ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಕುರ್ಚಿಗಳು ಖಾಲಿ ಖಾಲಿ; ವಿಡಿಯೋ ಹಂಚಿಕೊಂಡು ಬಿಜೆಪಿ ಟೀಕಿಸಿದ ಕಾಂಗ್ರೆಸ್
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿನ್ನೆ 108 ಅಡಿ ಎತ್ತರದ ಭವ್ಯ ಕೆಂಪೇಗೌಡ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಜನರನ್ನುದ್ದೇಶಿಸಿ ಮಾತನಾಡಿದ್ದ ಕಾರ್ಯಕ್ರಮದ ವಿಡಿಯೋವೊಂದನ್ನು ಹಂಚಿಕೊಳ್ಳುವ ಮೂಲಕ ಕಾಂಗ್ರೆಸ್ ಬಿಜೆಪಿ ಕಾರ್ಯಕ್ರಮಕ್ಕೆ ಜನ ಸೇರುತ್ತಿಲ್ಲ ಎಂದು ಹೇಳಿದೆ.

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿನ್ನೆ 108 ಅಡಿ ಎತ್ತರದ ಭವ್ಯ ಕೆಂಪೇಗೌಡ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಜನರನ್ನುದ್ದೇಶಿಸಿ ಮಾತನಾಡಿದ್ದ ಕಾರ್ಯಕ್ರಮದ ವಿಡಿಯೋವೊಂದನ್ನು ಹಂಚಿಕೊಳ್ಳುವ ಮೂಲಕ ಕಾಂಗ್ರೆಸ್ ಬಿಜೆಪಿ ಕಾರ್ಯಕ್ರಮಕ್ಕೆ ಜನ ಸೇರುತ್ತಿಲ್ಲ ಎಂದು ಹೇಳಿದೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಜನರಿಲ್ಲದೆ ಕುರ್ಚಿಗಳು ಖಾಲಿ ಖಾಲಿಯಾಗಿರುವ ವಿಡಿಯೋ ಹಂಚಿಕೊಂಡಿರುವ ರಾಜ್ಯ ಕಾಂಗ್ರೆಸ್, ಟ್ರಬಲ್ ಎಂಜಿನ್ ಸರ್ಕಾರದ ಮೇಲೆ ಜನಸಾಮಾನ್ಯರಷ್ಚೇ ಅಲ್ಲ, ಸ್ವತಃ ಬಿಜೆಪಿ ಕಾರ್ಯಕರ್ತರೇ ಬೇಸತ್ತಿದ್ದಾರೆ ಎಂದು ಟೀಕಿಸಿದೆ.
ಸ್ವತಃ ಬಿಜೆಪಿ ಕಾರ್ಯಕರ್ತರೇ ಬೇಸತ್ತಿದ್ದಾರೆ! ಜನಸಂಕಟಯಾತ್ರೆಯಲ್ಲಿ ಖಾಲಿ ಕುರ್ಚಿ ದರ್ಶನ ಪಡೆದ ಬಿಜೆಪಿ ಕರ್ನಾಟಕ ಪ್ರಧಾನಿ ಕರೆಸಿ ಚುನಾವಣಾ ತಯಾರಿ ಮಾಡಿದರೂ ಕುರ್ಚಿಗಳು ಖಾಲಿಯಾಗುತ್ತಿವೆ ಎಂದು ಅಣಕಿಸಿದೆ.
ಈ ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿ ನಡೆದ ಬಿಜೆಪಿ ಜನ ಸಂಕಲ್ಪ ಯಾತ್ರೆಯ ಇದೇ ರೀತಿಯ ವಿಡಿಯೋವನ್ನು ಸಹ ಕಾಂಗ್ರೆಸ್ ಹಂಚಿಕೊಳ್ಳುವ ಮೂಲಕ ಬಿಜೆಪಿ ಆಡಳಿತದ ವಿರುದ್ಧ ಜನರು ಬೇಸತ್ತಿರುವುದಾಗಿ ಟೀಕಿಸಿತ್ತು.
ಮತ್ತೊಂದು ಟ್ವೀಟ್ ನಲ್ಲಿ ಬಿಜೆಪಿ ಸರ್ಕಾರ ಬೆಂಗಳೂರನ್ನು ದೇಶದಲ್ಲೇ ಅತ್ಯುತ್ತಮ ಸ್ವಚ್ಛ ನಗರವನ್ನಾಗಿ ಮಾಡುತ್ತೇವೆ ಎಂದಿತ್ತು. ಕೇಂದ್ರದ ಸ್ವಚ್ಛ ಸರ್ವೇಕ್ಷಣ ವರದಿಯಲ್ಲಿ ಕರ್ನಾಟಕ ಕಳಪೆ ಸಾಧನೆ ತೋರಿದೆ, ಬೆಂಗಳೂರು ಸ್ವಚ್ಛವಾಗಿಲ್ಲ ಕಸ ವಿಲೇವಾರಿ ಘಟಕಗಳು ಕಾರ್ಯನಿರ್ವಹಿಸುತ್ತಲೇ ಇಲ್ಲ. ಕೊಟ್ಟ ಮಾತಿಗೆ ವಿರುದ್ಧವಿರುವುದೇಕೆ? ಎಂದು ಪ್ರಶ್ನಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


