ನೀತಿ ಸಂಹಿತೆ ಉಲ್ಲಂಘನೆ: ದ್ರೌಪದಿ ಮುರ್ಮು, ಬಿಜೆಪಿ ನಾಯಕರ ವಿರುದ್ಧ ಸಿದ್ದರಾಮಯ್ಯ, ಡಿಕೆಶಿ ದೂರು
ಜುಲೈ 18 ರಂದು ನಡೆದ ರಾಷ್ಟ್ರಪತಿ ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ಎನ್‌ಡಿಎಯ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಮತ್ತು ಇತರ ಬಿಜೆಪಿ ನಾಯಕರ ವಿರುದ್ಧ ಕರ್ನಾಟಕ ಕಾಂಗ್ರೆಸ್ ಮಂಗಳವಾರ...

ಬೆಂಗಳೂರು: ಜುಲೈ 18 ರಂದು ನಡೆದ ರಾಷ್ಟ್ರಪತಿ ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ಎನ್‌ಡಿಎಯ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಮತ್ತು ಇತರ ಬಿಜೆಪಿ ನಾಯಕರ ವಿರುದ್ಧ ಕರ್ನಾಟಕ ಕಾಂಗ್ರೆಸ್ ಮಂಗಳವಾರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಕರ್ನಾಟಕದಲ್ಲಿ ಆಡಳಿತಾರೂಢ ಬಿಜೆಪಿ ಜುಲೈ 17 ಮತ್ತು 18 ರಂದು ಮತದಾರರಾಗಿರುವ ಶಾಸಕರಿಗೆ ಲಂಚ ಮತ್ತು ಇತರೆ ಆಮಿಷ ನೀಡುವ ಮೂಲಕ ಪ್ರಭಾವ ಬೀರಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಮತದಾರರಾದ ಶಾಸಕರಿಗೆ ಪಂಚತಾರಾ ಹೋಟೆಲ್‌ನಲ್ಲಿ ಐಷಾರಾಮಿ ವಾಸ್ತವ್ಯದ ವ್ಯವಸ್ಥೆ ಮಾಡಲಾಗಿತ್ತು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಚುನಾವಣಾ ಆಯೋಗಕ್ಕೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.
ಎನ್‌ಡಿಎ ಅಭ್ಯರ್ಥಿ(ಮುರ್ಮು), ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ, ವಿಧಾನಸಭೆಯ ಬಿಜೆಪಿ ಮುಖ್ಯ ಸಚೇತಕ ಸತೀಶ್ ರೆಡ್ಡಿ, ಸಚಿವರು ಮತ್ತು ಇತರರ ವಿರುದ್ಧ ದೂರು ನೀಡಲಾಗಿದೆ.
ಬಿಜೆಪಿಯ ಇತರ ಹಿರಿಯ ನಾಯಕರು ಒಟ್ಟಾಗಿ ಸೇರಿ ಬಿಜೆಪಿಯ ಎಲ್ಲ ಶಾಸಕರನ್ನು ಇಲ್ಲಿನ ಪಂಚತಾರಾ ಹೋಟೆಲ್‌ಗೆ ಕರೆಸಿಕೊಂಡು ರಾಷ್ಟ್ರಪತಿ ಚುನಾವಣೆಯಲ್ಲಿ ಮತದಾನ ಮಾಡುವ ಕುರಿತು ಶಾಸಕರಿಗೆ ತರಬೇತಿ ನೀಡುವ ನೆಪದಲ್ಲಿ ಐಷಾರಾಮಿ ಕೊಠಡಿ, ಊಟ, ಮದ್ಯ, ಪಾನೀಯ, ಮನರಂಜನೆ ಒದಗಿಸಿದರು.
"ಬಿಜೆಪಿ ನಾಯಕರ ಶಾಸಕರಿಗೆ ಈ ಎಲ್ಲಾ ಸೌಲಭ್ಯಗಳನ್ನು ನೀಡುವ ಮೂಲಕ ದ್ರೌಪದಿ ಮುರ್ಮು ಪರವಾಗಿ ಮತ ಹಾಕಲು ಅನಗತ್ಯ ಪ್ರಭಾವ ಬೀರಿದ್ದಾರೆ. ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ" ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕ ವಿ.ಎಸ್.ಉಗ್ರಪ್ಪ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಆದೇಶದ ಮೇರೆಗೆ ನಿನ್ನೆ ನಡೆದ ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಹಾಗೂ ರಾಜ್ಯದ ಮುಖ್ಯಮಂತ್ರಿಗಳು, ಮಂತ್ರಿಗಳು, ಶಾಸಕರು ಚುನಾವಣಾ ಅಪರಾಧ ಮಾಡಿದ್ದು, ಅವರ ವಿರುದ್ಧ ಸೆಕ್ಷನ್ 171 ಬಿ, 171ಸಿ, 171 ಇ, 171ಎಫ್ ಪ್ರಕಾರ ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮುಕ್ತ ಹಾಗೂ ಪಾರದರ್ಶಕ ಚುನಾವಣೆ ನಡೆಯಬೇಕು. ಯಾವುದೇ ಆಮಿಷ, ಒತ್ತಡ ಹಾಕಬಾರದು. ಹಾಕಿದರೆ ಅದು ಅಪರಾಧವಾಗುತ್ತದೆ. ಇದು ಜನತಾ ಪ್ರಾತಿನಿದ್ಯ ಕಾಯ್ದೆ, ಐಪಿಸಿ ಸೆಕ್ಷನ್ ಹಾಗೂ ಅಧ್ಯಕ್ಷೀಯ ಚುನಾವಣಾ ಕಾಯ್ದೆಯಲ್ಲಿ ಪ್ರಸ್ತಾಪವಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


