ಕೆಪಿಸಿಸಿ ಅಧ್ಯಕ್ಷರಾಗಿಯೇ ಸರಿಯಾಗಿ ಕೆಲಸ ಮಾಡಲು ಬಿಡುತ್ತಿಲ್ಲ, ಇನ್ನು ಶಿವಕುಮಾರ್ ಸಿಎಂ ಆಗಲು ಬಿಡುತ್ತಾರೆಯೇ: ಬೊಮ್ಮಾಯಿ
ಡಿ ಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿಯೇ ಸರಿಯಾಗಿ ಕೆಲಸ ಮಾಡಲು ಅವರ ಪಕ್ಷದವರೇ ಬಿಡುತ್ತಿಲ್ಲ, ಇನ್ನು ಮುಖ್ಯಮಂತ್ರಿಯಾಗಲು ಬಿಡುತ್ತಾರೆಯೇ, ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ನಾನೊಂದು ತೀರ ನೀನೊಂದು ತೀರ ಎನ್ನುವ ರೀತಿಯಲ್ಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೇವಡಿ ಮಾಡಿದ್ದಾರೆ.

ಮೈಸೂರು: ಡಿ ಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿಯೇ ಸರಿಯಾಗಿ ಕೆಲಸ ಮಾಡಲು ಅವರ ಪಕ್ಷದವರೇ ಬಿಡುತ್ತಿಲ್ಲ, ಇನ್ನು ಮುಖ್ಯಮಂತ್ರಿಯಾಗಲು ಬಿಡುತ್ತಾರೆಯೇ, ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ನಾನೊಂದು ತೀರ ನೀನೊಂದು ತೀರ ಎನ್ನುವ ರೀತಿಯಲ್ಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೇವಡಿ ಮಾಡಿದ್ದಾರೆ.
ಮೈಸೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಹಳ ವರ್ಷಗಳಿಂದ ಸಿಎಂ ಆಗಬೇಕೆಂದು ಡಿ ಕೆ ಶಿವಕುಮಾರ್ ಒದ್ದಾಡುತ್ತಿದ್ದಾರೆ. ಸಿಎಂ ಆಗಬೇಕೆಂದು ಅವರ ಬಹಳ ವರ್ಷದ ಕನಸಾಗಿದೆ ಎಂದರು.
ರಾಜ್ಯದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕಾವೇರಿ ಕಣಿವೆ ವ್ಯಾಪ್ತಿಯ ಜಲಾಶಯಗಳು ಬಹುತೇಕ ಭರ್ತಿಯಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬೆಳಿಗ್ಗೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿ ಕಬಿನಿ ಹಾಗೂ ಕೆ.ಆರ್.ಎಸ್. ಜಲಾಶಯಗಳಿಗೆ ಪತ್ನಿ ಚೆನ್ನಮ್ಮ ಜೊತೆ ಆಗಮಿಸಿ ಬಾಗಿನ ಅರ್ಪಿಸಿದರು.
ಇದನ್ನೂ ಓದಿ: 'ಮುಂದಿನ ಚುನಾವಣೆಯಲ್ಲಿ ಚಾಮುಂಡೇಶ್ವರಿಯಿಂದ ಸ್ಪರ್ಧಿಸಲ್ಲ; ರಾಜ್ಯಸಭೆ ಸೇರಿ ಯಾವುದೇ ಹುದ್ದೆ ನೀಡಿದರೂ ಸ್ವೀಕರಿಸುವುದಿಲ್ಲ'
ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದರು. ಇದು ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕಿನಲ್ಲಿದೆ. ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಎಸ್.ಟಿ.ಸೋಮಶೇಖರ್, ಶಾಸಕರಾದ ಅನಿಲ್ ಚಿಕ್ಕಮಾದು, ಡಾ.ಹರ್ಷವರ್ಧನ್ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


