ಸಿಜೆಐ ಎನ್ ವಿ ರಮಣ ಅವರ ಹೇಳಿಕೆಗೆ ನನ್ನ ಸಹಮತ ಇದೆ: ಎಚ್ ಡಿ ಕುಮಾರಸ್ವಾಮಿ
ಸಿಜೆಐ ಎನ್ ವಿ ರಮಣ ಅವರ ಹೇಳಿಕೆಗೆ ನನ್ನ ಸಹಮತ ಇದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರು: ಸಿಜೆಐ ಎನ್ ವಿ ರಮಣ ಅವರ ಹೇಳಿಕೆಗೆ ನನ್ನ ಸಹಮತ ಇದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಸುಪ್ರೀಂ ಕೋರ್ಟ್’ನ ಘನವೆತ್ತ ಮುಖ್ಯ ನ್ಯಾಯಮೂರ್ತಿಗಳಾದ ರಮಣ ಅವರು ಜೈಪುರದ ಸಭೆಗಳಲ್ಲಿ ಪ್ರತಿಪಕ್ಷಗಳು ಮತ್ತು ವಿಚಾರಣಾಧೀನ ಕೈದಿಗಳ ಬಗ್ಗೆ ಪ್ರಸ್ತಾಪಿಸಿರುವ ಮಹತ್ವದ ಅಂಶಗಳ ಬಗ್ಗೆ ನನ್ನ ಸಹಮತ ಇದೆ. ಅದಕ್ಕಾಗಿ ನಾನು ಮಾನ್ಯ ಮುಖ್ಯ ನ್ಯಾಯಮೂರ್ತಿಗಳನ್ನು ಅಭಿನಂದಿಸುತ್ತೇನೆ ಎಂದು ಕುಮಾರಸ್ವಾಮಿ ಭಾನುವಾರ ಸರಣಿ ಟ್ವೀಟ್ ಮಾಡಿದ್ದಾರೆ.
ಸ್ವಾತಂತ್ರ್ಯ ಭಾರತದಲ್ಲಿ ನಾವು 75 ವರ್ಷ ಸಾಗಿದ್ದೇವೆ. ಈ ಸಂದರ್ಭದಲ್ಲಿ ಮಾನ್ಯ ಮುಖ್ಯ ನ್ಯಾಯಮೂರ್ತಿಗಳು ಎಚ್ಚರಿಸಿ ಹೇಳಿರುವ ಮಾತುಗಳನ್ನು ಎಲ್ಲರೂ ಕೇಳಲೇಬೇಕು. ಪ್ರಜಾಪ್ರಭುತ್ವದಲ್ಲಿ ಆಡಳಿತ ಪಕ್ಷ-ಪ್ರತಿಪಕ್ಷಗಳ ಜುಗುಲ್ʼಬಂದಿ ಇದ್ದರೆ ದೇಶಕ್ಕೆ ಶ್ರೇಯಸ್ಸು ಎಂದು ಹೆಚ್ ಡಿಕೆ ಟ್ವೀಟ್ ನಲ್ಲಿ ಅಭಿಪ್ರಾಯ ಹೊರ ಹಾಕಿದ್ದಾರೆ.
ಕ್ರಿಮಿನಲ್ ನ್ಯಾಯ ವ್ಯವಸ್ಥೆಯಲ್ಲಿ ವಿಚಾರಣೆಯೇ ಇಲ್ಲದೆ ದೀರ್ಘಕಾಲ ಬಂಧನದಲ್ಲಿ ಇರಿಸುವುದೂ ಒಂದು ಶಿಕ್ಷೆಯೇ ಸರಿ. ಆತುರ, ವಿವೇಚನೆ ಇಲ್ಲದ ಬಂಧನಗಳು, ಜಾಮೀನು ಪಡೆಯುವಲ್ಲಿನ ಕಷ್ಟಗಳ ಬಗ್ಗೆಯೂ ಮಾನ್ಯ ಮುಖ್ಯ ನ್ಯಾಯಮೂರ್ತಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಮಾನ್ಯ ಮುಖ್ಯ ನ್ಯಾಯಮೂರ್ತಿಗಳ ಮಾತುಗಳು ಹೊಣೆಗೇಡಿತನದ ಆಡಳಿತದ ಕಣ್ತೆರೆಸಲಿ ಎಂದು ಟ್ವೀಟ್ ನಲ್ಲಿ ಬರೆದಿದ್ದಾರೆ.
'ಸ್ವಾತಂತ್ರ್ಯ ಭಾರತದಲ್ಲಿ ನಾವು 75 ವರ್ಷ ಸಾಗಿದ್ದೇವೆ. ಈ ಸಂದರ್ಭದಲ್ಲಿ ಮಾನ್ಯ ಮುಖ್ಯ ನ್ಯಾಯಮೂರ್ತಿಗಳು ಎಚ್ಚರಿಸಿ ಹೇಳಿರುವ ಮಾತುಗಳನ್ನು ಎಲ್ಲರೂ ಕೇಳಲೇಬೇಕು. ಪ್ರಜಾಪ್ರಭುತ್ವದಲ್ಲಿ ಆಡಳಿತ ಪಕ್ಷ-ಪ್ರತಿಪಕ್ಷಗಳ ಜುಗುಲ್ʼಬಂದಿ ಇದ್ದರೆ ದೇಶಕ್ಕೆ ಶ್ರೇಯಸ್ಸು. ಕ್ರಿಮಿನಲ್ ನ್ಯಾಯ ವ್ಯವಸ್ಥೆಯಲ್ಲಿ ವಿಚಾರಣೆಯೇ ಇಲ್ಲದೆ ದೀರ್ಘಕಾಲ ಬಂಧನದಲ್ಲಿ ಇರಿಸುವುದೂ ಒಂದು ಶಿಕ್ಷೆಯೇ ಸರಿ. ಆತುರ, ವಿವೇಚನೆ ಇಲ್ಲದ ಬಂಧನಗಳು, ಜಾಮೀನು ಪಡೆಯುವಲ್ಲಿನ ಕಷ್ಟಗಳ ಬಗ್ಗೆಯೂ ಮಾನ್ಯ ಮುಖ್ಯ ನ್ಯಾಯಮೂರ್ತಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಮಾನ್ಯ ಮುಖ್ಯ ನ್ಯಾಯಮೂರ್ತಿಗಳ ಮಾತುಗಳು ಹೊಣೆಗೇಡಿತನದ ಆಡಳಿತದ ಕಣ್ತೆರೆಸಲಿ'.
'ಸುಪ್ರೀಂ ಕೋರ್ಟ್'ನ ಘನವೇತ್ತ ಮುಖ್ಯ ನ್ಯಾಯಮೂರ್ತಿಗಳಾದ ರಮಣ ಅವರು ಜೈಪುರದ ಸಭೆಗಳಲ್ಲಿ ಪ್ರತಿಪಕ್ಷಗಳು ಮತ್ತು ವಿಚಾರಣಾಧೀನ ಕೈದಿಗಳ ಬಗ್ಗೆ ಪ್ರಸ್ತಾಪಿಸಿರುವ ಮಹತ್ವದ ಅಂಶಗಳ ಬಗ್ಗೆ ನನ್ನ ಸಹಮತ ಇದೆ. ಅದಕ್ಕಾಗಿ ನಾನು ಮಾನ್ಯ ಮುಖ್ಯ ನ್ಯಾಯಮೂರ್ತಿಗಳನ್ನು ಅಭಿನಂದಿಸುತ್ತೇನೆ' ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


