ಅಗ್ನಿಪಥ್ ಯೋಜನೆ ವಿರೋಧಿಸಿ ಜಂತರ್ ಮಂತರ್ ನಲ್ಲಿ ಕಾಂಗ್ರೆಸ್'ನಿಂದ ಪ್ರತಿಭಟನೆ: ಮಲ್ಲಿಕಾರ್ಜುನ ಖರ್ಗೆ
ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಯೋಜನೆ ವಿರುದ್ಧ ದೆಹಲಿಯ ಜಂತರ್‌ಮಂತರ್‌ನಲ್ಲಿ ಒಂದೆರೆಡು ದಿನದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ ಎಂದು ಶನಿವಾರ ಹೇಳಿದ್ದಾರೆ.

ಕಲಬುರಗಿ: ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಯೋಜನೆ ವಿರುದ್ಧ ದೆಹಲಿಯ ಜಂತರ್‌ಮಂತರ್‌ನಲ್ಲಿ ಒಂದೆರೆಡು ದಿನದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ ಎಂದು ಶನಿವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೂ ಯುವಕರಿಗೆ ರೈಲುಗಳಿಗೆ ಬೆಂಕಿ ಹಚ್ಚಲು ಹೇಳುವುದಿಲ್ಲ ಮತ್ತು ನಾವು ಯಾವುದೇ ರೀತಿಯ ಹಿಂಸಾಚಾರವನ್ನು ಒಪ್ಪುವುದೂ ಇಲ್ಲ. ಆದರೆ ಯುವಕರು ಏಕೆ ಆಕ್ರಮಣಕಾರಿಯಾಗಿದ್ದಾರೆಂಬುದನ್ನು ಅರಿತು, ಅವರನ್ನು ಸಮಾಧಾನಪಡಿಸುವ ಮಾರ್ಗಗಳನ್ನು ಕಂಡುಕೊಳ್ಳಬೇಕಿದೆ. ಸರ್ಕಾರ ಇಂತಹ ಯೋಜನೆಗಳನ್ನು ಜಾರಿಗೊಳಿಸುವಾಗ ಯುವಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಹೇಳಿದರು.
ಅಗ್ನಿಪಥ ಯೋಜನೆಯಡಿ 4 ವರ್ಷಗಳಲ್ಲಿ ಉತ್ತಮ ಸೈನಿಕನಾಗಲು ಸಾಧ್ಯವಿಲ್ಲ. ಈ ಹಂತದಲ್ಲಿ ಸೈನಿಕನಿಗೆ ಶೇ.50ರಷ್ಟು ತರಬೇತಿ ಕೂಡ ಸಿಕ್ಕಿರುವುದಿಲ್ಲ. ಅರ್ಧದಷ್ಟು ಅವಧಿಯು ರಜಾದಿನಗಳಲ್ಲಿ ಅಥವಾ ರಜೆಗಳಲ್ಲಿ ಮುಗಿಯುದಿರುತ್ತದೆ.
“ನಾಲ್ಕು ವರ್ಷಗಳ ನೇಮಕಾತಿಯು ಗುತ್ತಿಗೆ ಆಧಾರದ ಮೇಲೆ ಸೈನಿಕರನ್ನು ನೇಮಿಸಿಕೊಂಡಂತೆ. ಲಕ್ಷಗಟ್ಟಲೆ ಹುದ್ದೆಗಳು ಖಾಲಿ ಇರುವಾಗ ದೇಶದ ಯುವಜನತೆಗೆ ಯಾವುದೇ ರೀತಿಯ ನೆರವು ನೀಡದ ಇಂತಹ ಕಳಪೆ ಯೋಜನೆ ಜಾರಿಗೆ ತರುವುದು ಸರಿಯಲ್ಲ. ಕೂಡಲೇ ಸರಕಾರ ಈ ಪ್ರಸ್ತಾವನೆಯನ್ನು ಹಿಂಪಡೆಯಬೇಕು. ಸೈನಿಕರಾಗಲು ಮತ್ತು ಸಂಬಂಧಪಟ್ಟ ಹುದ್ದೆಯ ಪರೀಕ್ಷೆಗೆ ಹಾಜರಾಗಲು, ಅಭ್ಯರ್ಥಿಗಳು ತರಬೇತಿ ಪಡೆಯುತ್ತಾರೆ. ಕೋಚಿಂಗ್‌ಗಾಗಿ ಹೂಡಿದ ಹಣವನ್ನು ಮರಳಿ ಪಡೆಯುವುದಿಲ್ಲ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


