2023ರ ವಿಧಾನಸಭೆ ಚುನಾವಣೆಯಲ್ಲಿ ಕೆಜಿಎಫ್ ಅಭ್ಯರ್ಥಿ ವೈ.ಸಂಪಂಗಿ: ಸಚಿವ ಮುನಿರತ್ನ ಘೋಷಣೆ
ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕೆಜಿಎಫ್ ಕ್ಷೇತ್ರಕ್ಕೆ ವೈ.ಸಂಪಂಗಿ ಅಭ್ಯರ್ಥಿ ಎಂದು ಸಚಿವ ಮುನಿರತ್ನ ಘೋಷಿಸಿದ್ದಾರೆ.

ಕೋಲಾರ: ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕೆಜಿಎಫ್ ಕ್ಷೇತ್ರಕ್ಕೆ ವೈ.ಸಂಪಂಗಿ ಅಭ್ಯರ್ಥಿ ಎಂದು ಸಚಿವ ಮುನಿರತ್ನ ಘೋಷಿಸಿದ್ದಾರೆ.
ಕೋಲಾರದಲ್ಲಿ ಮಾತನಾಡಿದ ಅವರು, ಸಂಪಂಗಿ ಅವರು ಕೆಜಿಎಫ್ ನಿಂದ ಸ್ಪರ್ಧಿಸಿ ಭಾರೀ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಎಂದು ಹೇಳಿದ್ದು, ಅಲ್ಲಿ ನೆರೆದಿದ್ದ ಕೆಲ ನಾಯಕರ ಅಸಮಾಧಾನಕ್ಕೆ ಕಾರಣವಾಯಿತು.
ಸಂಪಂಗಿಯಿಂದಾಗಿ ಪಕ್ಷ ಇಬ್ಭಾಗವಾಗಿರುವ ಕೆಜಿಎಫ್‌ನಲ್ಲಿನ ವಾಸ್ತವತೆಯನ್ನು ಸಚಿವರು ಪರಿಶೀಲಿಸಬೇಕು ಎಂದು ಕೆಜಿಎಫ್ ನಗರ ಘಟಕದ ಬಿಜೆಪಿ ಅಧ್ಯಕ್ಷ ಕಮಲನಾಥನ್ ಹೇಳಿದರು. ಇದರಿಂದ ಅಸಮಾಧಾನಗೊಂಡ ಮುನಿರತ್ನ ಅವರು ಕಾಂಗ್ರೆಸ್ ನಾಯಕರಂತೆ ಮಾತನಾಡಬೇಡಿ ಎಂದು ಕಮಲನಾಥನ್ ಅವರಲ್ಲಿ ಮನವಿ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


