ರಾಷ್ಟ್ರಪತಿ ಚುನಾವಣೆಗೆ ದೇವೇಗೌಡರ ಹೆಸರು ಪ್ರಸ್ತಾಪಿಸಿಯೇ ಇಲ್ಲ: ಎಚ್.ಡಿ ಕುಮಾರಸ್ವಾಮಿ
ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಚರ್ಚೆ ಆಗಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನಮ್ಮ ಕುಟುಂಬದ ಬಗ್ಗೆ ಗೌರವ ಇಟ್ಟು ಸಭೆಗೆ ಆಹ್ವಾನ ನೀಡಿದ್ದರು

ಬೆಂಗಳೂರು: ಮುಂದಿನ ರಾಷ್ಟ್ರಪತಿ ಹುದ್ದೆಗೆ ಯಾರನ್ನು ಆಯ್ಕೆ ಮಾಡಬೇಕು ಎಂಬುದರ ಬಗ್ಗೆ ಬಿಜೆಪಿ ಮತ್ತು ಪ್ರಾದೇಶಿಕ ಪಕ್ಷಗಳ ಬಗ್ಗೆ ಚರ್ಚೆ ನಡೆಯುತ್ತಿರುವುದರ ಮಧ್ಯೆಯೇ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಹೆಸರೂ ಸಹ ಕೇಳಿಬಂದಿತ್ತು. ಆದರೆ, ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು, ಎಚ್.ಡಿ.ದೇವೇಗೌಡ ಅವರು ರಾಷ್ಟ್ರಪತಿ ಹುದ್ದೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ಬಿಬಿಎಂಪಿ ಚುನಾವಣೆ ಹಾಗೂ ಜನತಾ ಮಿತ್ರ ಕಾರ್ಯಕ್ರಮ ಹಿನ್ನೆಲೆಯಲ್ಲಿ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮಾತನಾಡಿದ ಅವರು, ರಾಷ್ಟ್ರಪತಿ ಚುನಾವಣೆಗೆ ದೇವೇಗೌಡರ ಹೆಸರು ಪ್ರಸ್ತಾಪವೇ ಆಗಿಲ್ಲ ಎಂದರು.
ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಚರ್ಚೆ ಆಗಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನಮ್ಮ ಕುಟುಂಬದ ಬಗ್ಗೆ ಗೌರವ ಇಟ್ಟು ಸಭೆಗೆ ಆಹ್ವಾನ ನೀಡಿದ್ದರು. 17 ಪಕ್ಷಗಳ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು. ಆ ಸಭೆಯಲ್ಲಿ ಯಾವುದೇ ಅಭ್ಯರ್ಥಿಯನ್ನು ಅಂತಿಮಗೊಳಿಸಿಲ್ಲ. ಜೂನ್ 20ರಂದು ಮತ್ತೊಂದು ಸುತ್ತಿನ ಸಭೆ ಇದೆ. ಅಂದು ಅಭ್ಯರ್ಥಿ ಆಯ್ಕೆ ಅಂತಿಮ ಮಾಡಲಾಗುತ್ತದೆ ಎಂದು ಹೇಳಿದರು.
ದೇವೇಗೌಡರಿಗೆ ಜೀವನದಲ್ಲಿ ಒಮ್ಮೆ ಕರ್ನಾಟಕದಲ್ಲಿ ಜೆಡಿಎಸ್ ಪಕ್ಷದ ಸ್ವತಂತ್ರ ಸರ್ಕಾರ ಬರಬೇಕು ಎಂಬ ಆಸೆ ಇದೆ. ಸ್ವತಂತ್ರ ಸರ್ಕಾರದ ಬಗ್ಗೆ ಅವರ ಆಸೆ ಪೂರೈಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. ಆದರ ಹೊರತಾಗಿ, ರಾಷ್ಟ್ರಪತಿ ಹುದ್ದೆಯ ಬಗ್ಗೆ ದೇವೇಗೌಡರ ಒಲವು ಇಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


