ಶಿಕಾರಿಪುರಕ್ಕೆ ವಿಜಯೇಂದ್ರ ಹುರಿಯಾಳು: ಸೇಫ್ ಕ್ಷೇತ್ರ ಹುಡುಕುತ್ತಿರುವ ಸಿದ್ದರಾಮಯ್ಯ ಕಣ್ಣು ವರುಣಾ ಮೇಲೆ?
ಸಿದ್ದರಾಮಯ್ಯ ಅವರು ‘ಸುರಕ್ಷಿತ’ ವಿಧಾನಸಭಾ ಸ್ಥಾನಕ್ಕಾಗಿ ಹುಡುಕಾಟ ನಡೆಸುತ್ತಿರುವ ಸಮಯದಲ್ಲಿ ಚುನಾವಣಾ ರಾಜಕೀಯಕ್ಕೆ ವಿದಾಯ ಹೇಳಲು ಬಿಎಸ್ವೈ ನಿರ್ಧರಿಸಿದ್ದಾರೆ.

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪುತ್ರ ಬಿವೈ ವಿಜಯೇಂದ್ರ ಶಿಕಾರಿಪುರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಶುಕ್ರವಾರ ಘೋಷಿಸಿರುವ ಹಿನ್ನೆಲೆಯಲ್ಲಿ, ಸಿಎಲ್ಪಿ ನಾಯಕ ಸಿದ್ದರಾಮಯ್ಯ ಮೈಸೂರಿನ ವರುಣಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ.
ಸಿದ್ದರಾಮಯ್ಯ ಅವರು ‘ಸುರಕ್ಷಿತ’ ವಿಧಾನಸಭಾ ಸ್ಥಾನಕ್ಕಾಗಿ ಹುಡುಕಾಟ ನಡೆಸುತ್ತಿರುವ ಸಮಯದಲ್ಲಿ ಚುನಾವಣಾ ರಾಜಕೀಯಕ್ಕೆ ವಿದಾಯ ಹೇಳಲು ಬಿಎಸ್ವೈ ನಿರ್ಧರಿಸಿದ್ದಾರೆ. ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಈ ಮೊದಲೇ ಘೋಷಿಸಿದ್ದಾರೆ.
ಸಿದ್ದರಾಮಯ್ಯ 2018 ರಲ್ಲಿ 2,000 ಮತಗಳ ಅಂತರದಿಂದ ಗೆದ್ದಿದ್ದ ಬಾದಾಮಿ ಕ್ಷೇತ್ರದಿಂದ ಸ್ಥಳಾಂತರಗೊಳ್ಳಲು ಬಯಸಿದ್ದಾರೆ ಹೀಗಾಗಿ ಅವರ ಬೆಂಬಲಿಗರು ನೆರೆಯ ಕ್ಷೇತ್ರಗಳಲ್ಲಿ ಬಂದು ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ.
ಜೆಡಿಎಸ್ನಿಂದ ಉಚ್ಛಾಟಿತರಾಗಿರುವ ಹಾಲಿ ಶಾಸಕ ಕೆ.ಶ್ರೀನಿವಾಸಗೌಡ ಅವರಿಂದ ತೆರವಾಗಿರುವ ಕೋಲಾರ ವಿಧಾನಸಭಾ ಕ್ಷೇತ್ರವನ್ನು ಪರಿಗಣಿಸುವ ಬಗ್ಗೆಯೂ ಮಾತುಕತೆ ನಡೆದಿದೆ.
ಇದನ್ನೂ ಓದಿ: 'ಮುಂದಿನ ಚುನಾವಣೆಯಲ್ಲಿ ಚಾಮುಂಡೇಶ್ವರಿಯಿಂದ ಸ್ಪರ್ಧಿಸಲ್ಲ; ರಾಜ್ಯಸಭೆ ಸೇರಿ ಯಾವುದೇ ಹುದ್ದೆ ನೀಡಿದರೂ ಸ್ವೀಕರಿಸುವುದಿಲ್ಲ'
2023ರ ವಿಧಾನಸಭೆ ಚುನಾವಣೆ ತಮ್ಮ ಕೊನೆಯ ಚುನಾವಣೆ ಎಂದು ಹೇಳಿರುವ ಸಿದ್ದರಾಮಯ್ಯ ಅವರು ಮೈಸೂರಿಗೆ ಮರಳುವ ಆಸೆ ಹೊಂದಿದ್ದಾರೆ. ಅವರ ಪುತ್ರ ಡಾ.ಯತೀಂದ್ರ ಅವರು ವರುಣಾ ಕ್ಷೇತ್ರದ ಹಾಲಿ ಶಾಸಕರಾಗಿರುವುದರಿಂದ ಯಾವುದೇ ತೊಂದರೆಯಾಗುವುದಿಲ್ಲ ಎಂದು ಮೂಲಗಳು ತಿಳಿಸಿವೆ.
2018ರ ವಿಧಾನಸಭೆ ಚುನಾವಣೆಯಲ್ಲಿ ವರುಣಾದಿಂದ ಸ್ಪರ್ಧಿಸಲು ಬಯಸಿದ್ದ ವಿಜಯೇಂದ್ರ ಅವರಿಗೆ ಬಿಜೆಪಿ ಟಿಕೆಟ್ ಕೈ ತಪ್ಪಿದ್ದು, ಡಾ.ಯತೀಂದ್ರ ಗೆಲುವಿಗೆ ನೆರವಾಗಿತ್ತು ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


