ರಾಜಕೀಯ

ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿಯಾಗಿ ಬೈರತಿ ಬಸವರಾಜ್ ನೇಮಕ: ರಾಜ್ಯ ಸರ್ಕಾರದ ದಿಢೀರ್ ಆದೇಶ

ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ಬೈರತಿ ಬಸವರಾಜ್ ಅವರನ್ನು ದಿಢೀರ್ ನೇಮಕ ಮಾಡಿ ರಾಜ್ಯ ಸರಕಾರ ಅಧಿಸೂಚನೆ ಹೊರಡಿಸಿದೆ.

ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿಯಾಗಿ ಬೈರತಿ ಬಸವರಾಜ್ ನೇಮಕ: ರಾಜ್ಯ ಸರ್ಕಾರದ ದಿಢೀರ್ ಆದೇಶ
ಭೈರತಿ ಬಸವರಾಜ್
Published On :

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ಬೈರತಿ ಬಸವರಾಜ್ ಅವರನ್ನು ದಿಢೀರ್ ನೇಮಕ ಮಾಡಿ ರಾಜ್ಯ ಸರಕಾರ ಅಧಿಸೂಚನೆ ಹೊರಡಿಸಿದೆ.

ಈ ಹಿಂದೆ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ ಅವರು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು. ಆದರೆ, ತಮ್ಮ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿ ಖಾಲಿ ಉಳಿದಿತ್ತು.

ಈ ಮಧ್ಯೆ, ಮಲೆನಾಡು ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ವ್ಯಾಪಾಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೈರತಿ ಬಸವರಾಜ ಅವರನ್ನು ನೇಮಿಸಿ ರಾಜ್ಯ ಸರಕಾರ ಅಧಿಸೂಚನೆ ಹೊರಡಿಸಿದೆ.

ನಗರಾಭಿೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿಯೂ ಆಗಿರುವ ಬೈರತಿ ಬಸವರಾಜ್ ಅವರು ಹೆಚ್ಚುವರಿಯಾಗಿ ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿ ಹೊಣೆ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.