ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ಮಾಡಿ ಆದೇಶ: ವಿಜಯನಗರಕ್ಕೆ ಆನಂದ್ ಸಿಂಗ್, ಕೊಪ್ಪಳಕ್ಕೆ ಶಶಿಕಲಾ ಜೊಲ್ಲೆ ನೇಮಕ!
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರ ಇಬ್ಬರು ಹೊಸ ಜಿಲ್ಲಾ ಉಸ್ತುವಾರಿ ಸಚಿವರುಗಳನ್ನ ನೇಮಕ ಮಾಡಿ ಆದೇಶ ಹೊರಡಿಸಿದೆ.

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರ ಇಬ್ಬರು ಹೊಸ ಜಿಲ್ಲಾ ಉಸ್ತುವಾರಿ ಸಚಿವರುಗಳನ್ನ ನೇಮಕ ಮಾಡಿ ಆದೇಶ ಹೊರಡಿಸಿದೆ.
ಈ ಹಿಂದೆ ಜನವರಿ 24 ರಂದು ವಿವಿಧ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರುಗಳನ್ನ ನೇಮಕ ಮಾಡಿದ್ದ ಬೊಮ್ಮಾಯಿ ಸರಕಾರ ಈಗ ಅಧಿಸೂಚನೆಯನ್ನು ತಿದ್ದುಪಡಿ ಮಾಡಿ ಪ್ರವಾಸೋದ್ಯಮ ಇಲಾಖೆ ಸಚಿವ ಆನಂದ್ ಸಿಂಗ್ ಅವರನ್ನು ವಿಜಯನಗರ ಜಿಲ್ಲೆಯ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದ್ದು, ಮುಜುರಾಯಿ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆಗೆ ಕೊಪ್ಪಳ ಜಿಲ್ಲೆಯ ಜವಾಬ್ದಾರಿಯನ್ನು ನೀಡಲಾಗಿದೆ.
ಈ ಹಿಂದೆ ಸಚಿವ ಆನಂದ್ ಸಿಂಗ್ ಗೆ ಕೊಪ್ಪಳ ಜಿಲ್ಲೆ ಉಸ್ತುವಾರಿ ಮತ್ತು ಶಶಿಕಲಾ ಜೊಲ್ಲೆಗೆ ವಿಜಯನಗರ ಜಿಲ್ಲೆ ಉಸ್ತುವಾರಿ ವಹಿಸಲಾಗಿತ್ತು. ಸ್ವಂತ ಜಿಲ್ಲೆಯ ಸಚಿವರುಗಳಿಗೆ ಬೇರೆ ಜಿಲ್ಲೆ ಉಸ್ತುವಾರಿ ನೀಡಿದ್ದು, ತೀವ್ರ ವಿವಾದಕ್ಕೆ ಕಾರಣವಾಗಿತ್ತು.
ವಿಜಯನಗರದಿಂದ ಆನಂದ್ ಸಿಂಗ್ ಅವರನ್ನ ಬದಲಾವಣೆ ಮಾಡಿದಕ್ಕೆ ಹೊಸಪೇಟೆಯಲ್ಲಿ ಕಾರ್ಯಕರ್ತರು ಬೆಂಕಿ ಹಚ್ಚಿ ಪ್ರತಿಭಟನೆ ಮಾಡಿದ್ದರು. ಇದಕ್ಕೆ ಆನಂದ್ ಸಿಂಗ್, ಇವೆಲ್ಲಾ ತಾಂತ್ರಿಕ ಸಮಸ್ಯೆಗಳು. ನಾನು ಒಪ್ಪಿದ ನಂತರವೇ ಉಸ್ತುವಾರಿ ಬದಲಾವಣೆ ಆಗಿದೆ. ಎಲ್ಲವನ್ನೂ ಹೊರಗಡೆ ಹೇಳುವ ಹಾಗಿಲ್ಲ ಎಂದು ಅಭಿಮಾನಿಗಳನ್ನ ಸಮಾಧಾನಪಡಿಸಿಸಿದ್ದರು. ಇದಾಗಿ 6 ತಿಂಗಳ ಬಳಿಕ ಇದೀಗ ಮತ್ತೆ ಆನಂದ್ ಸಿಂಗ್ ಗೆ ವಿಜಯನಗರದ ಉಸ್ತುವಾರಿ ನೀಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


