ವಿಧಾನ ಪರಿಷತ್ ಪದವೀಧರ, ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ: ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿ
ಮೊನ್ನೆ ಜೂನ್ 13ರಂದು ವಿಧಾನ ಪರಿಷತ್ ನ ವಾಯವ್ಯ ಮತ್ತು ದಕ್ಷಿಣ ಪದವೀಧರರ ಕ್ಷೇತ್ರಗಳು, ವಾಯವ್ಯ ಮತ್ತು ಪಶ್ಚಿಮ ಶಿಕ್ಷಕರ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಇಂದು ಬುಧವಾರ ಬೆಳಗ್ಗೆ 8 ಗಂಟೆಗೆ ಆರಂಭವಾಗಿದೆ. ಮತ ಎಣಿಕೆ ಕೇಂದ್ರಗಳಲ್ಲಿ ಬಿಗುವಿನ ವಾತಾವರಣವಿದ್ದು ಚುನಾವಣಾ ಆಯೋಗ ಭದ್ರತೆ ಕಲ್ಪಿಸಿದೆ.

ಬೆಂಗಳೂರು: ಮೊನ್ನೆ ಜೂನ್ 13ರಂದು ವಿಧಾನ ಪರಿಷತ್ ನ ವಾಯವ್ಯ ಮತ್ತು ದಕ್ಷಿಣ ಪದವೀಧರರ ಕ್ಷೇತ್ರಗಳು, ವಾಯವ್ಯ ಮತ್ತು ಪಶ್ಚಿಮ ಶಿಕ್ಷಕರ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಇಂದು ಬುಧವಾರ ಬೆಳಗ್ಗೆ 8 ಗಂಟೆಗೆ ಆರಂಭವಾಗಿದೆ. ಮತ ಎಣಿಕೆ ಕೇಂದ್ರಗಳಲ್ಲಿ ಬಿಗುವಿನ ವಾತಾವರಣವಿದ್ದು ಚುನಾವಣಾ ಆಯೋಗ ಭದ್ರತೆ ಕಲ್ಪಿಸಿದೆ.
ಎಲ್ಲಾ ಮತದಾನ ಕೇಂದ್ರಗಳಲ್ಲಿ ಮತದಾನ ಆರಂಭಗೊಂಡಿದ್ದು, 607 ಮತಗಟ್ಟೆಗಳಲ್ಲಿ 2,84,922 ಶಿಕ್ಷಕರು ಮತ್ತು ಪದವೀಧರರು ತಮ್ಮ ಹಕ್ಕು ಚಲಾಯಿಸಿದ್ದರು. ಚುನಾವಣಾ ಕಣದಲ್ಲಿ ನಾಲ್ವರು ಮಹಿಳೆಯರು ಸೇರಿದಂತೆ 49 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಎಲ್ಲಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ. ವಾಯುವ್ಯ ಪದವೀಧರ ಕ್ಷೇತ್ರವೊಂದರಲ್ಲಿ ಮಾತ್ರ ಜೆಡಿಎಸ್ ಸ್ಪರ್ಧೆ ಮಾಡಿಲ್ಲ.
ಜುಲೈ ನಾಲ್ಕರಂದು ಬಿಜೆಪಿಯ ಹಣಮಂತ ನಿರಾಣಿ, ಜೆಡಿಎಸ್‌ನ ಕೆ.ಟಿ.ಶ್ರೀಕಂಠೇಗೌಡ, ಬಿಜೆಪಿಯ ಅರುಣ್ ಶಹಾಪುರ ಮತ್ತು ಮತ್ತು ಜೆಡಿಎಸ್ ನ ಬಸವರಾಜ ಹೊರಟ್ಟಿ ಅವರ ಅವಧಿ ಅಂತ್ಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಚುನಾವಣೆ ನಡೆದಿತ್ತು. ವಿಧಾನ ಪರಿಷತ್ ನಲ್ಲಿ ಬಹುಮತ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಆಡಳಿತರೂಢ ಬಿಜೆಪಿ ಸರ್ಕಾರಕ್ಕೆ ಈ ಚುನಾವಣೆ ಮಹತ್ವದಾಗಿದೆ. ಬಸವರಾಜ್ ಹೊರಟ್ಟಿ ಈ ಬಾರಿ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದಾರೆ.
ಚುನಾವಣ ಕಣದಲ್ಲಿರುವವರು: ವಾಯವ್ಯ ಶಿಕ್ಷಕ ಕ್ಷೇತ್ರದ ಚುನಾವಣಾ ಕಣದಲ್ಲಿ ಅರುಣ ಶಹಪುರ (ಬಿಜೆಪಿ), ಪ್ರಕಾಶ್ ಹುಕ್ಕೇರಿ (ಕಾಂಗ್ರೆಸ್) ಮತ್ತು ಚಂದ್ರಶೇಖರ್ ಲೋಣ (ಜೆಡಿಎಸ್) ಇದ್ದಾರೆ. ಕ್ಷೇತ್ರ ಅಭ್ಯರ್ಥಿಗಳಾಗಿ ನಿಂಗಪ್ಪ ಬನ್ನೂರು,. ಶ್ರೀಕಾಂತ್ ಪಾಟೀಲ್, ಬಸಪ್ಪ ಮನಿಗಾರ, ಜಯಪಾಲ್ ದೇಸಾಯಿ, ಅಪ್ಪಾಸಾಹೇಬ್ ಕರುಣೆ, ಚಂದ್ರಶೇಖರ್ ಗಡಸಿ, ಸಂಗಮೇಶ್ ಚಿಕ್ಕನರಗುಂದ ಮತ್ತು ಶ್ರೇಣೀಕ್ ಜಾಂಗಟೆ ಕಣದಲ್ಲಿದ್ದಾರೆ.
ದಕ್ಷಿಣ ಪದವೀಧರರ ಕ್ಷೇತ್ರದಲ್ಲಿ ಬಿಜೆಪಿಯಿಂದ ಮಾಜಿ ಎಂಎಲ್ ಸಿ ಎಂವಿ ರವಿಶಂಕರ್, ಕಾಂಗ್ರೆಸ್ ನಿಂದ ಮಧು ಜಿ ಮಾದೇಗೌಡ ಮತ್ತು ಜೆಡಿಎಸ್ ನಿಂದ ಎಚ್ ಕೆ ರಾಮು ಕಣದಲ್ಲಿದ್ದಾರೆ. ಇಂದು ಮತ ಎಣಿಕೆ ಪೂರ್ಣಗೊಂಡು ತಡರಾತ್ರಿ ಹೊತ್ತಿಗೆ ಫಲಿತಾಂಶ ಹೊರಬರುವ ನಿರೀಕ್ಷೆಯಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


