ಜಮೀರ್ ಅಹ್ಮದ್ ಮುಂದೊಂದು ದಿನ ರಾಜ್ಯದ ಸಿಎಂ ಆಗಬೇಕು: ವಿರಕ್ತಮಠ ಸ್ವಾಮೀಜಿ
ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿ ಬಡಿದಾಟ ಜೋರಾಗಿರುವಾಗಲೇ ವಿರಕ್ತಮಠದ ಪಂಚಾಕ್ಷರಿ ಸ್ವಾಮಿಗಳು ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡಿದ್ದಾರೆ. ಜಮೀರ್ ಅಹ್ಮದ್ ಖಾನ್ ಅವರು ಜಾತಿ ಧರ್ಮ ನೋಡದೇ ಸರ್ವಧರ್ಮೀಯರನ್ನು ಪ್ರೀತಿ ವಿಶ್ವಾಸದಿಂದ ಕಾಣುತ್ತಾರೆ. ಮುಂಬರುವ ದಿನಗಳಲ್ಲಿ ಸಿಎಂ ಆಗುತ್ತಾರೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಬೆಳಗಾವಿ: ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿ ಬಡಿದಾಟ ಜೋರಾಗಿರುವಾಗಲೇ ವಿರಕ್ತಮಠದ ಪಂಚಾಕ್ಷರಿ ಸ್ವಾಮಿಗಳು ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡಿದ್ದಾರೆ. ಜಮೀರ್ ಅಹ್ಮದ್ ಖಾನ್ ಅವರು ಜಾತಿ ಧರ್ಮ ನೋಡದೇ ಸರ್ವಧರ್ಮೀಯರನ್ನು ಪ್ರೀತಿ ವಿಶ್ವಾಸದಿಂದ ಕಾಣುತ್ತಾರೆ. ಮುಂಬರುವ ದಿನಗಳಲ್ಲಿ ಸಿಎಂ ಆಗುತ್ತಾರೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಬೈಲಹೊಂಗಲ ಮತಕ್ಷೇತ್ರದ ಯಕ್ಕುಂಡಿ ಗ್ರಾಮದ ದೀಲಾವರ್ ದರ್ಗಾದಲ್ಲಿ ನಿನ್ನೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಕ್ಕುಂಡಿ ಗ್ರಾಮದ ದರ್ಗಾ ಹಿಂದೂ-ಮುಸ್ಲಿಂ ಭಾವೈಕ್ಯತೆ ಸಂಕೇತವಾಗಿದ್ದು, ಶಂಕರ ಪಾಟೀಲ್ ಅವರಿಂದ ದರ್ಗಾ ಅಭಿವೃದ್ಧಿಯಾಗಿದೆ. ಬೆಂಗಳೂರಿನಿಂದ ದರ್ಗಾಕ್ಕೆ ಮಾಜಿ ಸಚಿವರು ಜಮೀರ್ ಅಹ್ಮದ್‍ಖಾನ್ ಬಂದಿದ್ದಾರೆ. ಹಾಗಿರುವಾಗ ಇದರ ಶಕ್ತಿ ಎಷ್ಟಿದೆ ಎಂದು ಊಹಿಸಿಕೊಳ್ಳಿ ಎಂದಿದ್ದಾರೆ.
ಜಮೀರ್ ಮುಂದೆ ಸಿಎಂ ಆಗುತ್ತಾರೆ: ಜಮೀರ್ ಅಹ್ಮದ್‍ಖಾನ್ ಅವರು ಮುಂದೆ ಸಿಎಂ ಆಗುತ್ತಾರೆ. ಜಮೀರ್ ಅಹ್ಮದ್ ಖಾನ್ ಅವರು ಜಾತಿ ಧರ್ಮ ನೋಡದೇ ಸರ್ವಧರ್ಮೀಯರನ್ನು ಪ್ರೀತಿ ವಿಶ್ವಾಸದಿಂದ ಕಾಣುತ್ತಾರೆ. ಸಮಾಜಸೇವೆ ಮಾಡುತ್ತಾ ಬಂದಿದ್ದಾರೆ. ಇವರು ಮತ್ತೊಮ್ಮೆ ಮಂತ್ರಿಗಳಾಗಿ, ಮಠಕ್ಕೆ ಬರಬೇಕು. ಅಷ್ಟೇ ಅಲ್ಲದೇ ಇಂತಹ ಒಳ್ಳೆಯ ಮನಸ್ಸಿನ ಜಮೀರ್ ಅವರು, ಮುಂದಿನ ದಿನಗಳಲ್ಲಿ ರಾಜ್ಯದ ಮುಖ್ಯಮಂತ್ರಿಗಳಾಗಬೇಕು ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


