ರಾಹುಲ್ ಗಾಂಧಿ ವಿರುದ್ಧ ಇಡಿ ಕ್ರಮಕ್ಕೆ ವಿರೋಧ: ದೆಹಲಿಯಲ್ಲಿಂದು 'ಕೈ' ಶಕ್ತಿ ಪ್ರದರ್ಶನ
ಬೆಂಗಳೂರು: ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಕ್ರಮ ಕೈಗೊಂಡಿರುವುದನ್ನು ವಿರೋಧಿಸಿ ರಾಜ್ಯ ಕಾಂಗ್ರೆಸ್ ನಾಯಕರು ನವದೆಹಲಿಯಲ್ಲಿ ಬುಧವಾರ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.

ಬೆಂಗಳೂರು: ಬೆಂಗಳೂರು: ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಕ್ರಮ ಕೈಗೊಂಡಿರುವುದನ್ನು ವಿರೋಧಿಸಿ ರಾಜ್ಯ ಕಾಂಗ್ರೆಸ್ ನಾಯಕರು ನವದೆಹಲಿಯಲ್ಲಿ ಬುಧವಾರ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.
ದೆಹಲಿಯ ಜಂತರ್ ಮಂತರ್ ಬಳಿ ಕಾಂಗ್ರೆಸ್ ಬೃಹತ್ ಪ್ರತಿಭಟನೆಯನ್ನು ಆಯೋಜಿಸಿದ್ದು, ಈ ಪ್ರತಿಭಟನೆಯಲ್ಲಿ ರಾಜ್ಯದ ಕಾಂಗ್ರೆಸ್ ಹಾಗೂ ಇತರೆ ರಾಜ್ಯಗಳ ತನ್ನ ಸಂಸದರು, ಶಾಸಕರು, ಜನಪ್ರತಿನಿಧಿಗಳು ನಾಯಕರು ಪಾಲ್ಗೊಳ್ಳಲಿದ್ದಾರೆ.
ರಾಷ್ಟ್ರ ರಾಜಧಾನಿಯಲ್ಲಿ ಮಂಗಳವಾರ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮಾತನಾಡಿ, ಬಿಜೆಪಿಯವರು ಸುಳ್ಳು ಪ್ರಕರಣಗಳನ್ನು ದಾಖಲಿಸುವ ಮೂಲಕ ನಾಯಕರ ಧ್ವನಿಯನ್ನು ಅಡಗಿಸಲು ಪ್ರಯತ್ನಿಸುತ್ತಿದ್ದಾರೆ, ಆದರೆ, ಅದು ಕೆಲಸ ಮಾಡುವುದಿಲ್ಲ. ಅವರು ನಮ್ಮ ನಾಯಕರಿಗೆ ಕಿರುಕುಳ ನೀಡುತ್ತಿದ್ದಾರೆ. ಒಂದು ರೂಪಾಯಿಯೂ ದುರುಪಯೋಗವಾಗಿಲ್ಲ ಎಂದು ಹೇಳಿದರು.
ನಮಗೆ ನಮ್ಮ ಪಕ್ಷದ ಕಚೇರಿ ಪೂಜಾ ಸ್ಥಳ, ಆದರೆ, ಪೊಲೀಸರು ನಮ್ಮನ್ನು ನಮ್ಮ ಕಚೇರಿಗೆ ತಲುಪದಂತೆ ತಡೆಯುತ್ತಿದ್ದಾರೆ. ನಾವು ಪ್ರತಿಭಟಿಸಲು ಬಂದಿದ್ದೇವೆ. ಪರಿಸ್ಥಿತಿ ಬದಲಾಗಲಿದೆ, ಇದನ್ನು ಬಿಜೆಪಿ ನಾಯಕರು ಅರಿತುಕೊಳ್ಳಬೇಕು. ದೆಹಲಿಯಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ವೇಳೆ ಸಂಸದ ಡಿಕೆ ಸುರೇಶ್ ಮತ್ತು ಕಾಂಗ್ರೆಸ್ ಯುವ ಅಧ್ಯಕ್ಷ ಬಿವಿ ಶ್ರೀನಿವಾಸ್ ಅವರಿಗೆ ಪೊಲೀಸರು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದರು.
ಇದೇ ವೇಳೆ ಇಡಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಶಿವಕುಮಾರ್, ರಾಹುಲ್ ಗಾಂಧಿಯನ್ನು 40 ಗಂಟೆಗಳ ಕಾಲ ಏಕೆ ಪ್ರಶ್ನಿಸಲಾಗಿದೆ ಎಂದು ತಿಳಿಯಬೇಕಿದೆ. ಸೋನಿಯಾ ಗಾಂಧಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಗುರುವಾರ ಇಡಿ ಕಚೇರಿಗೆ ಬರುವಂತೆ ತಿಳಿಸಲಾಗಿದೆ. ನಮಗೆ ಭಯವಿಲ್ಲ. ಆದರೆ, ಇಡಿ ಅಧಿಕಾರಿಗಳು ಮತ್ತು ಕೇಂದ್ರ ಸರ್ಕಾರ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದೆನಿಸುತ್ತಿದೆ ಎಂದು ಹೇಳಿದರು.
ಈ ನಡುವೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ಸಂಜೆ ಬೆಂಗಳೂರಿನಿಂದ ಹೊರಟು ರಾತ್ರಿ ದೆಹಲಿ ತಲುಪಿದ್ದು, ಇಂದು ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


