲೆಯಲ್ಲಿ ಬಿಜೆಪಿ ಮುಂದಾಗಿದೆ.
ಮಿಷನ್ ದಕ್ಷಿಣ್ ಅಂಗವಾಗಿ ಕಳೆದ ವಾರ ಹೈದರಾಬಾದ್ ನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಹಮ್ಮಿಕೊಳ್ಳಲಾಗಿತ್ತು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್, ಹಲವಾರು ಕೇಂದ್ರ ಸಚಿವರು, ಕರ್ನಾಟಕ ಕೋರ್ ಕಮಿಟಿಯ ಸದಸ್ಯರು, ಸಚಿವರು ಮತ್ತು ಇತರರು ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.
ಆಂತರಿಕ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ ಸದ್ಯದ ವಾತಾವರಣ ಪಕ್ಷಕ್ಕೆ ಪೂರಕವಾಗಿಲ್ಲ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಕಳೆದ ಕೆಲವು ತಿಂಗಳುಗಳಲ್ಲಿ ಹಿಜಾಬ್ ಮತ್ತು ಪಠ್ಯಪುಸ್ತಕ ವಿವಾದಗಳು ಮತ್ತು ಪಿಎಸ್‌ಐ ನೇಮಕಾತಿ ಹಗರಣದಂತಹ ಅನೇಕ ಸಮಸ್ಯೆಗಳು ಸರ್ಕಾರದ ಇಮೇಜ್ ಅನ್ನು ಕೆಡಿಸಿವೆ. ಮತ್ತೊಂದೆಡೆ, ರಾಜ್ಯ ಕಾಂಗ್ರೆಸ್ ನಾಯಕರು ರಾಜ್ಯ ಸರ್ಕಾರವನ್ನು ಮೂಲೆಗುಂಪು ಮಾಡುತ್ತಿದ್ದಾರೆ' ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


