ನನ್ನ ರಾಜಿನಾಮೆ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ: ಬಿ.ಎಸ್ ಯಡಿಯೂರಪ್ಪ
ನಾನು ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡೋದಿಲ್ಲ. ಆದ್ರೆ ಸಕ್ರಿಯ ರಾಜಕೀಯದಿಂದ ನಿವೃತ್ತಿ ಪಡೆಯೋದಿಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರು: ನಾನು ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡೋದಿಲ್ಲ. ಆದ್ರೆ ಸಕ್ರಿಯ ರಾಜಕೀಯದಿಂದ ನಿವೃತ್ತಿ ಪಡೆಯೋದಿಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಶಿಕಾರಿಪುರದಲ್ಲಿ ನನ್ನ ಬದಲಿಗೆ ವಿಜಯೇಂದ್ರ ಸ್ಪರ್ಧೆ ಮಾಡುತ್ತಾರೆ ಎಂದು ಸಲಹೆ ನೀಡಿದೆ ಅಷ್ಟೇ. ಅಂತಿಮವಾಗಿ ತೀರ್ಮಾನ ಹೈಕಮಾಂಡ್ ಮಾಡುತ್ತೆ ಎಂದು ಯಡಿಯೂರಪ್ಪ ಸಮಜಾಯಿಷಿ ನೀಡಿದ್ದಾರೆ. ಯಡಿಯೂರಪ್ಪ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಬ್ಬರೂ ಪಕ್ಷದ ಹೈಕಮಾಂಡ್ ಸೂಚನೆ ಮೇರೆಗೆ ಗೊಂದಲ ಸ್ಪಷ್ಟಪಡಿಸಲು ಹೇಳಿಕೆ ನೀಡಿದರು.
ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿ ಒಂದು ವರ್ಷ ಪೂರೈಸುವ ಮುನ್ನವೇ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಜುಲೈ 28 ರಂದು ದೊಡ್ಡಬಳ್ಳಾಪುರದಲ್ಲಿ ನಡೆಯಲಿರುವ ರ್ಯಾಲಿಯಲ್ಲಿ 2023 ರ ವಿಧಾನಸಭಾ ಚುನಾವಣೆಗೆ ಪಕ್ಷದ ಕಾರ್ಯತಂತ್ರವನ್ನು ಅನಾವರಣಗೊಳಿಸುವುದಾಗಿ ಘೋಷಿಸಿದರು.
ಯಡಿಯೂರಪ್ಪ ಅವರು ಸಕ್ರಿಯ ರಾಜಕಾರಣದಿಂದ ನಿವೃತ್ತಿಯಾಗಲಿದ್ದಾರೆ ಎಂಬ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಅವರು ನಮ್ಮ ಶಕ್ತಿ, ಮಾರ್ಗದರ್ಶಿ ಮತ್ತು ರಾಜ್ಯದ ಅತ್ಯಂತ ಜನಪ್ರಿಯ ನಾಯಕ ಎಂದು ಬೊಮ್ಮಾಯಿ ಹೇಳಿದರು. ಬೊಮ್ಮಾಯಿ ಅವರು ಕಂದಾಯ ಸಚಿವ ಆರ್.ಅಶೋಕ ಅವರೊಂದಿಗೆ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಬಿಎಸ್‌ವೈ ಅವರ ಹೇಳಿಕೆ ಕೇವಲ ಸಲಹೆಯಾಗಿದೆ ಎಂದು ಸಮರ್ಥನೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


