ರಾಜಕೀಯ

ಮಂಗಳೂರು ಸ್ಫೋಟ ಪ್ರಕರಣ: ಗೃಹ ಇಲಾಖೆಯ ವೈಫಲ್ಯ ಮತ್ತೊಮ್ಮೆ ಸಾಬೀತು – ವಿಪಕ್ಷ ನಾಯಕ ಸಿದ್ದರಾಮಯ್ಯ

ಮಂಗಳೂರು ನಗರದ ಗರೋಡಿಯಲ್ಲಿ ಶನಿವಾರ ಸಂಭವಿಸಿದ ಸ್ಫೋಟ ಪ್ರಕರಣದಿಂದ ಗೃಹ ಇಲಾಖೆಯ ವೈಫಲ್ಯ ಎತ್ತಿ ತೋರಿಸಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಭಾನುವಾರ ಆರೋಪಿಸಿದ್ದಾರೆ.

ಮಂಗಳೂರು ಸ್ಫೋಟ ಪ್ರಕರಣ: ಗೃಹ ಇಲಾಖೆಯ ವೈಫಲ್ಯ ಮತ್ತೊಮ್ಮೆ ಸಾಬೀತು – ವಿಪಕ್ಷ ನಾಯಕ ಸಿದ್ದರಾಮಯ್ಯ
ಸಿದ್ದರಾಮಯ್ಯ
Published On :

ಬೆಂಗಳೂರು: ಮಂಗಳೂರು ನಗರದ ಗರೋಡಿಯಲ್ಲಿ ಶನಿವಾರ ಸಂಭವಿಸಿದ ಸ್ಫೋಟ ಪ್ರಕರಣದಿಂದ ಗೃಹ ಇಲಾಖೆಯ ವೈಫಲ್ಯ ಎತ್ತಿ ತೋರಿಸಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಭಾನುವಾರ ಆರೋಪಿಸಿದ್ದಾರೆ.

ಪ್ರಕರಣ ಸಂಬಂಧ ಸಾಮಾಜಿಕ ಜಾಲತಾಣ ಟ್ವಿಟರ್'ನಲ್ಲಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ‘ಮಂಗಳೂರಿನಲ್ಲಿ ಸಂಭವಿಸಿರುವ ಸ್ಫೋಟ ಪ್ರಕರಣ ಮತ್ತೊಮ್ಮೆ ರಾಜ್ಯದ ಗುಪ್ತಚರ ವಿಭಾಗ ಮತ್ತು ಗೃಹ ಇಲಾಖೆಯ ವೈಫಲ್ಯವನ್ನು ಎತ್ತಿ ತೋರಿಸಿದೆ. ಈ ಘಟನೆಯ ಬಗ್ಗೆ ಊಹಾಪೋಹಗಳ ಸುದ್ದಿಗಳನ್ನು ನಂಬಿ ಉದ್ರಿಕ್ತರಾಗದೆ ಸಾರ್ವಜನಿಕರು ಸಂಯಮ ಮತ್ತು ಎಚ್ಚರದಿಂದ ಇರಬೇಕೆಂದು ಕೇಳಿಕೊಳ್ಳುತ್ತಿದ್ದೇನೆ’ ಎಂದು ಹೇಳಿದ್ದಾರೆ.

‘ರಾಜ್ಯ ಪೊಲೀಸ್ ಮಹಾನಿರ್ದೇಶಕರೇ ಭಯೋತ್ಪಾದಕ ಕೃತ್ಯ ಎಂದು ದೃಢೀಕರಿಸಿರುವ ಮಂಗಳೂರು ನಗರದ ಸ್ಫೋಟದ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಕಳವಳಕಾರಿಯಾದ ಈ ಘಟನೆಯ ಬಗ್ಗೆ ಪೊಲೀಸರು ತ್ವರಿತಗತಿಯಲ್ಲಿ ತನಿಖೆ ನಡೆಸಿ ದುಷ್ಕರ್ಮಿಗಳನ್ನು ಬಂಧಿಸಿ ಶಿಕ್ಷೆಗೊಳಪಡಿಸಬೇಕು’ ಎಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.