ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದೌರ್ಜನ್ಯ: ಸಚಿವ ಸಿಸಿ ಪಾಟೀಲ್ ವಿರುದ್ಧ ಪೊಲೀಸರಿಗೆ ದೂರು
ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ವಿರುದ್ಧ ಗೂಂಡಾಗಿರಿ ಆರೋಪ ಕೇಳಿಬಂದಿದೆ. ಕಾಂಗ್ರೆಸ್ ಕಾರ್ಯಕರ್ತ ಪ್ರವೀಣ್ ಅವರ ಮೇಲೆ ದೌರ್ಜನ್ಯವೆಸಗಿದ ಆರೋಪದಲ್ಲಿ ಸಚಿವರ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ.

ನರಗುಂದ: ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ವಿರುದ್ಧ ಗೂಂಡಾಗಿರಿ ಆರೋಪ ಕೇಳಿಬಂದಿದೆ. ಕಾಂಗ್ರೆಸ್ ಕಾರ್ಯಕರ್ತ ಪ್ರವೀಣ್ ಅವರ ಮೇಲೆ ದೌರ್ಜನ್ಯವೆಸಗಿದ ಆರೋಪದಲ್ಲಿ ಸಚಿವರ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಸಚಿವ ಸಿಸಿ ಪಾಟೀಲ್ ಗೂಂಡಾಗಿರಿ ನಡೆಸಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ. ಬಿಜೆಪಿಗರ ಅಧಿಕಾರ ಮದಕ್ಕೆ, ದೌರ್ಜನ್ಯಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಜಗ್ಗುವುದಿಲ್ಲ, ಕಾರ್ಯಕರ್ತರೊಂದಿಗೆ ಪಕ್ಷ ಬೆಂಬಲಕ್ಕಿದೆ ಎಂದು ಹೇಳಿದೆ.
ಮತ್ತೊಂದು ಟ್ವೀಟ್ ನಲ್ಲಿ ಸಿಎಂ ಬೊಮ್ಮಾಯಿ ಅವರ ಅಸಾಮರ್ಥ್ಯವನ್ನು ಎತ್ತಿ ತೋರಿಸಲು ಸಚಿವ ಶ್ರೀರಾಮುಲು ಅವರು ಬಳ್ಳಾರಿ ವೇದಾವತಿ ನದಿ ಬಳಿ ಪ್ರತಿಭಟನೆ ಕುಳಿತಿದ್ದಾರೆ. ಅಧಿಕಾರಿಗಳು ಸಿಎಂ ಮಾತು ಕೇಳುವುದಿಲ್ಲ, ಸಚಿವರಿಗೂ, ಸಿಎಂಗೂ ಹಾಗೂ ಅಧಿಕಾರಿಗಳ ಮದ್ಯ ಸಮನ್ವಯತೆ ಇಲ್ಲ, ಇವರ ಧರಣಿ ಸರ್ಕಾರದ ಅಯೋಗ್ಯತನಕ್ಕೆ ಹಿಡಿದ ಕನ್ನಡಿ ಎಂದು ಟೀಕಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


