ಬೆಂಗಳೂರು: ಅತೃಪ್ತ ಶಾಸಕರ ಚಲನವಲನ ಮೇಲೆ ನಿಗಾ ಇಟ್ಟಿದ್ದೆ: ನವ್ಯಶ್ರೀ ಹೊಸ ಬಾಂಬ್
ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಪತನಗೊಳಿಸಿದ ಅತೃಪ್ತ ಶಾಸಕರು ಮುಂಬೈನಲ್ಲಿದ್ದಾಗ ಅವರ ಚಲನವಲನ ಗಮನಿಸುವ ಸೀಕ್ರೆಟ್ ಕೆಲಸ ನೀಡಲಾಗಿತ್ತು ಎಂದು ಕಾಂಗ್ರೆಸ್ ಕಾರ್ಯಕರ್ತೆ ಎಂದು ಹೇಳಿಕೊಳ್ಳುವ ನವ್ಯ ಶ್ರೀ ಹೊಸ ಬಾಂಬ್ ಸಿಡಿಸಿದ್ದಾರೆ.

ಬೆಳಗಾವಿ: ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಪತನಗೊಳಿಸಿದ ಅತೃಪ್ತ ಶಾಸಕರು ಮುಂಬೈನಲ್ಲಿದ್ದಾಗ ಅವರ ಚಲನವಲನ ಗಮನಿಸುವ ಸೀಕ್ರೆಟ್ ಕೆಲಸ ನೀಡಲಾಗಿತ್ತು ಎಂದು ಕಾಂಗ್ರೆಸ್ ಕಾರ್ಯಕರ್ತೆ ಎಂದು ಹೇಳಿಕೊಳ್ಳುವ ನವ್ಯ ಶ್ರೀ ಹೊಸ ಬಾಂಬ್ ಸಿಡಿಸಿದ್ದಾರೆ.
2019ರಲ್ಲಿ ಮುಂಬೈ ಹೋಟೆಲ್ ನಲ್ಲಿ ತಂಗಿದ್ದ ಅತೃಪ್ತ ಶಾಸಕರ ಚಲನವಲನ ನೋಡಿಕೊಳ್ಳಲು ನನ್ನ ಜೊತೆಗೆ ಮೂವರು ಮಹಿಳೆಯರಿಗೆ ಸೀಕ್ರೆಟ್ ಟಾಸ್ಕ್ ನೀಡಲಾಗಿತ್ತು. ಆ ಕೆಲಸ ನೀಡಿದವರ ಹೆಸರನ್ನು ಬಹಿರಂಗಪಡಿಸಲ್ಲ, ಆದರೆ, ಅವರು ಕಾಂಗ್ರೆಸ್ ಮುಖಂಡರು ಎಂದು ಹೇಳಿದರು. ಸೀಕ್ರೆಟ್ ಟಾಸ್ಕ್ ಅಂದರೆ ಹನಿ ಟ್ರ್ಯಾಪ್ ಎಂದರ್ಥವಲ್ಲಾ ಎಂದು ಸ್ಪಷ್ಪಪಡಿಸಿದರು.
ಚನ್ನಪಟ್ಟಣದ ಕಾಂಗ್ರೆಸ್ ಮುಖಂಡರೊಬ್ಬರು ನನ್ನ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾರೆ. ಕಾನೂನು ಹೋರಾಟದ ಮೂಲಕ ಆತನನ್ನು ಬಯಲಿಗೆಳೆಯುತ್ತೇನೆ. ಪತ್ರಿಕೆಯೊಂದರ ಸಂಪಾದಕರೂ ಆಗಿರುವ ಕಾಂಗ್ರೆಸ್ ಮುಖಂಡರೊಬ್ಬರು ಕೂಡಾ ಭಾಗಿಯಾಗಿದ್ದಾರೆ. ದೆಹಲಿಯ ಕಾಂಗ್ರೆಸ್ ನಾಯಕರ ಜೊತೆ ನನಗೆ ನಂಟು ಇರುವುದು ನಿಜ. ನಾನು ಬೆಳಗಾವಿಯಿಂದ ಸ್ಪರ್ಧಿಸಲು ಬಯಸಿದ್ದೆ ಮತ್ತು ನನ್ನ ರಾಜಕೀಯ ಏಳಿಗೆ ಸಹಿಸದವರು ಇದನ್ನು ಮಾಡಿದ್ದಾರೆ ಎಂದು ಅವರು ಹೇಳಿದರು.
ರಾಜ್‌ಕುಮಾರ್ ಟಾಕಳೆ ಕುರಿತು ಮಾತನಾಡಿದ ಅವರು, ಅವರು ನನಗೆ ಮೋಸ ಮಾಡಿದ್ದಾರೆ. ಕಾನೂನು ಹೋರಾಟದ ಮೂಲಕ ಅವರಿಗೆ ತಕ್ಕ ಉತ್ತರ ನೀಡುತ್ತೇನೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


