'ಮಹಾ' ರಾಜಕೀಯ ಬಿಕ್ಕಟ್ಟು, ರಾಷ್ಟ್ರಪತಿ ಚುನಾವಣೆ: ವರಿಷ್ಠರ ಭೇಟಿ ಸಾಧ್ಯವಾಗದೆ ಸಿಎಂ ಬೊಮ್ಮಾಯಿ ವಾಪಸ್
ಪಕ್ಷದ ವರಿಷ್ಠರು ರಾಷ್ಟ್ರಪತಿ ಚುನಾವಣೆಯ ನಾಮಪತ್ರ ಸಲ್ಲಿಕೆಯ ವಿಚಾರದಲ್ಲಿ ತಲ್ಲೀನರಾಗಿದ್ದಾರೆ. ಹೀಗಾಗಿ, ಸಚಿವ ಸಂಪುಟ ವಿಸ್ತರಣೆ ಸಂಬಂಧ ವರಿಷ್ಠರನ್ಮು ಭೇಟಿಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.

ದೆಹಲಿ: ಪಕ್ಷದ ವರಿಷ್ಠರು ರಾಷ್ಟ್ರಪತಿ ಚುನಾವಣೆಯ ನಾಮಪತ್ರ ಸಲ್ಲಿಕೆಯ ವಿಚಾರದಲ್ಲಿ ತಲ್ಲೀನರಾಗಿದ್ದಾರೆ. ಹೀಗಾಗಿ, ಸಚಿವ ಸಂಪುಟ ವಿಸ್ತರಣೆ ಸಂಬಂಧ ವರಿಷ್ಠರನ್ಮು ಭೇಟಿಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.
ನವದೆಹಲಿಯಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ರಾಷ್ಟ್ರಪತಿ ಚುನಾವಣೆಗೆ ನಮ್ಮ ಪಕ್ಷದ ಅಭ್ಯರ್ಥಿಗೆ ಸೂಚಕರಾಗಿ ಸಹಿ ಹಾಕಲು ಪಕ್ಷದ ಎಲ್ಲ ಮುಖ್ಯಮಂತ್ರಿಗಳಿಗೆ ಸೂಚಿಸಿದ್ದಾರೆ. ಆ ಕೆಲಸಕ್ಕೆ ಬಂದಿದ್ದೇನೆ. ಜತೆಗೆ ಯಾವುದೇ ಕೇಂದ್ರ ಸಚಿವರನ್ನು ಭೇಟಿ ಮಾಡುವುದಿಲ್ಲ ಎಂದರು.
ಸಚಿವ ಸಂಪುಟ ವಿಸ್ತರಣೆಗೆ ಕಾಲ ಕೂಡಿ ಬಂದಾಗ ನಾನೇ ಅದನ್ನು ಅಧಿಕೃತವಾಗಿ ಹೇಳುತ್ತೇನೆ ಎಂದರು ಕೇಂದ್ರದ ಬಿಜೆಪಿ ನಾಯಕರು ಮಹಾರಾಷ್ಟ್ರ ವಿದ್ಯಮಾನಗಳ ಬಗ್ಗೆ ಬ್ಯುಸಿ ಇರುವ ಕಾರಣ ಯಾರನ್ನೂ ಭೇಟಿ ಮಾಡಲಿಲ್ಲ ಎಂದು ತಿಳಿದು ಬಂದಿದೆ.
'ನಾನು ಪ್ರತಿ ಬಾರಿ ದೆಹಲಿಗೆ ಭೇಟಿ ನೀಡುವ ಸಂದರ್ಭದಲ್ಲಿ ಈ ರೀತಿ ಮಾಧ್ಯಮಗಳಲ್ಲಿ ಸುದ್ದಿ ಬಂದಿರುತ್ತದೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ನಾನಾಗಿ ಅಧಿಕೃತವಾಗಿ ಹೇಳುವವರೆಗೆ ಏನೂ ಇರುವುದಿಲ್ಲ. ಪಕ್ಷದ ವರಿಷ್ಠರನ್ನು ಭೇಟಿಯಾಗಿಲ್ಲ' ಎಂದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ರಾಜ್ಯಕ್ಕೆ ಭೇಟಿ ನೀಡಿದ್ದರು. "ಪಕ್ಷದ ಹೈಕಮಾಂಡ್ ರಾಷ್ಟ್ರಪತಿ ಚುನಾವಣೆಯಲ್ಲಿ ನಿರತವಾಗಿರುವುದರಿಂದ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲು ಇದು ಒಂದು ಸಂದರ್ಭವಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


