ರಾಜಕೀಯ

ಪಕ್ಷ ವಿರೋಧಿ ಚಟುವಟಿಕೆ: ಎಂ ಆರ್ ಸೀತಾರಾಮ್ ವಿರುದ್ಧ ಶಿಸ್ತು ಕ್ರಮ ಮುಂದೂಡಿದ ರೆಹಮಾನ್ ಖಾನ್

ವಿಧಾನಪರಿಷತ್‌ ಟಿಕೆಟ್‌ ತಪ್ಪಿದ ಬಗ್ಗೆ ಆಪ್ತರ ಸಭೆ ನಡೆಸಿ ಬಹಿರಂಗವಾಗಿ ರಾಜ್ಯ ಕಾಂಗ್ರೆಸ್‌ ನಾಯಕತ್ವ ವಿರುದ್ಧ ಅಸಮಾಧಾನ ಹೊರ ಹಾಕಿದ ಮಾಜಿ ಸಚಿವ ಎಂ.ಆರ್‌.ಸೀತಾರಾಂ ಅವರಿಗೆ ನೋಟಿಸ್‌ ನೀಡುವ ನಿರ್ಧಾರವನ್ನು ಮುಂದೂಡಲಾಗಿದೆ.

ಪಕ್ಷ ವಿರೋಧಿ ಚಟುವಟಿಕೆ: ಎಂ ಆರ್ ಸೀತಾರಾಮ್ ವಿರುದ್ಧ ಶಿಸ್ತು ಕ್ರಮ ಮುಂದೂಡಿದ ರೆಹಮಾನ್ ಖಾನ್
ಎಂ.ಆರ್ ಸೀತಾರಾಮ್
Published On :

ಬೆಂಗಳೂರು: ವಿಧಾನಪರಿಷತ್‌ ಟಿಕೆಟ್‌ ತಪ್ಪಿದ ಬಗ್ಗೆ ಆಪ್ತರ ಸಭೆ ನಡೆಸಿ ಬಹಿರಂಗವಾಗಿ ರಾಜ್ಯ ಕಾಂಗ್ರೆಸ್‌ ನಾಯಕತ್ವ ವಿರುದ್ಧ ಅಸಮಾಧಾನ ಹೊರ ಹಾಕಿದ ಮಾಜಿ ಸಚಿವ ಎಂ.ಆರ್‌.ಸೀತಾರಾಂ ಅವರಿಗೆ ನೋಟಿಸ್‌ ನೀಡುವ ನಿರ್ಧಾರವನ್ನು ಮುಂದೂಡಲಾಗಿದೆ.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಬ್ಬರೂ ದೆಹಲಿಯಲ್ಲಿರುವ ಹಿನ್ನೆಲೆಯಲ್ಲಿ ಕೇಂದ್ರದ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಅವರು ಎಂ.ಆರ್.ಸೀತಾರಾಮ್ ಅವರಿಗೆ ನೋಟಿಸ್ ಜಾರಿ ಮಾಡುವ ನಿರ್ಧಾರವನ್ನು ಮುಂದೂಡಿದ್ದಾರೆ.

ಜುಲೈ 1 ರಂದು ಜಾರಿ ನಿರ್ದೇಶನಾಲಯದ ಸಮನ್ಸ್‌ಗೆ ಹಾಜರಾದ ನಂತರವೇ ಶಿವಕುಮಾರ್ ಬೆಂಗಳೂರಿಗೆ ಮರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪಕ್ಷದ ಅಧ್ಯಕ್ಷರು ರಾಜ್ಯದಿಂದ ಹೊರಗಿರುವುದರಿಂದ, ಅವರ ಅನುಪಸ್ಥಿತಿಯಲ್ಲಿ ನಾನು ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಖಾನ್ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

ಗುರುವಾರ  ದೆಹಲಿಯಿಂದ ಹಿಂದಿರುಗಲಿರುವ ಸಿದ್ದರಾಮಯ್ಯ, ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ಆತುರದಿಂದ ನಿರ್ಧಾರ ಕೈಗೊಳ್ಳದಂತೆ ಮನವೊಲಿಸಲು ಸೀತಾರಾಮ್ ಅವರನ್ನು ಭೇಟಿ ಮಾಡುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.