ರಾಜಕೀಯ

ಕಾಂಗ್ರೆಸ್ ಮುಕ್ತ ಕರ್ನಾಟಕದ ಬ್ರ್ಯಾಂಡ್ ಅಂಬಾಸಿಡರ್ ಆಗಿ ನಾಲ್ವರು ನೇಮಕ: ಟಗರಿನ ಕೊಂಬು ಮುರಿಯುವುದೋ ಬಂಡೆ ಪುಡಿಯಾಗುವುದೋ?

ಕಾಂಗ್ರೆಸ್ ಮುಕ್ತ ಕರ್ನಾಟಕದ ಅಘೋಷಿತ ಬ್ರ್ಯಾಂಡ್ ಅಂಬಾಸಿಡರ್ ಆಗಿ ನಾಲ್ವರು ನೇಮಕವಾಗಿದ್ದಾರೆ, ಕಾಂಗ್ರೆಸ್ ಪಕ್ಷವನ್ನು ಕರ್ನಾಟಕದಲ್ಲಿ ಬೇರು ಸಮೇತ ಕಿತ್ತು ಹಾಕಲು ಇವರು ಭಾರೀ ಪೈಪೋಟಿ ನಡೆಸುತ್ತಿದ್ದಾರೆ ಎಂದು ಬಿಜೆಪಿ ಲೇವಡಿ ಮಾಡಿದೆ.

ಕಾಂಗ್ರೆಸ್ ಮುಕ್ತ ಕರ್ನಾಟಕದ ಬ್ರ್ಯಾಂಡ್ ಅಂಬಾಸಿಡರ್ ಆಗಿ ನಾಲ್ವರು ನೇಮಕ: ಟಗರಿನ ಕೊಂಬು ಮುರಿಯುವುದೋ ಬಂಡೆ ಪುಡಿಯಾಗುವುದೋ?
ಕಾಂಗ್ರೆಸ್ ಮುಕ್ತ ಕರ್ನಾಟಕದ ಬ್ರ್ಯಾಂಡ್ ಅಂಬಾಸಿಡರ್ ಆಗಿ ನಾಲ್ವರು ನೇಮಕ
Published On :

ಬೆಂಗಳೂರು: ಕಾಂಗ್ರೆಸ್ ಮುಕ್ತ ಕರ್ನಾಟಕದ ಅಘೋಷಿತ ಬ್ರ್ಯಾಂಡ್ ಅಂಬಾಸಿಡರ್ ಆಗಿ ನಾಲ್ವರು ನೇಮಕವಾಗಿದ್ದಾರೆ, ಕಾಂಗ್ರೆಸ್ ಪಕ್ಷವನ್ನು ಕರ್ನಾಟಕದಲ್ಲಿ ಬೇರು ಸಮೇತ ಕಿತ್ತು ಹಾಕಲು ಇವರು ಭಾರೀ ಪೈಪೋಟಿ ನಡೆಸುತ್ತಿದ್ದಾರೆ ಎಂದು ಬಿಜೆಪಿ ಲೇವಡಿ ಮಾಡಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ಮುಕ್ತ ಕರ್ನಾಟಕದ ಅಘೋಷಿತ ಬ್ರ್ಯಾಂಡ್ ಅಂಬಾಸಿಡರ್ ಆಗಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಡಾ.ಜಿ. ಪರಮೇಶ್ವರ ನೇಮಕವಾಗಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾದವರೇ ಸಿಎಂ ಆಗುವುದು ವಾಡಿಕೆ ಎಂದಿದ್ದ ಡಾ.ಜಿ.ಪರಮೇಶ್ವರ ಅವರನ್ನು ಸಿದ್ದರಾಮಯ್ಯ ಬಣ ಸೋಲಿಸಿತ್ತು. ಕೆಪಿಸಿಸಿ ಅಧ್ಯಕ್ಷ  ಡಿಕೆ ಶಿವಕುಮಾರ್ ಅವರೇ ಎಚ್ಚರಿಕೆಯ ಕರೆಗಂಟೆ ಬಾರಿಸುತ್ತಿದೆ! ತಾನು ಉಳಿಯಬೇಕೆಂದರೆ ಇನ್ನೊಬ್ಬರನ್ನು ಮಕಾಡೆ ಮಲಗಿಸುವ" ತಂತ್ರದಿಂದ ಕಾಂಗ್ರೆಸ್‌ ಮುಕ್ತ ಕರ್ನಾಟಕ ವಾಗುವುದರಲ್ಲಿ ಸಂಶಯವಿಲ್ಲ ಎಂದು ಬಿಜೆಪಿ ಕಾಲೆಳೆದಿದೆ.

ಟಗರು ಮತ್ತು ಬಂಡೆ ನಡುವೆ ಕಾದಾಟ ಆರಂಭಗೊಂಡಿದೆ. ಟಗರಿನ ಕೊಂಬು ಮುರಿಯಬಹುದೇ ಅಥವಾ ಬಂಡೆ ಪುಡಿಯಾಗಬಹುದೇ? ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವಿನ ಕಾದಾಟದಲ್ಲಿ ಕಾಂಗ್ರೆಸ್‌ ಮನೆ ಖಾಲಿಯಾಗಲಿದೆ. ಕಾಂಗ್ರೆಸ್‌ ಮುಕ್ತ ಕರ್ನಾಟಕ ನಿರ್ಮಿಸಲು ಪಣತೊಟ್ಟ ಈ ಇಬ್ಬರು ನಾಯಕರಿಗೆ ಜನತೆಯ ಪರವಾಗಿ ಅಭಿನಂದನೆಗಳು ಎಂದು ಬಿಜೆಪಿ ಟಾಂಗ್ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.