ಕಾಂಗ್ರೆಸ್ ಮಾಜಿ ಸಂಸದ ಮುದ್ದಹನುಮೇಗೌಡ ಇಂದು ಬಿಜೆಪಿ ಸೇರ್ಪಡೆ
ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ತುಮಕೂರಿನ ಮಾಜಿ ಸಂಸದ ಎಸ್ ಪಿ ಮುದ್ದಹನುಮೇಗೌಡ ಇಂದು ಕಾಂಗ್ರೆಸ್ ತೊರೆದು ಆಡಳಿತಾರೂಢ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ.

ಬೆಂಗಳೂರು: ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ತುಮಕೂರಿನ ಮಾಜಿ ಸಂಸದ ಎಸ್ ಪಿ ಮುದ್ದಹನುಮೇಗೌಡ ಇಂದು ಕಾಂಗ್ರೆಸ್ ತೊರೆದು ಆಡಳಿತಾರೂಢ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ.
ಕಾಂಗ್ರೆಸ್ ಪಕ್ಷ ತೊರೆದಿರುವ ಮಾಜಿ ಸಂಸದ ಮುದ್ದಹನುಮೇಗೌಡ ಇಂದು ಅಧಿಕೃತವಾಗಿ ಭಾರತೀಯ ಜನತಾ ಪಕ್ಷ ಸೇರ್ಪಡೆಯಾಗಲಿದ್ದಾರೆ. ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಮಾಧುಸ್ವಾಮಿ ಸಮ್ಮುಖದಲ್ಲಿ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ. ಬಿಜೆಪಿ ನಾಯಕರು ಕುಣಿಗಲ್ ವಿಧಾನಸಭಾ ಕ್ಷೇತ್ರಕ್ಕೆ ಟಿಕೆಟ್ ನೀಡುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂಬ ಮಾಹಿತಿ ದೊರೆತಿದೆ.
ಇನ್ನೂ ಬಿಜೆಪಿ ಸೇರಲು ತಾವು ಯಾವುದೇ ಷರತ್ತು ವಿಧಿಸಿಲ್ಲ. ಮೊದಲು ಕಾಂಗ್ರೆಸ್‌ನಲ್ಲಿದ್ದ ಮುದ್ದಹನುಮೇಗೌಡ ನಂತರ ರಾಜಕೀಯ ಕಾರಣಗಳಿಂದಾಗಿ ಜೆಡಿಎಸ್ ಸೇರಿದ್ದರು. ಬದಲಾದ ಸನ್ನಿವೇಶದಲ್ಲಿ ಕಾಂಗ್ರೆಸ್‌ಗೆ ಮರಳಿದ್ದರು.
ಕಳೆದ ಬಾರಿ ನಡೆದ ಲೋಕಸಭೆ ಚುನಾವಣೆಯಲ್ಲಿ ತುಮಕೂರು ಕ್ಷೇತ್ರವನ್ನು ಮೈತ್ರಿ ಪಕ್ಷವಾದ ಜೆಡಿಎಸ್‌ಗೆ ಬಿಟ್ಟು ಕೊಟ್ಟಿದ್ದರಿಂದ ಮುದ್ದಹನುಮೇಗೌಡ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ. ಮುದ್ದಹನುಮೇಗೌಡ ಕಾಂಗ್ರೆಸ್ ನಿಂದ ದೂರ ಉಳಿದಿದ್ದು, ದೇವೇಗೌಡರನ್ನು ಸೋಲಿಸಲು ಕಾಂಗ್ರೆಸ್ ನ ಮಾಜಿ ಶಾಸಕ ಕೆ.ಎನ್ .ರಾಜಣ್ಣ ಜತೆ ಕೈ ಜೋಡಿಸಿದ್ದರು ಎಂಬ ಆರೋಪವೂ ಕೇಳಿ ಬಂದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


